Featured

ರಾಜ್ಯದಲ್ಲಿ ಮುಂದಿನ ಚುನಾವಣೆಯನ್ನು ಎದುರಿಸಿ ಪಕ್ಷಕ್ಕೆ ಗೆಲುವಿನ ಉಡುಗೊರೆ ನೀಡುತ್ತೇವೆ : ಸಿದ್ದರಾಮಯ್ಯ

ಸೋನಿಯಾ ಗಾಂಧಿ ರಾಹುಲ್ ಮತ್ತು ಪ್ರಿಯಾಂಕ ಒಂಟಿಯಲ್ಲ..

ಲಕ್ಷಾಂತರ ಕಾಂಗ್ರೆಸ್ ಕಾರ್ಯಕರ್ತರು ಮಾತ್ರವಲ್ಲ ದೇಶದ ಕೋಟ್ಯಂತರ ಜನ ಅವರ ಬೆನ್ನ ಹಿಂದಿದ್ದಾರೆ..

ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರ ನಾಯಕತ್ವದಲ್ಲಿ ದೇಶವನ್ನು ಮತ್ತೆ ಮುನ್ನಡೆಸುವ ಪ್ರಬಲ ರಾಜಕೀಯ ಶಕ್ತಿಯಾಗಿ ಎದ್ದು ಬರಲಿದೆ..

ಇಂದಿನ‌ ಸಂಕಷ್ಟ ಸ್ಥಿತಿಯಿಂದ ದೇಶವನ್ನು ಕಾಂಗ್ರೆಸ್ ಪಕ್ಷ ಮಾತ್ರ ಪಾರುಮಾಡಲು ಸಾಧ್ಯ ಎನ್ನುವುದು ಪ್ರತಿಯೊಬ್ಬರೂ ಅರಿತಿದ್ದಾರೆ..

ಬೆಂಗಳೂರು: ಸೋನಿಯಾ ಗಾಂಧಿ ರಾಹುಲ್ ಮತ್ತು ಪ್ರಿಯಾಂಕ ಒಂಟಿಯಲ್ಲ, ಇವರದೇ ನಾಯಕತ್ವದಲ್ಲಿ ದೇಶವನ್ನು ಮತ್ತೆ ಮುನ್ನಡೆಸುವ ಪ್ರಬಲ ರಾಜಕೀಯ ಶಕ್ತಿಯಾಗಿ ಎದ್ದು ಬರಲಿದೆ ಎಂದು ರಾಜ್ಯದ ವಿಪಕ್ಷ ಮುಖಂಡ , ಮಾಜಿ ಸಿಎಂ ಸಿದ್ದರಾಮಯ್ಯ, ಸೋನಿಯ ಗಾಂಧಿ ಕುಟುಂಬದ ನಾಯಕತ್ವದ ಬಗ್ಗೆ ನಿಷ್ಟೆ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು, ಕಾಂಗ್ರೆಸ್ ಪಕ್ಷ, ಇತ್ತೀಚಿನ ಕೆಲವು ಚುನಾವಣಾ ಸೋಲುಗಳ ತಾತ್ಕಲಿಕವಾದ ಹಿನ್ನಡೆಯನ್ನು ಎದುರಿಸಿ ಶ್ರೀಮತಿ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರ ನಾಯಕತ್ವದಲ್ಲಿ ದೇಶವನ್ನು ಮತ್ತೆ ಮುನ್ನಡೆಸುವ ಪ್ರಬಲ ರಾಜಕೀಯ ಶಕ್ತಿಯಾಗಿ ಎದ್ದು ಬರಲಿದೆ. ಕರ್ನಾಟಕ ಕಾಂಗ್ರೆಸ್ ಪಕ್ಷದ ನಾಯಕರಿಂದ ಹಿಡಿದು ಕಾರ್ಯಕರ್ತರವರೆಗೆ ಪ್ರತಿಯೊಬ್ಬರೂ ಸೋನಿಯಾ ಮತ್ತು ರಾಹುಲ್ ಗಾಂಧಿ ಅವರ ನಾಯಕತ್ವವನ್ನು ಬೆಂಬಲಿಸುತ್ತಿದ್ದಾರೆ. ಇದೇ ನಂಬಿಕೆ ಮತ್ತು ಆತ್ಮ ವಿಶ್ವಾಸದಿಂದ ರಾಜ್ಯದಲ್ಲಿ ಮುಂದಿನ ಚುನಾವಣೆಯನ್ನು ಎದುರಿಸಿ ಪಕ್ಷಕ್ಕೆ ಗೆಲುವಿನ ಉಡುಗೊರೆ ನೀಡುತ್ತೇವೆ ಎಂದು ಸವಾಲ್ ಹಾಕಿದ್ದಾರೆ.

