Featured

ರಾಜ್ಯದಲ್ಲಿ ಯುವ ಜನರ  ಹಠಾತ್ ಸಾವು : ತನಿಖೆ ನಡೆಸಲು ತಜ್ಞರ ಸಮಿತಿ ರಚಿಸುವಂತೆ ಸಿಎಂ ಆದೇಶ  – vishwanews24

ರಾಜಾರಾಂ ತಲ್ಲೂರು ಪತ್ರಕ್ಕೆ ಸಿಎಂ ಸ್ಪಂದನೆ; ಹಠಾತ್ ಸಾವುಗಳ ಅಧ್ಯಯನಕ್ಕೆ ಸಮಿತಿ ರಚಿಸುವಂತೆ ಆದೇಶ

ಉಡುಪಿ,: ರಾಜ್ಯದಲ್ಲಿ ಯುವಕರ ಹಠಾತ್ ಸಾವಿನ ಹೆಚ್ಚಳದ ಬಗ್ಗೆ ಹಿರಿಯ ಪತ್ರಕರ್ತ ರಾಜಾರಾಮ್ ತಲ್ಲೂರ್ ಅವರ ಪತ್ರದ ಮೇರೆಗೆ ಸಿಎಂ ಸಿದ್ದರಾಮಯ್ಯ ಅವರು ರಾಜ್ಯದಲ್ಲಿ ಹೆಚ್ಚುತ್ತಿರುವ ಯುವಕರ ಹಠಾತ್ ಸಾವುಗಳ ಕುರಿತು ತನಿಖೆ ನಡೆಸಲು ತಜ್ಞರ ಸಮಿತಿ ರಚಿಸುವಂತೆ ಆದೇಶ ಹೊರಡಿಸಿದ್ದಾರೆ.

ಇಂತಹ ಹಠಾತ್ ಸಾವುಗಳ ಕುರಿತಂತೆ ಹಾಗೂ ಮುಂದೆ ಈ ರೀತಿಯ ಸಾವುಗಳು ಸಂಭವಿಸದಂತೆ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ಸಮರ್ಪಕ ಸಂಶೋಧನೆ ನಡೆಸಲು ಒಂದು ತಜ್ಞರ ಹಾಗೂ ವಿಜ್ಞಾನಿಗಳ ಸಮಿತಿಯನ್ನು ರಚಿಸಿ, ವರದಿ ಪಡೆದು, ಅಗತ್ಯ ಕಟ್ಟುನಿಟ್ಟಿನ ಕ್ರಮಗಳನ್ನು ತೆಗೆದುಕೊಳ್ಳುವಂತೆ ಸಿದ್ದರಾಮಯ್ಯ ಸೂಚಿಸಿದ್ದಾರೆ.

ರಾಜಾರಾಂ ತಲ್ಲೂರು ಅವರು, ತಮ್ಮ ಇ-ಮೇಲ್ ಮೂಲಕ, ಇತ್ತೀಚಿಗೆ ರಾಜ್ಯದಲ್ಲಿ ಹೃದಯಾಘಾತ, ಹೃದಯಸ್ತಂಭನ, ಮೆದುಳು ಸಂಬಂಧಿ, ನರ ಸಂಬಂಧಿ ಮತ್ತಿತರ ಕಾರಣಗಳಿಂದಾಗಿ ಯುವ ಜನರು ಹಠಾತ್ ಸಾವಿಗೀಡಾಗುತ್ತಿರುವುದು ದಿನಪತ್ರಿಕೆಗಳಲ್ಲಿ ವರದಿಯಾಗುತ್ತಿದ್ದು, ಪ್ರತಿ ಸಾವು ಅವರ ಅವಲಂಬಿತ ಕುಟುಂಬಗಳನ್ನು ಆರ್ಥಿಕ-ಸಾಮಾಜಿಕ ಸಮಸ್ಯೆಗಳಿಗೆ ತಳ್ಳುತ್ತಿದೆ ಎಂದು ತಿಳಿಸಿದ್ದಾರೆ.

ಈ ಸಾವುಗಳು ಕೋವಿಡ್ ಅಥವಾ ಕೋವಿಡ್ ಲಸಿಕೆಯ ಅಡ್ಡ ಪರಿಣಾಮಗಳ ಕಾರಣಕ್ಕೆ ಸಂಭವಿಸುತ್ತಿರಬಹುದೆಂದು ಸಾರ್ವಜನಿಕ ವಲಯದಲ್ಲಿ ಚರ್ಚೆಯಾಗುತ್ತಿದೆ. ಆದ್ದರಿಂದ, ಕೋವಿಡ್ ಅಥವಾ ಕೋವಿಡ್ ಲಸಿಕೆಯ ಅಡ್ಡ ಪರಿಣಾಮಗಳಿಂದ ಹಠಾತ್ ಸಾವಿಗೀಡಾದವರ ಬಗ್ಗೆ ಅಧ್ಯಯನ ನಡೆಸಿ, ಇಂತಹ ಸಾವುಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಳ್ಳುವಂತೆ ಪತ್ರದಲ್ಲಿ ಒತ್ತಾಯಿಸಿದ್ದಾರೆ.

Vishwa News 24

Recent Posts

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು – vishwanews24

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…

4 hours ago

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ – vishwanews24

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …

4 hours ago

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ – vishwanews24

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…

4 hours ago

ಮುಂಬೈನಲ್ಲಿ ಮುಂಗಾರು: ರೈಲು ನಿಲ್ದಾಣ ಸೇರಿದಂತೆ ಹಲವು ಪ್ರದೇಶಗಳು ಜಲಾವೃತ – vishwanews24

ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…

7 hours ago

ಜೂ.25 ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ – vishwanews24

ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…

8 hours ago

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು – vishwanews24

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…

8 hours ago