ಬೆಂಗಳೂರು: “ಭೂ ಸುಧಾರಣೆ ಕಾಯ್ದೆ ವಿಚಾರವಾಗಿ ರಾಜ್ಯದಲ್ಲಿ ರೈತರಿಗೆ ಸ್ಪಂದಿಸುವ ಪಕ್ಷವೇನಾದರೂ ಇದ್ದರೆ ಅದು ಜೆಡಿಎಸ್ ಮಾತ್ರ, ಕಾಂಗ್ರೆಸ್‌ಗೆ ಬಿಜೆಪಿ ವಿರುದ್ಧ ಹೋರಾಡಲು ಸಾಧ್ಯವಾಗುತ್ತಿಲ್ಲ. ಹಾಗಾಗಿ ಜೆಡಿಎಸ್ ವಿರುದ್ಧ ತನ್ನ ಹೋರಾಟಗಳನ್ನು ರೂಪಿಸುತ್ತಿದೆ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಆರೋಪಿಸಿದ್ದಾರೆ.
ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು, “2013-14ರ ಕಾಲ. ಕಾಂಗ್ರೆಸ್ ಅಧಿಕಾರದಲ್ಲಿತ್ತು. ಜಾನುವಾರುಗಳಲ್ಲಿ ಕಾಲುಬಾಯಿ ಜ್ವರ ಕಾಣಿಸಿಕೊಂಡಿತ್ತು. ರಾಮನಗರ, ಮಂಡ್ಯದಲ್ಲಿ ರೋಗದ ರುದ್ರ ನರ್ತನ. ಸರ್ಕಾರ ಸುಮ್ಮನಿತ್ತು. ಆಗ ಚನ್ನಪಟ್ಟಣ, ರಾಮನಗರ, ಕನಕಪುರ, ಮಂಡ್ಯದಲ್ಲಿ ಪ್ರತಿ ಕುಟುಂಬಕ್ಕೆ ₹25 ಸಾವಿರ ನೆರವು ವೈಯಕ್ತಿವಾಗಿ ನೀಡಿದ್ದೆ. ಆಗ ಈ ರೈತ ನಾಯಕರು ಎಲ್ಲಿದ್ದರು?” ಎಂದು ಪ್ರಶ್ನಿಸಿದ್ದಾರೆ.
“ಮಹದಾಯಿಗಾಗಿ ಯಮನೂರಿನಲ್ಲಿ ಹೋರಾಟ ನಡೆಸುತ್ತಿದ್ದ ರೈತರ ಮೇಲೆ ಕಾಂಗ್ರೆಸ್ ಸರ್ಕಾರ ಹಲ್ಲೆ ಮಾಡಿತ್ತು. ಆ ದಾಳಿಯನ್ನು ರೈತರು ಇಂದೂ ಮರೆತಿಲ್ಲ ಎಂದು ಇತ್ತೀಚೆಗೆ ಪತ್ರಿಕೆಗಳೂ ವರದಿ ಮಾಡಿವೆ. ಅಂದು ಯಮನೂರಿಗೆ ಧಾವಿಸಿ ರೈತರಿಗೆ ಸಾಂತ್ವನ ಹೇಳಿದ್ದು, ನಾನು. ಸರ್ಕಾರ ರೈತರ ಮೇಲೆ ದಾಳಿ ನಡೆಸುತ್ತಿದ್ದಾಗ ಈ ರೈತ ನಾಯಕರು ಎಲ್ಲಿದ್ದರು?” ಎಂದು ಕೇಳಿದ್ದಾರೆ.
“ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ರಾಜ್ಯದಲ್ಲಿ ರೈತರ ಆತ್ಮಹತ್ಯೆ ಪ್ರಕರಣಗಳು ಹೆಚ್ಚಾಗಿದ್ದವು. ನಿತ್ಯವೂ ಆತ್ಮಹತ್ಯೆಗಳು ವರದಿಯಾಗುತ್ತಿದ್ದವು. ಆಗ ರಾಜ್ಯದಾದ್ಯಂತ ಪ್ರವಾಸ ಮಾಡಿ, ಸಂಕಷ್ಟದಲ್ಲಿದ್ದ ರೈತರಿಗೆ ಕೈಲಾದಷ್ಟು ನೆರವು ನೀಡಿ, ಅವರಲ್ಲಿ ವಿಶ್ವಾಸ ಮೂಡಿಸುವ ಪ್ರಯತ್ನವನ್ನು ನಾನು ಮಾಡಿದೆ. ಆಗ ಈ ರೈತ ನಾಯಕರು ಎಲ್ಲಿದ್ದರು?” ಎಂದು ಪ್ರಶ್ನಿಸಿದ್ದಾರೆ.