“ಹೊರಗಿನ ವಿರೋಧ ಪಕ್ಷಗಳ ಅಪಪ್ರಚಾರ ಮತ್ತು ಕೆಲವು ಒಳಗಿನ ಹಿತಶತ್ರುಗಳ ಕುಟಿಲ ಕಾರಸ್ತಾನಗಳಿಂದ ವಿಚಲಿತರಾಗದೆ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರ ನಾಯಕತ್ವದಲ್ಲಿ ಭರವಸೆ ಇಟ್ಟು ಪಕ್ಷಕ್ಕೆ ಶಕ್ತಿತುಂಬಲು ಪ್ರತಿಯೊಬ್ಬ ಕಾಂಗ್ರೆಸಿಗನು ತಮ್ಮನ್ನು ಸಂಪೂರ್ಣವಾಗಿ ಅರ್ಪಿಸಿಕೊಳ್ಳಬೇಕು ಈಗ ಸೋನಿಯಾ ಗಾಂಧಿಯವರ ನಾಯಕತ್ವವನ್ನು ಪ್ರಶ್ನಿಸುತ್ತಿರುವವರು, ಅವರದ್ದೇ ನಾಯಕತ್ವದಲ್ಲಿ ಕಾಂಗ್ರೆಸ್ ಪಕ್ಷ ಸತತ ಎರಡು ಬಾರಿ ಲೋಕಸಭಾ ಚುನಾವಣೆಗಳನ್ನು ಗೆದ್ದು ಕೇಂದ್ರದಲ್ಲಿ ಅಧಿಕಾರಕ್ಕೆ ಬಂದಿರುವುದನ್ನು ಮರೆತಿರುವುದು ಆತ್ಮದ್ರೋಹವಲ್ಲದೆ ಮತ್ತೇನು? ಸೋನಿಯಾ ಗಾಂಧಿಯವರ ನಾಯಕತ್ವದಲ್ಲಿಯೇ ಕೇಂದ್ರದಲ್ಲಿ ಮಾತ್ರವಲ್ಲ, ಹದಿನೈದಕ್ಕೂ ಹೆಚ್ಚು ರಾಜ್ಯಗಳಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿತ್ತು‌ ಎನ್ನುವುದನ್ನು ಇಂದು ಅವರ ನಾಯಕತ್ವವನ್ನು ಪ್ರಶ್ನಿಸುವವರು ನೆನಪು ಮಾಡಿಕೊಳ್ಳಬೇಕಾಗಿದೆ” ಎಂದು ಪರೋಕ್ಷವಾಗಿ ಕಾಂಗ್ರೆಸ್ ರೆಬಲ್ ಟೀಂ ಎಂದು ಗುರುತಿಸಿಕೊಂಡಿರುವ ಜಿ.೨೩ ನಾಯಕರ ವಿರುದ್ದ ಕಿಡಿಕಾರಿದ್ದಾರೆ.

