Featured

ರಾಜ್ಯದಲ್ಲಿ ರೈತರಿಗೆ ಸ್ಪಂದಿಸುವ ಪಕ್ಷವೇನಾದರೂ ಇದ್ದರೆ ಅದು ಜೆಡಿಎಸ್‌ ಮಾತ್ರ, ಕಾಂಗ್ರೆಸ್‌ಗೆ ಬಿಜೆಪಿ ವಿರುದ್ಧ ಹೋರಾಡಲು ಸಾಧ್ಯವಾಗುತ್ತಿಲ್ಲ. ಹಾಗಾಗಿ ಜೆಡಿಎಸ್‌ ವಿರುದ್ಧ ತನ್ನ ಹೋರಾಟಗಳನ್ನು ರೂಪಿಸುತ್ತಿದೆ : ಕುಮಾರಸ್ವಾಮಿ -Vishwanews24

ರಾಜ್ಯದಲ್ಲಿ ರೈತರಿಗೆ ಸ್ಪಂದಿಸುವ ಪಕ್ಷವೇನಾದರೂ ಇದ್ದರೆ ಅದು ಜೆಡಿಎಸ್‌ ಮಾತ್ರ, ಕಾಂಗ್ರೆಸ್‌ಗೆ ಬಿಜೆಪಿ ವಿರುದ್ಧ ಹೋರಾಡಲು ಸಾಧ್ಯವಾಗುತ್ತಿಲ್ಲ. ಹಾಗಾಗಿ ಜೆಡಿಎಸ್‌ ವಿರುದ್ಧ ತನ್ನ ಹೋರಾಟಗಳನ್ನು ರೂಪಿಸುತ್ತಿದೆ : ಕುಮಾರಸ್ವಾಮಿ -Vishwanews24

ಬೆಂಗಳೂರು: “ಭೂ ಸುಧಾರಣೆ ಕಾಯ್ದೆ ವಿಚಾರವಾಗಿ ರಾಜ್ಯದಲ್ಲಿ ರೈತರಿಗೆ ಸ್ಪಂದಿಸುವ ಪಕ್ಷವೇನಾದರೂ ಇದ್ದರೆ ಅದು ಜೆಡಿಎಸ್‌ ಮಾತ್ರ, ಕಾಂಗ್ರೆಸ್‌ಗೆ ಬಿಜೆಪಿ ವಿರುದ್ಧ ಹೋರಾಡಲು ಸಾಧ್ಯವಾಗುತ್ತಿಲ್ಲ. ಹಾಗಾಗಿ ಜೆಡಿಎಸ್‌ ವಿರುದ್ಧ ತನ್ನ ಹೋರಾಟಗಳನ್ನು ರೂಪಿಸುತ್ತಿದೆ ಎಂದು ಮಾಜಿ ಸಿಎಂ ಹೆಚ್‌.ಡಿ.ಕುಮಾರಸ್ವಾಮಿ ಆರೋಪಿಸಿದ್ದಾರೆ.

 

ಈ ಬಗ್ಗೆ ಸರಣಿ ಟ್ವೀಟ್‌ ಮಾಡಿರುವ ಅವರು, “2013-14ರ ಕಾಲ. ಕಾಂಗ್ರೆಸ್‌ ಅಧಿಕಾರದಲ್ಲಿತ್ತು. ಜಾನುವಾರುಗಳಲ್ಲಿ ಕಾಲುಬಾಯಿ ಜ್ವರ ಕಾಣಿಸಿಕೊಂಡಿತ್ತು. ರಾಮನಗರ, ಮಂಡ್ಯದಲ್ಲಿ ರೋಗದ ರುದ್ರ ನರ್ತನ. ಸರ್ಕಾರ ಸುಮ್ಮನಿತ್ತು. ಆಗ ಚನ್ನಪಟ್ಟಣ, ರಾಮನಗರ, ಕನಕಪುರ, ಮಂಡ್ಯದಲ್ಲಿ ಪ್ರತಿ ಕುಟುಂಬಕ್ಕೆ ₹25 ಸಾವಿರ ನೆರವು ವೈಯಕ್ತಿವಾಗಿ ನೀಡಿದ್ದೆ. ಆಗ ಈ ರೈತ ನಾಯಕರು ಎಲ್ಲಿದ್ದರು?” ಎಂದು ಪ್ರಶ್ನಿಸಿದ್ದಾರೆ.

