Featured

ರಾಜ್ಯದಲ್ಲಿ ರಾಜಕೀಯದ ಸುನಾಮಿ ಅಲೆ JDS ಪರ, ಎಲ್ಲ ಪಕ್ಷಗಳೂ ಕೊಚ್ಚಿ ಹೋಗಿ ಬಹುಮತದೊಂದಿಗೆ JDS ಅಧಿಕಾರಕ್ಕೆ :ಎಚ್‌.ಡಿ. ಕುಮಾರಸ್ವಾಮಿ – Vishwanews24

ರಾಜ್ಯದಲ್ಲಿ ರಾಜಕೀಯದ ಸುನಾಮಿ ಅಲೆ JDS ಪರ, ಎಲ್ಲ ಪಕ್ಷಗಳೂ ಕೊಚ್ಚಿ ಹೋಗಿ ಬಹುಮತದೊಂದಿಗೆ JDS ಅಧಿಕಾರಕ್ಕೆ :ಎಚ್‌.ಡಿ. ಕುಮಾರಸ್ವಾಮಿ

ತುಮಕೂರು: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್‌ ಸಂಪೂರ್ಣ ಬಹುಮತದೊಂದಿಗೆ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ, ರಾಜ್ಯದಲ್ಲಿ ರಾಜಕೀಯದ ಸುನಾಮಿ ಅಲೆ ಎದ್ದಿದ್ದು, ಜನತಾ ದಳದ ಪರವಾಗಿದೆ. ಜೆಡಿಎಸ್‌ನ ಈ ಸುನಾಮಿ ಅಲೆಯಲ್ಲಿ ಎಲ್ಲ ಪಕ್ಷಗಳೂ ಕೊಚ್ಚಿ ಹೋಗಲಿವೆ ಎಂದರು.

ನಗರದ ಸಿದ್ಧಗಂಗಾ ಮಠಕ್ಕೆ ಪಂಚರತ್ನ ರಥಯಾತ್ರೆ ಆಗಮಿಸಿದ ಸಂದರ್ಭದಲ್ಲಿ ಲಿಂಗೈಕ್ಯ ಡಾ. ಶ್ರೀ ಶಿವಕುಮಾರ ಸ್ವಾಮೀಜಿಯವರ ಗದ್ದುಗೆಗೆ ಪೂಜೆ ಸಲ್ಲಿಸಿ ದರ್ಶನ ಪಡೆದ ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ಈಗಾಗಲೇ ರಾಜ್ಯದ ಜನತೆ ಜೆಡಿಎಸ್‌ಗೆ ಬಹುಮತ ನೀಡುವ ತೀರ್ಮಾನ ಮಾಡಿದ್ದಾರೆ. ರಾಜಕೀಯ ಗಾಳಿ ಗಂಧ ಗೊತ್ತಿಲ್ಲದವರೂ ಸಹ ಕುಮಾರಣ್ಣ ಸಿಎಂ ಆಗಬೇಕು ಎಂಬ ಮಾತುಗಳನ್ನಾಡುತ್ತಿದ್ದಾರೆ ಎಂದರು.

 

ರಾಜ್ಯದ 36 ವಿಧಾನಸಭಾ ಕ್ಷೇತ್ರದಲ್ಲಿ ಮೊದಲನೇ ಹಂತದ ಕಾರ್ಯಕ್ರಮ ನಿಗದಿ ಮಾಡಲಾಗಿದೆ. ಜನವರಿ 3 ರಿಂದ 2ನೇ ಹಂತದ ರಥಯಾತ್ರೆ ಕಲಬುರಗಿ, ಬೀದರ್‌, ರಾಯಚೂರು, ವಿಜಯಪುರ ಸೇರಿ ಕಲ್ಯಾಣ ಕರ್ನಾಟಕದ ಭಾಗದಲ್ಲಿ ಯಾತ್ರೆ ನಡೆಯಲಿದೆ ಎಂದರು.

ಅಭ್ಯರ್ಥಿಗಳ ಪಟ್ಟಿ ಸದ್ಯದಲ್ಲೇ ಘೋಷಣೆ: ಮುಂಬರುವ ಚುನಾವಣೆಗೆ ಅಭ್ಯರ್ಥಿಗಳ ಪಟ್ಟಿಯನ್ನು ಸದ್ಯದಲ್ಲೇ ಘೋಷಣೆ ಮಾಡಲಾಗುವುದು. ಇದಕ್ಕೆ ಪೂರಕವಾಗಿ ರಥಯಾತ್ರೆ ಸಂಚರಿಸಿದ ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆ ಯಲ್ಲಿ ಈಗಾಗಲೇ 10 ಅಭ್ಯರ್ಥಿಗಳ ಹೆಸರನ್ನು ಘೋಷಣೆ ಮಾಡಲಾಗಿದೆ. ಡಿ. 7ರಂದು ಕೆಜಿಎಫ್ನಲ್ಲಿ ರಥಯಾತ್ರೆ ನಡೆಯಲಿದ್ದು, ಆ ಸಂದರ್ಭದಲ್ಲಿ ಆ ಜಿಲ್ಲೆಯ ಪಕ್ಷದ ಅಭ್ಯರ್ಥಿಗಳನ್ನು ಘೋಷಣೆ ಮಾಡಲಾಗುತ್ತದೆ ಎಂದರು.

Vishwa News 24

Recent Posts

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

1 day ago

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ : ಬೆಸ್ಕಾಂ ಸ್ಪಷ್ಟನೆ – vishwanews24

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…

1 day ago

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ – vishwanews24

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…

1 day ago

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಆರೋಪ – vishwanews24

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಗಂಭೀರ…

1 day ago

ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ: ಸಂಸದ ಯದುವೀರ್ ಒಡೆಯರ್ ಆಕ್ಷೇಪ – vishwanews24

ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…

1 day ago

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ – vishwanews24

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…

1 day ago