“ದೇಶಕ್ಕೆ ಬಲಿದಾನಗೈದ ಪತಿಯ ಅಗಲಿಕೆಯ ಶೋಕ ಮತ್ತು 2 ಎಳೆಯ ಮಕ್ಕಳ ಭವಿಷ್ಯದ ಕಾಳಜಿಯಿಂದ ರಾಜಕೀಯದಿಂದ ದೂರ ಇದ್ದ ಸೋನಿಯಾ ಗಾಂಧಿಯವರನ್ನು ಕಾಂಗ್ರೆಸ್ ಪಕ್ಷವನ್ನು ಉಳಿಸಲಿಕ್ಕಾಗಿ ಒತ್ತಾಯದಿಂದ ಸಕ್ರಿಯ ರಾಜಕೀಯಕ್ಕೆ ಎಳೆದು ತಂದಿದ್ದ ಕೆಲವು ನಾಯಕರೇ ಈಗ ಸೋನಿಯಾಗಾಂಧಿ ನಾಯಕತ್ವವನ್ನು ಪ್ರಶ್ನಿಸುತ್ತಿರುವುದು ವಿಷಾದನೀಯ. 2004ರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸಿದ್ದ ಶ್ರೀಮತಿ ಸೋನಿಯಾ ಗಾಂಧಿಯವರು ಹಕ್ಕಿನಿಂದ ಪಡೆಯಬಹುದಾದ ಪ್ರಧಾನಿ ಪಟ್ಟವನ್ನು ತ್ಯಾಗ ಮಾಡಿ ವಿಶ್ವಕ್ಕೆ ಮಾದರಿಯಾಗಿದ್ದನ್ನು ಇಡೀ ವಿಶ್ವ ಕಂಡಿದೆ. ಇಂದಿನ‌ ಟೀಕಾಕಾರರು ಈ ತ್ಯಾಗವನ್ನು ಕಂಡಿಲ್ಲವೇ” ಎಂದು ಪ್ರಶ್ನಿಸಿದ್ದಾರೆ

ಕೆಲವು ಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷ ಸೋತಿರಬಹುದು.‌ ಆದರೆ ಆಹಾರ, ಶಿಕ್ಷಣ, ಉದ್ಯೋಗ ಮತ್ತು ಮಾಹಿತಿಯ ಶಾಸನಾತ್ಮಕ ಹಕ್ಕನ್ನು ನೀಡಿದ್ದ ಕಾರ್ಯಕ್ರಮಗಳ ರೂವಾರಿಯಾದ ಸೋನಿಯಾ ಗಾಂಧಿಯವರು ದೇಶದ ಜನತೆಯ ಮನೆ-ಮನಗಳಲ್ಲಿ ಶಾಶ್ವತವಾಗಿ ನೆಲೆ ನಿಂತಿದ್ದಾರೆ. ಆ ಚಿತ್ರವನ್ನು ಅಳಿಸಲಾಗದು. ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಮತ್ತು ಪ್ರಿಯಾಂಕ ಗಾಂಧಿ ಒಂಟಿಯಲ್ಲ, ಲಕ್ಷಾಂತರ ಕಾಂಗ್ರೆಸ್ ಕಾರ್ಯಕರ್ತರು ಮಾತ್ರವಲ್ಲ ದೇಶದ ಕೋಟ್ಯಂತರ ಜನ ಅವರ ಬೆನ್ನ ಹಿಂದಿದ್ದಾರೆ. ಇಂದಿನ‌ ಸಂಕಷ್ಟ ಸ್ಥಿತಿಯಿಂದ ದೇಶವನ್ನು ಕಾಂಗ್ರೆಸ್ ಪಕ್ಷ ಮಾತ್ರ ಪಾರುಮಾಡಲು ಸಾಧ್ಯ ಎನ್ನುವುದು ಪ್ರತಿಯೊಬ್ಬರೂ ಅರಿತಿದ್ದಾರೆ. ಕೋಮುವಾದಿ ರಾಜಕಾರಣ, ಮಾಧ್ಯಮಗಳ ಮೂಲಕ‌ ನಡೆಸಲಾಗುತ್ತಿರುವ ಸುಳ್ಳುಗಳ ಅಪಪ್ರಚಾರ, ದುಡ್ಡಿನ ಬಲದ ಚುನಾವಣಾ ತಂತ್ರ-ಕುತಂತ್ರಗಳ ಎದುರು ಸೈದ್ಧಾಂತಿಕ ರಾಜಕಾರಣಕ್ಕೆ ಬದ್ಧವಾಗಿರುವ ಕಾಂಗ್ರೆಸ್ ಪಕ್ಷಕ್ಕೆ ಹಿನ್ನಡೆಯಾಗಿರಬಹುದು. ಇದು ತಾತ್ಕಾಲಿಕ ಹಿನ್ನಡೆ, ಸತ್ಯವೇ ಗೆಲ್ಲುವುದು. “ಸತ್ಯಮೇವ ಜಯತೆ” ಎಂದು ಬರೆದುಕೊಂಡಿದ್ದಾರೆ.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

4 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

4 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

4 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

4 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

4 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

4 days ago