Featured

ರಾಜ್ಯದಲ್ಲಿ ಮತ್ತೊಂದು ಭ್ರೂಣಲಿಂಗ ಪ್ರಕರಣ : ಸರ್ಕಾರಿ ಆಸ್ಪತ್ರೆ ಕ್ವಾರ್ಟಸ್ ನಲ್ಲೇ  ನಡೆಯುತ್ತಿದ್ದ ಅಕ್ರಮ ದಂಧೆ  – Vishwanews24

ರಾಜ್ಯದಲ್ಲಿ ಮತ್ತೊಂದು ಭ್ರೂಣಲಿಂಗ ಪ್ರಕರಣ ; ಸರ್ಕಾರಿ ಆಸ್ಪತ್ರೆ ಕ್ವಾರ್ಟಸ್ ನಲ್ಲೇ  ನಡೆಯುತ್ತಿದ್ದ ಅಕ್ರಮ ದಂಧೆ

ಪಾಂಡವಪುರ : ಕಳೆದ ಅಕ್ಟೋಬರ್ ನಲ್ಲಿ ಮಂಡ್ಯ ತಾಲೂಕಿನ ಆಲೆಮನೆಯೊಂದರಲ್ಲಿ ಅಕ್ರಮವಾಗಿ ನಡೆಸಲಾಗುತ್ತಿದ್ದ ಭ್ರೂಣಲಿಂಗ ಪತ್ತೆ ದಂಧೆ ಬೆಳಕಿಗೆ ಬಂದ ಕೆಲವೇ ತಿಂಗಳಲ್ಲಿ ಪಾಂಡವಪುರದಲ್ಲಿ ಅಂಥದ್ದೇ ಪ್ರಕರಣ ಬೆಳಕಿಗೆ ಬಂದಿದೆ.ಪಾಂಡವಪುರದ ಸರ್ಕಾರಿ ಆಸ್ಪತ್ರೆಯ ಕ್ವಾರ್ಟಸ್ ನಲ್ಲಿಯೇ ಕಾನೂನು ಬಾಹಿರವಾಗಿ ಭ್ರೂಣ ಲಿಂಗ ಪತ್ತೆ ಮಾಡುತ್ತಿದ್ದ ವ್ಯೂಹವೊಂದನ್ನು ಜಿಲ್ಲಾ ಆರೋಗ್ಯಾಧಿಕಾರಿಗಳು ಮೇ 5ರ ತಡರಾತ್ರಿ ಭೇದಿಸಿದ್ದಾರೆ.

ಖಚಿತ ಮಾಹಿತಿಯನ್ನು ಆಧರಿಸಿ ಪಾಂಡವಪುರದ ಜಿಲ್ಲಾ ಆರೋಗ್ಯಾಧಿಕಾರಿ ಡಾ. ಮೋಹನ್ ಹಾಗೂ ತಾಲೂಕು ಆರೋಗ್ಯಾಧಿಕಾರಿ ಡಾ. ಅರವಿಂದ್ ನೇತೃತ್ವದಲ್ಲಿ ಮೇ 6ರ ತಡರಾತ್ರಿ ದಾಳಿ ನಡೆಸಲಾಗಿದೆ. ದಾಳಿಯ ವೇಳೆ ಆರೋಪಿಗಳು ಸಿಕ್ಕಿಬಿದ್ದಿದ್ದು, ಅವರನ್ನು ಹಾಗೂ ಅವರು ಬಳಸುತ್ತಿದ್ದ ಯಂತ್ರೋಪಕರಣಗಳನ್ನೂ ವಶಕ್ಕೆ ಪಡೆಯಲಾಗಿದೆ ಎಂದು ಮೂಲಗಳು ತಿಳಿಸಿವೆ.

ದಾಳಿಯ ವೇಳೆ ಮೈಸೂರು ಮೂಲದ ಮಹಿಳೆಯೊಬ್ಬರು ಅಲ್ಲಿ ಭ್ರೂಣಲಿಂಗ ಪರೀಕ್ಷೆಗೆ ಒಳಗಾಗಿದ್ದರು. ಡಾ. ಮೋಹನ್ ಹಾಗೂ ಡಾ. ಅರವಿಂದ್ ಹಾಗೂ ಪೊಲೀಸರು ಆ ಮಹಿಳೆಯನ್ನು ವಶಕ್ಕೆ ಪಡೆದು ವಿಚಾರಣೆಗೊಳಪಡಿಸಿದ್ದಾರೆ. ಅಷ್ಟೇ ಅಲ್ಲದೆ, ಪಾಂಡವಪುರ ಸರ್ಕಾರಿ ಆಸ್ಪತ್ರೆಯ ಆ್ಯಂಬುಲೆನ್ಸ್ ವಾಹನ ಚಾಲಕ ಆನಂದ್, ಆಸ್ಪತ್ರೆಯಲ್ಲಿ ಹೊರಗುತ್ತಿಗೆ ಮೇಲೆ ಕೆಲಸ ಮಾಡುತ್ತಿದ್ದ ‘ಡಿ’ ಗ್ರೂಪ್ ನ ಅಶ್ವಿನಿ ಹಾಗೂ ಮತ್ತೊಬ್ಬ ಮಹಿಳೆಯನ್ನು ಬಂಧಿಸಲಾಗಿದೆ ಎಂದು ಹೇಳಲಾಗಿದೆ. ಅವರು ಮಾತ್ರವಲ್ಲದೆ, ಕೆಲವು ವೈದ್ಯ ಸಿಬ್ಬಂದಿಯೂ ಷಾಮೀಲಾಗಿರುವ ಅನುಮಾನಗಳಿದ್ದು, ತನಿಖೆಯ ವೇಳೆ ಆ ಬಗ್ಗೆ ಎಲ್ಲಾ ವಿವರಗಳು ಬಹಿರಂಗಗೊಳ್ಳಿವೆ ಎಂದು ಹೇಳಲಾಗಿದೆ.

