ಬೆಂಗಳೂರು : ರಾಜ್ಯದಲ್ಲಿ ಮುಸ್ಲಿಂ ಹೆಣ್ಣು ಮಕ್ಕಳಿಗೆ ಪ್ರತ್ಯೇಕ ಕಾಲೇಜು ನಿರ್ಮಾಣ ಮಾಡಲು ರಾಜ್ಯ ಸರ್ಕಾರ ಅಸ್ತು ಎಂದಿದೆ ಎನ್ನಲಾಗಿದೆ. ಈ ಕುರಿತು ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಆಕ್ರೋಶ ವ್ಯಕ್ತಪಡಿಸಿದ್ದು, 10 ಮುಸ್ಲಿಂ ಮಹಿಳಾ ಕಾಲೇಜು ನಿರ್ಮಾಣ ಖಂಡನೀಯ ಎಂದು ಹೇಳಿದರು.
ರಾಜ್ಯದಲ್ಲಿ 10 ಮುಸ್ಲಿಂ ಕಾಲೇಜು ನಿರ್ಮಾಣ ಮಾಡುವುತ್ತಿರುವುದು ಖಂಡನೀಯವಾಗಿದೆ. ಕಾಲೇಜು ನಿರ್ಮಾಣ ಮಾಡಿದ್ರೆ ರಾಜ್ಯದಲ್ಲಿ ತೀವ್ರ ಹೋರಾಟ ನಡೆಸುತ್ತೇವೆ, ಹಿಜಾಬ್ ಸಲುವಾಗಿ ಕಾಲೇಜು ನಿರ್ಮಿಸಿದ್ರೆ ಪ್ರತಿಭಟನೆ ನಡೆಸಲಿದ್ದೇವೆ. ನಾವು ಮುಸ್ಲಿಂ ಕಾಲೇಜು ನಿರ್ಮಾಣ ಮಾಡಲು ಬಿಡುವುದಿಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ.
ರಾಜ್ಯದಲ್ಲಿ ಮುಸ್ಲಿಂ ಹೆಣ್ಣು ಮಕ್ಕಳಿಗೆ ಪ್ರತ್ಯೇಕ ಕಾಲೇಜು ನಿರ್ಮಾಣ ಮಾಡಲು ರಾಜ್ಯ ಸರ್ಕಾರ ಅಸ್ತು ಎಂದಿದೆ ಎನ್ನಲಾಗಿದೆ ಹಿಜಾಬ್ ವಿವಾದದ ಹಿನ್ನೆಲೆ ಪ್ರತ್ಯೇಕ ಕಾಲೇಜು ನಿರ್ಮಾಣಕ್ಕೆ ಒಪ್ಪಿಗೆ ನೀಡಲಾಗಿದ್ದು, ಮುಸ್ಲಿಂ ಹೆಣ್ಣು ಮಕ್ಕಳಿಗೆ ಪ್ರತ್ಯೇಕ ಕಾಲೇಜು ನಿರ್ಮಾಣಕ್ಕೆ ಮುಂದಿನ ತಿಂಗಳು ಶಂಕುಸ್ಥಾಪನೆ ನೆರವೇರಿಸಲಾಗುತ್ತದೆ , ಕಾಲೇಜು ನಿರ್ಮಾಣ ಉದ್ಘಾಟನೆಗೆ ಸಿಎಂ ಬೊಮ್ಮಾಯಿ ಕರೆಸಲಾಗುತ್ತದೆ ಎಂದು ರಾಜ್ಯ ವಕ್ಫ್ ಬೋರ್ಡ್ ಅಧ್ಯಕ್ಷ ಸಾ ಅದಿ ಮಾಹಿತಿ ನೀಡಿದ್ದಾರೆ.
