ಬೆಂಗಳೂರು: ರಾಜ್ಯಾದ್ಯಂತ ಯುಗಾದಿಯನ್ನು ಧಾರ್ಮಿಕ ದಿನವನ್ನಾಗಿ ಆಚರಣೆ ಮಾಡಲು ಮುಜರಾಯಿ ಸಚಿವೆ ಶಶಿಕಲಾ ಜೊಲ್ಲೆ ಸೂಚನೆ ನೀಡಿದ್ದಾರೆ. ರಾಜ್ಯದ ಧಾರ್ಮಿಕ ದತ್ತಿ ಇಲಾಖೆಯ ದೇವಾಲಯಗಳಿಗೆ ಸುತ್ತೋಲೆ ಹೊರಡಿಸುವಂತೆ ಸೂಚನೆ ನೀಡಿದ್ದಾರೆ. ಚಾಂದ್ರಮಾನ ಮತ್ತು ಸೌರಮಾನ ಯುಗಾದಿಯ ದಿನಗಳಂದು ಇಲಾಖಾ ವ್ಯಾಪ್ತಿಯ ಎಲ್ಲಾ ಅಧಿಸೂಚಿತ ದೇವಾಲಯಗಳಲ್ಲಿ ಧಾರ್ಮಿಕ ದಿನಾಚರಣೆ ಆಚರಿಸುವಂತೆ ಸೂಚನೆ ಮುಜರಾಯಿ ಸಚಿವೆ ಶಶಿಕಲಾ ಜೊಲ್ಲೆ ಸೂಚನೆ ನೀಡಿದ್ದಾರೆ.
ದೇವಾಲಯಗಳಲ್ಲಿ ಪಂಚಾಂಗ ಶ್ರವಣ, ಹರಿಕಥೆ, ವಿಶೇಷ ಪೂಜೆ, ಭಜನೆ, ಹರಿಕಥೆ, ಪ್ರಸಾದ ವಿತರಣೆ ಮುಂತಾದ ಕಾರ್ಯಕ್ರಮ ಹಮ್ಮಿಕೊಂಡು ಧಾರ್ಮಿಕ ದಿನವನ್ನು ವಿಜೃಂಭಣೆಯಿಂದ ಆಚರಣೆ ಮಾಡಲು ಸೂಚನೆ ನೀಡಿದ್ದಾರೆ. ಜತೆಗೆ ಸೂಕ್ತ ಸುತ್ತೋಲೆ ಹೊರಡಿಸುವಂತೆ ಧಾರ್ಮಿಕ ದತ್ತಿ ಇಲಾಖೆ ಆಯುಕ್ತರಿಗೆ ಸಚಿವೆ ಸೂಚನೆ ನೀಡಿದ್ದಾರೆ. ರಾಜ್ಯದ ಅಭಿವೃದ್ಧಿಗಾಗಿ ಇದೇ ಸಂದರ್ಭದಲ್ಲಿ ವಿಶೇಷ ಪೂಜೆ ಮತ್ತು ಪ್ರಾರ್ಥನೆಗಳನ್ನು ರಾಜ್ಯದ ದೇವಾಲಯಗಳಲ್ಲಿ ಕೈಗೊಳ್ಳಲು ಕೂಡಾ ಸೂಚನೆ ನೀಡಿದ್ದಾರೆ.
ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ : ಪೃಥ್ವಿರಾಜ್…
ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…
ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…
ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…
ಸಕ್ಕರೆ ರಫ್ತಿಗೆ ಸೆ.30 ರವರೆಗೆ ಸಂಪೂರ್ಣ ನಿಷೇಧ ಹೇರಿದ ಸರ್ಕಾರ ನವದೆಹಲಿ: ದೇಶೀಯ ಮಾರುಕಟ್ಟೆಯಲ್ಲಿ ಸಕ್ಕರೆ ಬೆಲೆಯನ್ನು ನಿಯಂತ್ರಿಸಲು ಮತ್ತು…
ಹಿಜಬ್ ಬಗ್ಗೆ ಮಾತಾಡುವ ಬಿಜೆಪಿಯವರು ನೀಟ್ ಬಗ್ಗೆ ಮಾತಾಡಲಿ : ಮಧು ಬಂಗಾರಪ್ಪ ಆಕ್ರೋಶ ಬೆಂಗಳೂರು: ಹಿಜಬ್ ಬಗ್ಗೆ ಮಾತಾಡುವ…