ಇವತ್ತಿನ ಕೆಲ ರೈತ ಸಂಘಗಳು ರೈತರಿಗಾಗಿ ಹೋರಾಡುವುದನ್ನು ಬಿಟ್ಟು ಕಾಂಗ್ರೆಸ್‌ನಂಥ ಸಮಾಜವನ್ನು ಒಡೆಯುವ, ಜನರ ಆಶಯಗಳಿಗೆ ವಿರುದ್ಧವಾದ ಚಿಂತನೆಗಳನ್ನು ಹೊಂದಿರುವ ಪಕ್ಷದ ಪರವಾಗಿ ಕೆಲಸ ಮಾಡುತ್ತಿವೆ. ಭೂ ಸುಧಾರಣೆ ಕಾಯ್ದೆ ವಿಚಾರವಾಗಿ ಅನಗತ್ಯ ಹೋರಾಟ ನಡೆಸುತ್ತಿರುವ ಕೆಲ ರೈತ ಸಂಘಗಳ ಹಿಂದೆ ಕಾಂಗ್ರೆಸ್ ತೆರೆಮರೆಯ ರಾಜಕಾರಣ ಮಾಡುತ್ತಿದೆ” ಎಂದು ಹೇಳಿದ್ದಾರೆ.
“ಕಾಂಗ್ರೆಸ್‌ಗೆ ಬಿಜೆಪಿ ವಿರುದ್ಧ ಹೋರಾಡಲು ಸಾಧ್ಯವಾಗುತ್ತಿಲ್ಲ. ಹಾಗಾಗಿ ಜೆಡಿಎಸ್ ವಿರುದ್ಧ ತನ್ನ ಹೋರಾಟಗಳನ್ನು ರೂಪಿಸುತ್ತಿದೆ. ರೈತ ನಾಯಕರು ಎನಿಸಿಕೊಂಡ ಕೆಲವರ ಹಿಂದೆ ಕಾಂಗ್ರೆಸ್ ಈಗ ಅಡಗಿ ಕುಳಿತಿದೆ. ಅವರ ಮೂಲಕ ರಾಜಕೀಯದ ಹೇಳಿಕೆಗಳನ್ನು ಕೊಡಿಸುತ್ತಿದೆ. ಈ ಮೂಲಕ ಕಾಂಗ್ರೆಸ್ ರೈತ ಸಂಘಗಳನ್ನೂ ಒಡೆಯುವ ಕೆಲಸಕ್ಕೆ ಕೈ ಹಾಕಿದೆ” ಎಂದು ಕಿಡಿಕಾರಿದ್ದಾರೆ.
ದುರಸ್ತಿ ಕಾಮಗಾರಿ: ಅ.7ರಂದು ಹಂದಾಡಿ ರೈಲ್ವೆ ಗೇಟ್ ಬಂದ್ ಕುಂದಾಪುರ : ರೈಲ್ವೆ ಲೆವೆಲ್ ಕ್ರಾಸಿಂಗ್ ಗೇಟ್‌ನಲ್ಲಿ ಅಗತ್ಯ ದುರಸ್ತಿ…
ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ…
ಎಂಆರ್‌ಪಿಎಲ್ ದುರಂತ: ಮೃತರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ, ಸದಸ್ಯರೊಬ್ಬರಿಗೆ ಉದ್ಯೋಗ : ಸಂಸದ ಕ್ಯಾ. ಬ್ರಿಜೇಶ್ ಚೌಟ ಮಂಗಳೂರು:…
ಉಡುಪಿ: ಜೈಲು ವಾರ್ಡನ್‌ಗೆ ಕೊಲೆ ಬೆದರಿಕೆ, ಹಲ್ಲೆ ಪ್ರಕರಣ :ಆರೋಪಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ ಉಡುಪಿ: ಸುಮಾರು…
ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕರೊಬ್ಬರು ಮೃತಪಟ್ಟ ಘಟನೆ ಸೋಮವಾರ ಬೆಳಗ್ಗೆ…
ದ. ಕ, ಉಡುಪಿಯಲ್ಲಿ ಅ. 11 ರವರೆಗೆ ಮಳೆಯಾಗುವ ನಿರೀಕ್ಷೆ: ಹವಾಮಾನ ಇಲಾಖೆ ಮುನ್ಸೂಚನೆ ಮಂಗಳೂರು/ಉಡುಪಿ: ದಕ್ಷಿಣ ಕನ್ನಡ (ದ.ಕ)…