ಬೆಂಗಳೂರು : ಆಸೆ, ಆಮಿಷವೊಡ್ಡಿ ಇಲ್ಲವೇ ಬಲವಂತವಾಗಿ ಮತಾಂತರ ಮಾಡುವುದನ್ನು ತಡೆಗಟ್ಟುವ ಸದುದ್ದೇಶದಿಂದ ರಾಜ್ಯದಲ್ಲಿ ಮತಾಂತರ ನಿಷೇಧ ಕಾಯ್ದೆ ಜಾರಿಗೆ ತರುವ ಚಿಂತನೆಯಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸ್ವ ಇಚ್ಛೆಯಿಂದ ಮಾತ್ರ ಮತಾಂತರವಾಗಲು ಕಾನೂನಿನಲ್ಲಿ ಅವಕಾಶವಿದೆ. ಕೆಲವು ಕಡೆ ಹಣದ ಆಸೆ, ಬೇರೆ ಆಮಿಷಗಳನ್ನು ಒಡ್ಡಿ ಮತಾಂತರಗೊಳಿಸುವ ಪ್ರಕರಣಗಳು ಅಲ್ಲಲ್ಲಿ ನಡೆಯುತ್ತಿವೆ ಎಂಬುದನ್ನು ಸಿಎಂ ಒಪ್ಪಿಕೊಂಡರು.
ಇತ್ತೀಚೆಗೆ ನಾನು ಕಲಬುರಗಿ ಸೇರಿದಂತೆ ಮತ್ತಿತರ ಕಡೆ ಭೇಟಿ ನೀಡಿದಾಗ ಕೆಲವು ಕಡೆ ಮತಾಂತರವಾಗುತ್ತಿವೆ ಎಂಬ ಆರೋಪಗಳು ಕೇಳಿಬಂದಿವೆ. ಬಲವಂತವಾಗಿ ಮತಾಂತರವಾಗುವುದನ್ನು ತಡೆಗಟ್ಟಲು ಜಿಲ್ಲಾಕಾರಿಗಳಿಗೆ ಸೂಚನೆ ಕೊಟ್ಟಿದ್ದೇನೆ ಎಂದು ಹೇಳಿದರು.
ರಾಜ್ಯದಲ್ಲಿ ಇದು ಪದೇ ಪದೇ ಕೇಳಿ ಬರುತ್ತಲೇ ಇದೆ. ಇದಕ್ಕೆ ಶಾಶ್ವತವಾಗಿ ಕಡಿವಾಣ ಹಾಕುವ ಅಗತ್ಯವಿರುವುದರಿಂದ ಮತಾಂತರ ನಿಷೇಧ ಕಾಯ್ದೆ ಜಾರಿಗೆ ತರುವ ಚಿಂತನೆಯಿದೆ ಎಂದು ತಿಳಿಸಿದರು.
ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…
ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…
ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…
ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…
ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…
ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…