ಬೆಂಗಳೂರು : ಪ್ರವಾಹಪೀಡಿತ ಕೇರಳದಲ್ಲಿ ಇಲಿಜ್ವರದಿಂದ 30ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿರುವ ವೇಳೆ ಇತ್ತ ನಮ್ಮ ರಾಜ್ಯದಲ್ಲೂ ಕಳೆದ ಜನವರಿಯಿಂದ ಈವರೆಗೆ ಒಟ್ಟಾರೆ 136 ಇಲಿ ಜ್ವರ ಪ್ರಕರಣಗಳು ಪತ್ತೆಯಾಗಿವೆ. ಯಾವುದೇ ಸಾವು ಸಂಭವಿಸಿಲ್ಲ ಎಂದು ಆರೋಗ್ಯ ಇಲಾಖೆ ಖಚಿತಪಡಿಸಿದೆ.
ಕರಾವಳಿ ಪ್ರದೇಶಗಳಾದ ಉಡುಪಿ, ದಕ್ಷಿಣ ಕನ್ನಡ ಜಿಲ್ಲೆ, ಮಲೆನಾಡು ಭಾಗದ ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಹೆಚ್ಚಿನ ಪ್ರಕರಣಗಳು ಪತ್ತೆಯಾಗಿವೆ. ಸಾಮಾನ್ಯವಾಗಿ ಮಳೆಗಾಲದಲ್ಲಿ ಇಲಿ ಜ್ವರ ಪ್ರಕರಣಗಳು ಕಂಡು ಬರಲಿವೆ. ಕಳೆದ ವರ್ಷ ಇದೇ ಅವಧಿಯಲ್ಲಿ 187 ಪ್ರಕರಣಗಳು ಕಂಡು ಬಂದಿದ್ದವು. ಕಳೆದ ವರ್ಷಕ್ಕೆ ಹೋಲಿಸಿಕೊಂಡಲ್ಲಿ ಈ ವರ್ಷ ಕಡಿಮೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಡಾ. ಬಿ.ಜಿ. ಪ್ರಕಾಶ್‌ಕುಮಾರ್ ತಿಳಿಸಿದ್ದಾರೆ.
ಇಲಿ ಜ್ವರವು ಬ್ಯಾಕ್ಟೀರಿಯಾಗಳ ಮೂಲಕ ಹರಡಲಿದ್ದು, ಕಾಯಿಲೆ ವೈರಲ್ ಆಗುವುದಿಲ್ಲ. ಸೂಕ್ತ ಚಿಕಿತ್ಸೆ ಇರುವುದರಿಂದ ಜನರು ಗಾಬರಿಯಾಗುವ ಅವಶ್ಯವಿಲ್ಲ. ಆದರೆ, ಮಳೆಗಾಲವಾಗಿರುವ ಕಾರಣ ಮನೆಯ ಸುತ್ತಮುತ್ತಲ ಪ್ರದೇಶಗಳನ್ನು ಸ್ವಚ್ಛವಾಗಿಟ್ಟುಕೊಳ್ಳಬೇಕು. ಕುಡಿಯುವ ನೀರಿನ ಪಾತ್ರೆಗಳು ಮತ್ತು ಆಹಾರ ಪದಾರ್ಥಗಳ ಪಾತ್ರೆಗಳನ್ನು ಮುಚ್ಚಿಡುವ ಮೂಲಕ ಎಚ್ಚರಿಕೆ ವಹಿಸಬೇಕು ಎಂದು ಸಲಹೆ ನೀಡಿದ್ದಾರೆ.
ಇಲಿ, ಹೆಗ್ಗಣಗಳ ಮಲ-ಮೂತ್ರಗಳು ಮಿಶ್ರಣವಾಗಿರುವ ನೀರು ಮತ್ತು ಮಣ್ಣನ್ನು ಮನುಷ್ಯರು ಬರಿಗಾಲಲ್ಲಿ ತುಳಿಯುವುದರಿಂದ ಕಾಯಿಲೆ ಹರಡುವ ಸಾಧ್ಯತೆಗಳಿವೆ. ಕಾಲಿನಲ್ಲಿ ಗಾಯವಾಗಿರುವ ಮತ್ತು ಚರ್ಮ ಒಡೆದಿರುವವರಿಗೆ ಹೆಚ್ಚಿನದಾಗಿ ಕಾಣಿಸಿಕೊಳ್ಳಲಿವೆ. ಕೃಷಿ ಕಾರ್ಮಿಕರು ಸ್ವಲ್ಪ ಎಚ್ಚರಿಕೆ ವಹಿಸಬೇಕು ಎಂದು ತಿಳಿಸಿದ್ದಾರೆ.
ಲಕ್ಷಣಗಳು: ಜ್ವರ, ಮೈ ಕೈ ನೋವು, ತಲೆ ನೋವು, ರಕ್ತಸ್ರಾವ, ಜಾಂಡೀಸ್, ಉಸಿರಾಟದ ತೊಂದರೆಗಳು ಕಂಡುಬರುವುದು ರೋಗದ ಲಕ್ಷಣವಾಗಿದೆ. ಇಂತಹ ರೋಗಿಗಳ ರಕ್ತದ ಮಾದರಿ ಸಂಗ್ರಹಿಸಿ ರೋಗ ಪತ್ತೆ ಹಚ್ಚಲಾಗುತ್ತಿದೆ ಎಂದು ಡಾ. ಬಿ.ಜಿ. ಪ್ರಕಾಶ್ ಕುಮಾರ್ ತಿಳಿಸಿದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…