Featured

ರಾಜ್ಯದಲ್ಲಿ ಮೋದಿ, ಬಿಜೆಪಿ ಅಲೆಯಿಲ್ಲ- ಸ್ಥಳೀಯಾಡಳಿತ ಚುನಾವಣೆಯಲ್ಲಿ ಕಾಂಗ್ರೆಸ್ ಗೆದ್ದೇ ಗೆಲ್ಲುತ್ತೆ: ಜಯಮಾಲಾ

ಉಡುಪಿ: ರಾಜ್ಯದಲ್ಲಿ ಯಾವ ಅಲೆಯೂ ಇಲ್ಲ. ಸ್ಥಳೀಯಾಡಳಿತ ಚುನಾವಣೆಯಲ್ಲಿ ಕಾಂಗ್ರೆಸ್ ಗೆದ್ದೇ ಗೆಲ್ಲುತ್ತದೆ. ವಿಧಾನಸಭಾ ಚುನಾವಣೆಯಲ್ಲಿ ಮೋದಿ ಅಲೆ-ಬಿಜೆಪಿ ಅಲೆಯಲ್ಲಿ ಕಾಂಗ್ರೆಸ್ ಕೊಚ್ಚಿ ಹೋಗಿರಬಹುದು. ರಾಜ್ಯದಲ್ಲಿ ಈಗ ಯಾವ ಅಲೆಯೂ ಇಲ್ಲ ಉಡುಪಿ ಉಸ್ತುವಾರಿ ಸಚಿವೆ ಜಯಮಾಲಾ ಹೇಳಿದ್ದಾರೆ.

 

ತಿಂಗಳಾಂತ್ಯಕ್ಕೆ ನಡೆಯಲಿರುವ ಸ್ಥಳೀಯಾಡಳಿತ ಚುನಾವಣೆ ಹಿನ್ನೆಲೆಯಲ್ಲಿ ಮತಪ್ರಚಾರ ಬಿರುಸಿನಿಂದ ನಡೆಯುತ್ತಿದೆ. ಉಡುಪಿಯಲ್ಲಿ ಒಂದು ನಗರಸಭೆ, ಎರಡು ಪುರಸಭೆ ಒಂದು ಪಟ್ಟಣ ಪಂಚಾಯತ್ ಗೆ ಚುನಾವಣೆ ನಡೆಯಲಿದೆ. ಹೀಗಾಗಿ ಸಚಿವೆ ಜಯಮಾಲಾ ಡೋರ್ ಟು ಡೋರ್ ಕ್ಯಾಂಪೇನ್ ಶುರು ಮಾಡಿದ್ದಾರೆ. ಉಡುಪಿಯ ನಗರಸಭೆ ವಾರ್ಡ್ ಗಳಿಗೆ ಜಯಮಾಲಾ ಭೇಟಿ ನೀಡಿ ಮತಯಾಚನೆ ಮಾಡಿದರು.

 

ಈ ಸಂದರ್ಭ ಮಾಧ್ಯಮಗಳ ಜೊತೆ ಮಾತನಾಡಿದ ಜಯಮಾಲಾ ಬಿಜೆಪಿ ವಿರುದ್ಧ ವಾಗ್ಧಾಳಿ ನಡೆಸಿದರು. ಬಳಿಕ ನಾನು ಸ್ಟಾರ್ ಕ್ಯಾಂಪೇನರ್ ಅಲ್ಲ, ಕಾಂಗ್ರೆಸ್ ನ ಅಭಿವೃದ್ಧಿ ಕಾರ್ಯಗಳೇ ಚುನಾವಣೆಯ ಸ್ಟಾರ್ ಕ್ಯಾಂಪೇನರ್. ಸ್ಥಳೀಯಾಡಳಿತ ಚುನಾವಣೆಯಲ್ಲಿ ಕಾಂಗ್ರೆಸ್ ಗೆದ್ದೇ ಗೆಲ್ಲುತ್ತೆ. ಹಿಂದಿನ ಸರ್ಕಾರದ ಯೋಜನೆಗಳನ್ನು, ಈಗಿನ ಸಮ್ಮಿಶ್ರ ಸರ್ಕಾರ ಕೆಲಸಗಳನ್ನು ಕಂಡು ಜನ ಕಾಂಗ್ರೆಸ್ಸನ್ನು ಗೆಲ್ಲಿಸುತ್ತಾರೆ ಅಂತ ಹೇಳಿದರು. ರೈತರ ಸಾಲಮನ್ನಾ ಕಾಂಗ್ರೆಸ್ ಗೆಲುವಿಗೆ ಅನುಕೂಲವಾಗುತ್ತದೆ ಎಂದು ಹೇಳಿದರು.

 

ಉಡುಪಿ ಜಿಲ್ಲೆಯಲ್ಲಿ ನೆರೆ ಬಂದಿದ್ದು, 25 ಕೋಟಿ ನೆರೆ ಪರಿಹಾರ ಈಗಾಗಲೇ ದೊರಕಿದೆ. ಸರ್ಕಾರಕ್ಕೆ 75 ಕೋಟಿಗಾಗಿ ಬೇಡಿಕೆ ಇಟ್ಟಿದ್ದೇವೆ. ಸಮ್ಮಿಶ್ರ ಸರ್ಕಾರ ಜನರ ಪರವಾಗಿದೆ ಅನ್ನೋದು ನಮಗೆ ಹೆಮ್ಮೆ. ಬಿಜೆಪಿಯವರು ಏನೂ ಕೆಲಸ ಮಾಡದೆ ಮತ ಕೇಳ್ತಾರೆ. ನಾವು ಕೆಲಸ ಮಾಡಿ ಮತ ಕೇಳ್ತೀವಿ, ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಕಾಂಗ್ರೇಸ್ ಗೆ ಇಡೀ ರಾಜ್ಯದಲ್ಲಿ ಅಧಿಕಾರ ಸಿಗಲಿದೆ ಎಂದು ಹೇಳಿದರು.

 

 

Vishwa News 24

Recent Posts

ಬೈಕಂಪಾಡಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ – vishwanews24

ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…

16 hours ago

ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ  – vishwanews24

ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ  ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…

16 hours ago

ವಿಧಾನ ಪರಿಷತ್ ಸಭಾ​​ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ – vishwanews24

ವಿಧಾನ ಪರಿಷತ್ ಸಭಾ​​ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್​​ ಕಲಾಪ…

17 hours ago

ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು – vishwanews24

ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…

18 hours ago

ಹಿಂದೂ ಸಂಘಟನೆಗಳ ಮುಖಂಡರಿಗೆ ಜಿಲ್ಲೆ ಪ್ರವೇಶ ನಿಷೇಧ: ಉಡುಪಿ ಜಿಲ್ಲಾ ವಿಹಿಂಪ–ಬಜರಂಗದಳ ತೀವ್ರ ಖಂಡನೆ – vishwanews24

ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…

18 hours ago

ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರ ಪ್ರವೇಶ ನಿರ್ಬಂಧ: ವಿಹಿಂಪ ಖಂಡನೆ – vishwanews24

ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…

18 hours ago