2023ರ ಅಕ್ಟೋಬರ್ ನಲ್ಲಿ ಮಂಡ್ಯ ಜಿಲ್ಲೆಯ ಆಲೆಮನೆಯೊಂದರಲ್ಲಿ ಅಕ್ರಮವಾಗಿ ನಡೆಸಲಾಗುತ್ತಿದ್ದ ಭ್ರೂಣ ಹತ್ಯೆ ದೊಡ್ಡ ದಂಧೆಯೊಂದನ್ನು ಪತ್ತೆ ಹಚ್ಚಿದ್ದ ಪೊಲೀಸರು, ಅದಕ್ಕೆ ಸಂಬಂದಿಸಿದ ಆರೋಪಿಗಳನ್ನು ಬಂಧಿಸಿದ್ದರು. ಮಂಡ್ಯ ತಾಲೂಕಿನ ಹುಳ್ಳನಹಳ್ಳಿ – ಕಾಡ್ಯ ಗ್ರಾಮದ ಕಬ್ಬಿನಗದ್ದೆಯ ಮಧ್ಯಭಾಗದಲ್ಲಿ ಅಲೆಮನೆಯ ಶೆಡ್ ಒಂದರಲ್ಲಿ ಈ ಕೃತ್ಯ ನಡೆಸಲಾಗುತ್ತಿತ್ತು.

ಆಲೆಮನೆಯನ್ನು ಬಾಡಿಗೆ ಪಡೆದಿದ್ದ ಹುಳ್ಳೇನಹಳ್ಳಿ ಗ್ರಾಮದ ನಯನ್ ಹಾಗೂ ಪಾಂಡವಪುರ ತಾಲೂಕಿನ ಸುಂಕಾತೊಣ್ಣೂರು ಗ್ರಾಮ ನವೀನ್ ಎಂಬ ಯುವಕರು ಭಾವ – ಭಾಮೈದರಾಗಿದ್ದು, ಅವರು ಈ ಆಲೆಮನೆಯನ್ನು ಬಾಡಿಗೆ ಪಡೆದಿದ್ದರು. ಅದರ ಪಕ್ಕದಲ್ಲೇ ಶೆಡ್ ಒಂದನ್ನು ನಿರ್ಮಿಸಿದ್ದರು. ಅದರಲ್ಲಿ ಸ್ಕ್ಯಾನಿಂಗ್ ಮೆಷೀನ್ ಮತ್ತಿತರ ವೈದ್ಯಕೀಯ ಸಲಕರಣೆಗಳನ್ನಿಟ್ಟುಕೊಂಡು ಅವರು ಅಕ್ರಮವಾಗಿ ಭ್ರೂಣಲಿಂಗ ಪತ್ತೆ ಮಾಡುತ್ತಿದ್ದರು. ಅಲ್ಲಿ ಭ್ರೂಣವು ಹೆಣ್ಣು ಎಂದು ಪತ್ತೆಯಾದರೆ ಅಂಥ ಗರ್ಭಿಣಿಯರನ್ನು ಮೈಸೂರಿಗೆ ಕರೆದುಕೊಂಡು ಹೋಗಿ ಅಲ್ಲಿ ಖಾಸಗಿ ಕ್ಲಿನಿಕ್ ಗಳಲ್ಲಿ ಗರ್ಭಪಾತ ಮಾಡಿಸುತ್ತಿದ್ದರು ಎಂದು ಹೇಳಲಾಗಿದೆ

Vishwa News 24

Recent Posts

ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ – vishwanews24

ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…

13 hours ago

ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ – vishwanews24

ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…

14 hours ago

ದೇಣಿಗೆ ಕಳ್ಳತನ ವಿವಾದ: ರಾಮಮಂದಿರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌ ರಾಜೀನಾಮೆ – vishwanews24

ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…

14 hours ago

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್‌ ಕಡ್ಡಾಯ: ಗೃಹ ಸಚಿವ ಪ್ರಿಯಾಂಕ್‌ ಖರ್ಗೆ – vishwanews24

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್‌ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್‌ ಖರ್ಗೆ ಸೂಚನೆ  ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…

14 hours ago

ರಾಮ ಮಂದಿರ ದೇಣಿಗೆ ಹಣದಲ್ಲಿ ಅಕ್ರಮ ಎಸಗುವವರನ್ನು ಬಿಡುವುದಿಲ್ಲ: ಯೋಗಿ ಆದಿತ್ಯನಾಥ್‌ ಎಚ್ಚರಿಕೆ – vishwanews24

ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್‌ ಲಕ್ನೋ: ರಾಮಭಕ್ತರ…

14 hours ago

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ – vishwanews24

ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…

16 hours ago