ರಾಜ್ಯದಲ್ಲಿ ಮುಂದಿನ 5 ದಿನ ಭಾರಿ ಮಳೆ ಮುನ್ಸೂಚನೆ : ಕರಾವಳಿಯ ಮೂರು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ – vishwanews24

Featured, ಉಡುಪಿ, ದಕ್ಷಿಣ ಕನ್ನಡ, ರಾಜ್ಯ ನ್ಯೂಸ್

ರಾಜ್ಯದಲ್ಲಿ ಮುಂದಿನ 5 ದಿನ ಭಾರಿ ಮಳೆ ಮುನ್ಸೂಚನೆ : ಕರಾವಳಿಯ ಮೂರು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಸಾಧ್ಯತೆ ಹಿನ್ನೆಲೆ, ರಾಜ್ಯದಲ್ಲಿ ಮುಂದಿನ 5 ದಿನ ಭಾರಿ ಮಳೆ ಮುನ್ಸೂಚನೆ ನೀಡಲಾಗಿದೆ.

ಕರಾವಳಿಯ ಮೂರು ಜಿಲ್ಲೆಗಳಿಗೆ ಭಾರಿ ಮಳೆ ಸಾಧ್ಯತೆಯಿದ್ದು, ಕರಾವಳಿ ಭಾಗದ ದಕ್ಷಿಣ ಕನ್ನಡ , ಉಡುಪಿ, ಉತ್ತರ ಕನ್ನಡ ಹಾಗೂ ಮಲೆನಾಡು ಭಾಗದ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಬೀದರ್, ಕಲಬುರಗಿ, ಯಾದಗಿರಿ, ವಿಜಯಪುರ, ರಾಯಚೂರು, ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಬಾಗಲಕೋಟೆ, ಕೊಪ್ಪಳ ಜಿಲ್ಲೆಗಳಿಗೆ ಎರಡು ದಿನ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

Leave a Reply