ಬೆಂಗಳೂರು: ಮುಂದಿನ ನಾಲ್ಕು ದಿನ ರಾಜ್ಯದಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳು ಮುನ್ಸೂಚನೆ ನೀಡಿದ್ದಾರೆ.
ಮಹಾರಾಷ್ಟ್ರದ ಮಧ್ಯ ಕರಾವಳಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆ ರಾಜ್ಯದ ಕರಾವಳಿ, ದಕ್ಷಿಣ ಒಳನಾಡಿನ ಎಲ್ಲ ಜಿಲ್ಲೆ ಹಾಗೂ ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ. 24 ರಿಂದ 28 ರವರೆಗೆ ಕರಾವಳಿಯ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಮಾಹಿತಿ ನೀಡಿದ್ದಾರೆ.
ಈ ಭಾಗದಲ್ಲಿ 24, 25 ರಂದು ಗುಡುಗು ಸಿಡಿಲಿನ ಎಚ್ಚರಿಕೆ ನೀಡಲಾಗಿದೆ. ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂ.ನಗರ, ಗ್ರಾಮಾಂತರ, ಚಾಮರಾಜನಗರ, ಚಿಕ್ಕಮಗಳೂರು, ದಾವಣಗೆರೆ, ಚಿತ್ರದುರ್ಗ, ಹಾಸನ, ಕೊಡಗು, ಮೈಸೂರು, ತುಮಕೂರು ಜಿಲ್ಲೆಯಲ್ಲಿ 24 ರಿಂದ 26 ರವರೆಗೆ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದ್ದಾರೆ.
27, 28ರಂದು ದಕ್ಷಿಣ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಮಾತ್ರ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಬೆಳಗಾವಿ, ಗದಗ, ಹಾವೇರಿ, ಬಾಗಲಕೋಟೆ, ಜಿಲ್ಲೆಗಳಲ್ಲಿ 24 ರಿಂದ 28ರವರೆಗೆ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದ್ದಾರೆ.
ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…
ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…
ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…
ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…