Featured

ರಾಜ್ಯದಲ್ಲಿ ಮತ್ತೊಂದು ಕಾಯಿಲೆ ಭೀತಿ : ಇಂತಹ ಲಕ್ಷಣ ಕಂಡು ಬಂದಲ್ಲಿ ಎಚ್ಚರ..!

ಬೆಂಗಳೂರು : ಪ್ರವಾಹಪೀಡಿತ ಕೇರಳದಲ್ಲಿ ಇಲಿಜ್ವರದಿಂದ 30ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿರುವ ವೇಳೆ ಇತ್ತ ನಮ್ಮ ರಾಜ್ಯದಲ್ಲೂ ಕಳೆದ ಜನವರಿಯಿಂದ ಈವರೆಗೆ ಒಟ್ಟಾರೆ 136 ಇಲಿ ಜ್ವರ ಪ್ರಕರಣಗಳು ಪತ್ತೆಯಾಗಿವೆ. ಯಾವುದೇ ಸಾವು ಸಂಭವಿಸಿಲ್ಲ ಎಂದು ಆರೋಗ್ಯ ಇಲಾಖೆ ಖಚಿತಪಡಿಸಿದೆ.

ಕರಾವಳಿ ಪ್ರದೇಶಗಳಾದ ಉಡುಪಿ, ದಕ್ಷಿಣ ಕನ್ನಡ ಜಿಲ್ಲೆ, ಮಲೆನಾಡು ಭಾಗದ ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಹೆಚ್ಚಿನ ಪ್ರಕರಣಗಳು ಪತ್ತೆಯಾಗಿವೆ. ಸಾಮಾನ್ಯವಾಗಿ ಮಳೆಗಾಲದಲ್ಲಿ ಇಲಿ ಜ್ವರ ಪ್ರಕರಣಗಳು ಕಂಡು ಬರಲಿವೆ. ಕಳೆದ ವರ್ಷ ಇದೇ ಅವಧಿಯಲ್ಲಿ 187 ಪ್ರಕರಣಗಳು ಕಂಡು ಬಂದಿದ್ದವು. ಕಳೆದ ವರ್ಷಕ್ಕೆ ಹೋಲಿಸಿಕೊಂಡಲ್ಲಿ ಈ ವರ್ಷ ಕಡಿಮೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಡಾ. ಬಿ.ಜಿ. ಪ್ರಕಾಶ್‌ಕುಮಾರ್‌ ತಿಳಿಸಿದ್ದಾರೆ.

ಇಲಿ ಜ್ವರವು ಬ್ಯಾಕ್ಟೀರಿಯಾಗಳ ಮೂಲಕ ಹರಡಲಿದ್ದು, ಕಾಯಿಲೆ ವೈರಲ್‌ ಆಗುವುದಿಲ್ಲ. ಸೂಕ್ತ ಚಿಕಿತ್ಸೆ ಇರುವುದರಿಂದ ಜನರು ಗಾಬರಿಯಾಗುವ ಅವಶ್ಯವಿಲ್ಲ. ಆದರೆ, ಮಳೆಗಾಲವಾಗಿರುವ ಕಾರಣ ಮನೆಯ ಸುತ್ತಮುತ್ತಲ ಪ್ರದೇಶಗಳನ್ನು ಸ್ವಚ್ಛವಾಗಿಟ್ಟುಕೊಳ್ಳಬೇಕು. ಕುಡಿಯುವ ನೀರಿನ ಪಾತ್ರೆಗಳು ಮತ್ತು ಆಹಾರ ಪದಾರ್ಥಗಳ ಪಾತ್ರೆಗಳನ್ನು ಮುಚ್ಚಿಡುವ ಮೂಲಕ ಎಚ್ಚರಿಕೆ ವಹಿಸಬೇಕು ಎಂದು ಸಲಹೆ ನೀಡಿದ್ದಾರೆ.

ಇಲಿ, ಹೆಗ್ಗಣಗಳ ಮಲ-ಮೂತ್ರಗಳು ಮಿಶ್ರಣವಾಗಿರುವ ನೀರು ಮತ್ತು ಮಣ್ಣನ್ನು ಮನುಷ್ಯರು ಬರಿಗಾಲಲ್ಲಿ ತುಳಿಯುವುದರಿಂದ ಕಾಯಿಲೆ ಹರಡುವ ಸಾಧ್ಯತೆಗಳಿವೆ. ಕಾಲಿನಲ್ಲಿ ಗಾಯವಾಗಿರುವ ಮತ್ತು ಚರ್ಮ ಒಡೆದಿರುವವರಿಗೆ ಹೆಚ್ಚಿನದಾಗಿ ಕಾಣಿಸಿಕೊಳ್ಳಲಿವೆ. ಕೃಷಿ ಕಾರ್ಮಿಕರು ಸ್ವಲ್ಪ ಎಚ್ಚರಿಕೆ ವಹಿಸಬೇಕು ಎಂದು ತಿಳಿಸಿದ್ದಾರೆ.

ಲಕ್ಷಣಗಳು: ಜ್ವರ, ಮೈ ಕೈ ನೋವು, ತಲೆ ನೋವು, ರಕ್ತಸ್ರಾವ, ಜಾಂಡೀಸ್‌, ಉಸಿರಾಟದ ತೊಂದರೆಗಳು ಕಂಡುಬರುವುದು ರೋಗದ ಲಕ್ಷಣವಾಗಿದೆ. ಇಂತಹ ರೋಗಿಗಳ ರಕ್ತದ ಮಾದರಿ ಸಂಗ್ರಹಿಸಿ ರೋಗ ಪತ್ತೆ ಹಚ್ಚಲಾಗುತ್ತಿದೆ ಎಂದು ಡಾ. ಬಿ.ಜಿ. ಪ್ರಕಾಶ್‌ ಕುಮಾರ್‌ ತಿಳಿಸಿದರು.

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

2 days ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

2 days ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

2 days ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

2 days ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

2 days ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

2 days ago