ಮೂರು ತಿಂಗಳ ಹಿಂದೆ, ರಾಜ್ಯ ವಕ್ಫ್ ಬೋರ್ಡ್ನಲ್ಲಿ ಈ ಕುರಿತು ನಿರ್ಣಯ ಕೈಗೊಳ್ಳಲಾಗಿತ್ತು. ಒಂದೂವರೆ ತಿಂಗಳ ಹಿಂದೆ ಸರ್ಕಾರದಿಂದ ಇದಕ್ಕೆ ಅನುಮೋದನೆಯೂ ದೊರೆತಿತ್ತು. ಪ್ರತಿ ಕಾಲೇಜಿಗೆ 2.50 ಕೋಟಿ ರು.ಅನುದಾನವನ್ನೂ ಮೀಸಲಿರಿಸಲಾಗಿದ್ದು, ವಕ್ಫ್ ಬೋರ್ಡ್ಗೆ ರಾಜ್ಯ ಸರ್ಕಾರ ನೀಡುವ ಅನುದಾನದಲ್ಲಿ ಈ ವೆಚ್ಚವನ್ನು ಭರಿಸಲು ನಿರ್ಧರಿಸಲಾಗಿದೆ.
ಕಲಬುರಗಿ, ಯಾದಗರಿ, ರಾಯಚೂರು, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮುಸ್ಲಿಂ ಹೆಣ್ಣುಮಕ್ಕಳಿಗಾಗಿಯೇ ಪ್ರತ್ಯೇಕ 10 ಕಾಲೇಜುಗಳನ್ನು ಸ್ಥಾಪಿಸಲು ರಾಜ್ಯ ಸರ್ಕಾರ ಮುಂದಾಗಿದೆ.
ಎಪ್ರಿಲ್ ಜಾತ್ರೆಯಲ್ಲಿ ಭ್ರಮರಾಂಬೆಗೆ ನೂತನ ರಥದಲ್ಲಿ ಉತ್ಸವ ಐವತ್ತು ಅಡಿ ಎತ್ತರದ ಆರು ಚಕ್ರಗಳ ಹೊಸ ರಥದ ನಿರ್ಮಾಣ ಕಟೀಲು…
ಮಕ್ಕಳಾಗಿಲ್ಲ ಹಾಗೂ ತವರಿನಿಂದ ಹಣ ತರುವ ವಿಚಾರಕ್ಕೆ ಗಲಾಟೆ : ಪತ್ನಿಯನ್ನು ಕತ್ತು ಹಿಸುಕಿ ಕೊಲೆಗೈದ ಪತಿ ಕಲಬುರಗಿ: ಮಕ್ಕಳಾಗಿಲ್ಲ…
ಸುಪ್ರೀಂ ಕೋರ್ಟ್‌ನಲ್ಲಿ ಉದ್ಯೋಗವಕಾಶ : 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ ಸುಪ್ರೀಂ ಕೋರ್ಟ್ ಮಹತ್ವದ ಅವಕಾಶವೊಂದನ್ನು…
ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಟ ಪ್ರೇಮ್ ದಂಪತಿ ಉಡುಪಿ: ಚಿತ್ರನಟ ಹಾಗೂ ‘ನೆನಪಿರಲಿ’ ಖ್ಯಾತಿಯ ಪ್ರೇಮ್ ಅವರು…
ಸಚಿವರ ಮೇಲೆ ಖಾಸಗಿ ಸ್ಟಿಂಗ್ ಆಪರೇಷನ್ : ಎಚ್ಚರಿಕೆಯಿಂದ ಇರುವಂತೆ ಸಿಎಂ ಸೂಚನೆ ಬೆಂಗಳೂರು: ಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ…
ಪ್ರಕಾಶ್‌ರಾಜ್‌ಗೆ ‘ಮಾನವ ರತ್ನ’, ಹಿದಾಯತುಲ್ಲಾ ಅಬ್ಬಾಸ್‌ಗೆ ‘ಸೇವಾ ರತ್ನ’, ಸುರೇಶ್ ಭಟ್ ಬಾಕ್ರಬೈಲ್‌ಗೆ ‘ಸೌಹಾರ್ದ ರತ್ನ’ ಪ್ರಶಸ್ತಿ ಉಡುಪಿ ಜಿಲ್ಲಾ…