ರಾಜ್ಯದಲ್ಲಿ ಮತಾಂತರ ನಿಷೇಧ ಕಾಯ್ದೆ ಜಾರಿಗೆ ತರುವ ಚಿಂತನೆ : ಸಿಎಂ -Vishwanews24

Featured, ರಾಜ್ಯ ನ್ಯೂಸ್

ರಾಜ್ಯದಲ್ಲಿ ಮತಾಂತರ ನಿಷೇಧ ಕಾಯ್ದೆ ಜಾರಿಗೆ ತರುವ ಚಿಂತನೆ : ಸಿಎಂ -Vishwanews24

ಬೆಂಗಳೂರು :  ಆಸೆ, ಆಮಿಷವೊಡ್ಡಿ ಇಲ್ಲವೇ ಬಲವಂತವಾಗಿ ಮತಾಂತರ ಮಾಡುವುದನ್ನು ತಡೆಗಟ್ಟುವ ಸದುದ್ದೇಶದಿಂದ ರಾಜ್ಯದಲ್ಲಿ ಮತಾಂತರ ನಿಷೇಧ ಕಾಯ್ದೆ ಜಾರಿಗೆ ತರುವ ಚಿಂತನೆಯಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸ್ವ ಇಚ್ಛೆಯಿಂದ ಮಾತ್ರ ಮತಾಂತರವಾಗಲು ಕಾನೂನಿನಲ್ಲಿ ಅವಕಾಶವಿದೆ. ಕೆಲವು ಕಡೆ ಹಣದ ಆಸೆ, ಬೇರೆ ಆಮಿಷಗಳನ್ನು ಒಡ್ಡಿ ಮತಾಂತರಗೊಳಿಸುವ ಪ್ರಕರಣಗಳು ಅಲ್ಲಲ್ಲಿ ನಡೆಯುತ್ತಿವೆ ಎಂಬುದನ್ನು ಸಿಎಂ ಒಪ್ಪಿಕೊಂಡರು.

ಇತ್ತೀಚೆಗೆ ನಾನು ಕಲಬುರಗಿ ಸೇರಿದಂತೆ ಮತ್ತಿತರ ಕಡೆ ಭೇಟಿ ನೀಡಿದಾಗ ಕೆಲವು ಕಡೆ ಮತಾಂತರವಾಗುತ್ತಿವೆ ಎಂಬ ಆರೋಪಗಳು ಕೇಳಿಬಂದಿವೆ. ಬಲವಂತವಾಗಿ ಮತಾಂತರವಾಗುವುದನ್ನು ತಡೆಗಟ್ಟಲು ಜಿಲ್ಲಾಕಾರಿಗಳಿಗೆ ಸೂಚನೆ ಕೊಟ್ಟಿದ್ದೇನೆ ಎಂದು ಹೇಳಿದರು.

ರಾಜ್ಯದಲ್ಲಿ ಇದು ಪದೇ ಪದೇ ಕೇಳಿ ಬರುತ್ತಲೇ ಇದೆ. ಇದಕ್ಕೆ ಶಾಶ್ವತವಾಗಿ ಕಡಿವಾಣ ಹಾಕುವ ಅಗತ್ಯವಿರುವುದರಿಂದ ಮತಾಂತರ ನಿಷೇಧ ಕಾಯ್ದೆ ಜಾರಿಗೆ ತರುವ ಚಿಂತನೆಯಿದೆ ಎಂದು ತಿಳಿಸಿದರು.