Featured

ರಾಜ್ಯದಲ್ಲಿ ಮೊದಲ ಬಾರಿಗೆ ರಾಯಚೂರಿನಲ್ಲಿ ಝಿಕಾ ವೈರಸ್ ಪತ್ತೆ ; ಸೋಂಕಿನ ಲಕ್ಷಣಗಳೇನು? – Vishwanews24

ರಾಜ್ಯದಲ್ಲಿ ಮೊದಲ ಬಾರಿಗೆ ರಾಯಚೂರಿನಲ್ಲಿ ಝಿಕಾ ವೈರಸ್ ಪತ್ತೆ ; ಸೋಂಕಿನ ಲಕ್ಷಣಗಳೇನು?

ರಾಜ್ಯದಲ್ಲಿ ಮೊದಲ ಬಾರಿಗೆ ಝಿಕಾ ವೈರಸ್ ಪತ್ತೆಯಾಗಿದೆ. ಇದರಿಂದ ಕರ್ನಾಟಕದ ಜನತೆ ಆತಂಕಕ್ಕೀಡಾಗಿತ್ತು. ರಾಯಚೂರಿನಲ್ಲಿ ಮೊದಲ ಝಿಕಾ ವೈರಸ್ ಪ್ರಕರಣ ಪತ್ತೆಯಾಗಿದೆ. 5 ವರ್ಷದ ಬಾಲಕಿಯಲ್ಲಿ ಸೋಂಕು ದೃಢಪಟ್ಟಿದೆ.ರಾಯಚೂರಿನ ಬಾಲಕಿಯಲ್ಲಿ ಝಿಕಾ ವೈರಸ್ ಪತ್ತೆಯಾಗಿದೆ.

ಪುಣೆ ವೈರಾಲಜಿ ಲ್ಯಾಬ್‌ನಿಂದ ಪಾಸಿಟಿವ್ ರಿಪೋರ್ಟ್‌ ಬಂದಿದೆ. ಝೀಕಾ ವೈರಸ್‌ ಸೋಂಕಿನ ಬಾಲಕಿ ಮೇಲೆ ತೀವ್ರ ನಿಗಾ ವಹಿಸಿದ್ದೇವೆ. ಇನ್ನು ಝೀಕಾ ಸೋಂಕು ಪತ್ತೆಯಾದ ಬಾಲಕಿ ಟ್ರಾವೆಲ್ ಹಿಸ್ಟರಿ ಈವರೆಗೂ ಲಭ್ಯವಾಗಿಲ್ಲ. ಹೀಗಾಗಿ ರಾಯಚೂರು ಜಿಲ್ಲಾಡಳಿತ ಬಾಲಕಿ ಟ್ರಾವೆಲ್ ಹಿಸ್ಟರಿ ಪತ್ತೆ ಮಾಡುತ್ತಿದೆ.

ಸೊಳ್ಳೆ ಕಡಿತದಿಂದ ಬರುವ ಝಿಕಾ ವೈರಸ್‌, ಆಂಧ್ರ, ತೆಲಂಗಾಣ ಸೇರಿ ರಾಜ್ಯದ ಬೇರೆ ಯಾವ ಜಿಲ್ಲೆಯ ಲಿಂಕ್ ಇದೆ ಅನ್ನೋದರ ಮಾಹಿತಿ ಸಂಗ್ರಹಿಸಲಾಗುತ್ತಿದೆ. ಕೇಂದ್ರದ ವೈದ್ಯರ ತಂಡ ಏಕಾಏಕಿ‌ ದಿಢೀರ್ ಭೇಟಿ ನೀಡಿ ಝಿಕಾ ವೈರಸ್‌ಗೆ ಒಳಗಾದ ಬಾಲಕಿ ಹಾಗೂ ಕುಟುಂಬಸ್ಥರನ್ನು ಪರೀಕ್ಷೆಗೆ ಒಳಪಡಿಸಿದೆ.

ಝಿಕಾ ವೈರಸ್ ಇತಿಹಾಸ

ಈಡಿಸ್ ಸೊಳ್ಳೆಯ ಕಚ್ಚುವಿಕೆಯ ಮೂಲಕ ಝಿಕಾ ವೈರಸ್ ಸೋಂಕು ಹರಡುತ್ತದೆ. ಇದು ಡೆಂಗ್ಯೂ ಮತ್ತು ಚಿಕೂನ್‌ಗುನ್ಯಾದಂತಹ ಸೋಂಕುಗಳನ್ನು ಹರಡುತ್ತದೆ. ಈ ವೈರಸ್ ಅನ್ನು ಮೊದಲು 1947ರಲ್ಲಿ ಉಗಾಂಡಾದಲ್ಲಿ ಗುರುತಿಸಲಾಯಿತು. ಕೇರಳದಲ್ಲಿ 2021ರಲ್ಲಿ ಮೊದಲ ಝಿಕಾ ವೈರಸ್ ಪ್ರಕರಣ ಪತ್ತೆಯಾಗಿತ್ತು.

ಝಿಕಾ ವೈರಸ್ ನಿವಾರಣಾ ಕ್ರಮವೇನು?

ಈ ಸೋಂಕು ತಗುಲಿದವರಿಗೆ ಹೆಚ್ಚು ದ್ರವಾಹಾರ ಸೇವಿಸುವಂತೆ ತಿಳಿಸಲಾಗುತ್ತದೆ. ರೋಗನಿರೋಧಕ ಶಕ್ತಿ ಹೆಚ್ಚಳದ ಆಹಾರ ಸೇವಿಸಲು ಸಲಹೆ ನೀಡಲಾಗಿದೆ.

ಝಿಕಾ ಸೋಂಕಿನ ಲಕ್ಷಣಗಳೇನು?

