ರಾಜ್ಯದಲ್ಲಿ ಮುಂದಿನ 4 ದಿನ  ಭಾರೀ ಮಳೆ ಸಾಧ್ಯತೆ ; ಕರಾವಳಿಯಲ್ಲಿ ಆರೆಂಜ್ ಅಲರ್ಟ್ ಘೋಷಣೆ – Vishwanews24

Featured, ರಾಜ್ಯ ನ್ಯೂಸ್

ರಾಜ್ಯದಲ್ಲಿ ಮುಂದಿನ 4 ದಿನ  ಭಾರೀ ಮಳೆ ಸಾಧ್ಯತೆ ; ಕರಾವಳಿಯಲ್ಲಿ ಆರೆಂಜ್ ಅಲರ್ಟ್ ಘೋಷಣೆ – Vishwanews24

ಬೆಂಗಳೂರು: ಮುಂದಿನ ನಾಲ್ಕು ದಿನ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಕರಾವಳಿಯಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಗುರುವಾರ ರಾತ್ರಿ ಬೆಂಗಳೂರು, ಬೆಳಗಾವಿ, ವಿಜಯಪುರ, ದಾವಣಗೆರೆ, ಚಿತ್ರದುರ್ಗ, ವಿಜಯನಗರ, ಬಳ್ಳಾರಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಿದ್ದು, ಬೆಳಗಾವಿ ಜಿಲ್ಲೆಯಲ್ಲಿ ಹಾಗೂ ವಿಜಯಪುರ ತಾಲೂಕಿನ ಮದಭಾವಿ ಗ್ರಾಮದಲ್ಲಿ ಇಬ್ಬರು ಬ್ಯಕ್ತಿಗಳು ಸಿಡಿಲು ಬಡಿದು ಸಾವನ್ನಪ್ಪಿದ್ದಾರೆ.

ಇನ್ನು ಶುಕ್ರವಾರ ಬೆಂಗಳೂರು, ಕರಾವಳಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಕರಾವಳಿ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.

ಕರಾವಳಿ ಜಿಲ್ಲೆಗಳ ಹಲವು ಕಡೆ ಏಪ್ರಿಲ್ 18 ರವರೆಗೆ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕೆಎಸ್‌ ಈಶ್ವರಪ್ಪ ಬಂಧನಕ್ಕೆ ಕಾಂಗ್ರೆಸ್‌ ಮುಖಂಡರ ಆಗ್ರಹ ; ಅಹೋರಾತ್ರಿ ಧರಣಿ – Vishwnaews24

Leave a Reply