ಸೋಂಕು ಅತಿ ಗಂಭೀರ ಸ್ವರೂಪ ತಾಳುವುದಿಲ್ಲ. ಈ ಸೋಂಕಿನಿಂದ ಸಾವು ಸಂಭವಿಸುವ ಸಾಧ್ಯತೆಯೂ ಕಡಿಮೆ. ಎರಡು ದಿನಗಳಿಂದ ಏಳು ದಿನಗಳವರೆಗೆ ಈ ಲಕ್ಷಣಗಳು ಇರುತ್ತವೆ. ಜಾಂಡಿಸ್ ಬಗೆಯ ಲಕ್ಷಣಗಳು ರೋಗಿಯಲ್ಲಿ ಗೋಚರವಾಗಬಹುದು. ಕಣ್ಣು ಕೆಂಪಗಾಗುವುದು, ಜ್ವರ, ಗಂಟು ನೋವು, ಕೀಲು, ಸ್ನಾಯು ನೋವು ಇದರ ಸಾಮಾನ್ಯ ಲಕ್ಷಣ. ತಲೆನೋವು, ಕೆಂಪು ಕಲೆಗಳೂ ಆಗುತ್ತವೆ

Vishwa News 24

Recent Posts

ಕಟೀಲು ದೇವಿಗೆ ನೂತನ ಬ್ರಹ್ಮರಥ : 6 ಚಕ್ರಗಳ ಹೊಸ ರಥದ ನಿರ್ಮಾಣ – vishwanews24

ಎಪ್ರಿಲ್ ಜಾತ್ರೆಯಲ್ಲಿ ಭ್ರಮರಾಂಬೆಗೆ ನೂತನ ರಥದಲ್ಲಿ ಉತ್ಸವ ಐವತ್ತು ಅಡಿ ಎತ್ತರದ ಆರು ಚಕ್ರಗಳ ಹೊಸ ರಥದ ನಿರ್ಮಾಣ ಕಟೀಲು…

11 hours ago

ಪತ್ನಿಯನ್ನು ಕತ್ತು ಹಿಸುಕಿ ಕೊಲೆಗೈದ ಪತಿ – vishwanews24

ಮಕ್ಕಳಾಗಿಲ್ಲ ಹಾಗೂ ತವರಿನಿಂದ ಹಣ ತರುವ ವಿಚಾರಕ್ಕೆ ಗಲಾಟೆ : ಪತ್ನಿಯನ್ನು ಕತ್ತು ಹಿಸುಕಿ ಕೊಲೆಗೈದ ಪತಿ ಕಲಬುರಗಿ: ಮಕ್ಕಳಾಗಿಲ್ಲ…

11 hours ago

ಸುಪ್ರೀಂ ಕೋರ್ಟ್‌ನಲ್ಲಿ ಉದ್ಯೋಗವಕಾಶ : 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ – vishwanews24

ಸುಪ್ರೀಂ ಕೋರ್ಟ್‌ನಲ್ಲಿ ಉದ್ಯೋಗವಕಾಶ : 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ ಸುಪ್ರೀಂ ಕೋರ್ಟ್ ಮಹತ್ವದ ಅವಕಾಶವೊಂದನ್ನು…

12 hours ago

ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಟ ಪ್ರೇಮ್ ದಂಪತಿ – vishwanews24

ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಟ ಪ್ರೇಮ್ ದಂಪತಿ ಉಡುಪಿ: ಚಿತ್ರನಟ ಹಾಗೂ ‘ನೆನಪಿರಲಿ’ ಖ್ಯಾತಿಯ ಪ್ರೇಮ್ ಅವರು…

12 hours ago

ಸಚಿವರ ಮೇಲೆ ಖಾಸಗಿ ಸ್ಟಿಂಗ್​​ ಆಪರೇಷನ್ : ಎಚ್ಚರಿಕೆಯಿಂದ ಇರುವಂತೆ ಸಿಎಂ ಸೂಚನೆ – vishwanews24

ಸಚಿವರ ಮೇಲೆ ಖಾಸಗಿ ಸ್ಟಿಂಗ್​​ ಆಪರೇಷನ್ : ಎಚ್ಚರಿಕೆಯಿಂದ ಇರುವಂತೆ ಸಿಎಂ ಸೂಚನೆ ಬೆಂಗಳೂರು: ಸಿಎಂ ಡಿಕೆ ಶಿವಕುಮಾರ್​​ ನೇತೃತ್ವದಲ್ಲಿ…

12 hours ago

ಪ್ರಕಾಶ್‌ರಾಜ್‌ಗೆ ‘ಮಾನವ ರತ್ನ’, ಹಿದಾಯತುಲ್ಲಾ ಅಬ್ಬಾಸ್‌ಗೆ ‘ಸೇವಾ ರತ್ನ’, ಸುರೇಶ್ ಭಟ್ ಬಾಕ್ರಬೈಲ್‌ಗೆ ‘ಸೌಹಾರ್ದ ರತ್ನ’ ಪ್ರಶಸ್ತಿ – vishwanews24

ಪ್ರಕಾಶ್‌ರಾಜ್‌ಗೆ ‘ಮಾನವ ರತ್ನ’, ಹಿದಾಯತುಲ್ಲಾ ಅಬ್ಬಾಸ್‌ಗೆ ‘ಸೇವಾ ರತ್ನ’, ಸುರೇಶ್ ಭಟ್ ಬಾಕ್ರಬೈಲ್‌ಗೆ ‘ಸೌಹಾರ್ದ ರತ್ನ’ ಪ್ರಶಸ್ತಿ ಉಡುಪಿ ಜಿಲ್ಲಾ…

12 hours ago