“ಮಹದಾಯಿಗಾಗಿ ಯಮನೂರಿನಲ್ಲಿ ಹೋರಾಟ ನಡೆಸುತ್ತಿದ್ದ ರೈತರ ಮೇಲೆ ಕಾಂಗ್ರೆಸ್ ಸರ್ಕಾರ ಹಲ್ಲೆ ಮಾಡಿತ್ತು. ಆ ದಾಳಿಯನ್ನು ರೈತರು ಇಂದೂ ಮರೆತಿಲ್ಲ ಎಂದು ಇತ್ತೀಚೆಗೆ ಪತ್ರಿಕೆಗಳೂ ವರದಿ ಮಾಡಿವೆ. ಅಂದು ಯಮನೂರಿಗೆ ಧಾವಿಸಿ ರೈತರಿಗೆ ಸಾಂತ್ವನ ಹೇಳಿದ್ದು, ನಾನು. ಸರ್ಕಾರ ರೈತರ ಮೇಲೆ ದಾಳಿ ನಡೆಸುತ್ತಿದ್ದಾಗ ಈ ರೈತ ನಾಯಕರು ಎಲ್ಲಿದ್ದರು?” ಎಂದು ಕೇಳಿದ್ದಾರೆ.

“ಕಾಂಗ್ರೆಸ್‌ ಅಧಿಕಾರದಲ್ಲಿದ್ದಾಗ ರಾಜ್ಯದಲ್ಲಿ ರೈತರ ಆತ್ಮಹತ್ಯೆ ಪ್ರಕರಣಗಳು ಹೆಚ್ಚಾಗಿದ್ದವು. ನಿತ್ಯವೂ ಆತ್ಮಹತ್ಯೆಗಳು ವರದಿಯಾಗುತ್ತಿದ್ದವು. ಆಗ ರಾಜ್ಯದಾದ್ಯಂತ ಪ್ರವಾಸ ಮಾಡಿ, ಸಂಕಷ್ಟದಲ್ಲಿದ್ದ ರೈತರಿಗೆ ಕೈಲಾದಷ್ಟು ನೆರವು ನೀಡಿ, ಅವರಲ್ಲಿ ವಿಶ್ವಾಸ ಮೂಡಿಸುವ ಪ್ರಯತ್ನವನ್ನು ನಾನು ಮಾಡಿದೆ. ಆಗ ಈ ರೈತ ನಾಯಕರು ಎಲ್ಲಿದ್ದರು?” ಎಂದು ಪ್ರಶ್ನಿಸಿದ್ದಾರೆ.

ಇವತ್ತಿನ ಕೆಲ ರೈತ ಸಂಘಗಳು ರೈತರಿಗಾಗಿ ಹೋರಾಡುವುದನ್ನು ಬಿಟ್ಟು ಕಾಂಗ್ರೆಸ್‌ನಂಥ ಸಮಾಜವನ್ನು ಒಡೆಯುವ, ಜನರ ಆಶಯಗಳಿಗೆ ವಿರುದ್ಧವಾದ ಚಿಂತನೆಗಳನ್ನು ಹೊಂದಿರುವ ಪಕ್ಷದ ಪರವಾಗಿ ಕೆಲಸ ಮಾಡುತ್ತಿವೆ. ಭೂ ಸುಧಾರಣೆ ಕಾಯ್ದೆ ವಿಚಾರವಾಗಿ ಅನಗತ್ಯ ಹೋರಾಟ ನಡೆಸುತ್ತಿರುವ ಕೆಲ ರೈತ ಸಂಘಗಳ ಹಿಂದೆ ಕಾಂಗ್ರೆಸ್‌ ತೆರೆಮರೆಯ ರಾಜಕಾರಣ ಮಾಡುತ್ತಿದೆ” ಎಂದು ಹೇಳಿದ್ದಾರೆ.

“ಕಾಂಗ್ರೆಸ್‌ಗೆ ಬಿಜೆಪಿ ವಿರುದ್ಧ ಹೋರಾಡಲು ಸಾಧ್ಯವಾಗುತ್ತಿಲ್ಲ. ಹಾಗಾಗಿ ಜೆಡಿಎಸ್‌ ವಿರುದ್ಧ ತನ್ನ ಹೋರಾಟಗಳನ್ನು ರೂಪಿಸುತ್ತಿದೆ. ರೈತ ನಾಯಕರು ಎನಿಸಿಕೊಂಡ ಕೆಲವರ ಹಿಂದೆ ಕಾಂಗ್ರೆಸ್‌ ಈಗ ಅಡಗಿ ಕುಳಿತಿದೆ. ಅವರ ಮೂಲಕ ರಾಜಕೀಯದ ಹೇಳಿಕೆಗಳನ್ನು ಕೊಡಿಸುತ್ತಿದೆ. ಈ ಮೂಲಕ ಕಾಂಗ್ರೆಸ್‌ ರೈತ ಸಂಘಗಳನ್ನೂ ಒಡೆಯುವ ಕೆಲಸಕ್ಕೆ ಕೈ ಹಾಕಿದೆ” ಎಂದು ಕಿಡಿಕಾರಿದ್ದಾರೆ.

Vishwa News 24

Recent Posts

ಕಡಬ: ಚಿನ್ನದ ತೂಕ ಹೆಚ್ಚಿಸಿ ಬ್ಯಾಂಕ್‌ ಗೆ ವಂಚನೆಗೆ ಯತ್ನ: ಇಬ್ಬರ ಬಂಧನ – vishwanews24

ಕಡಬ: ಚಿನ್ನದ ತೂಕ ಹೆಚ್ಚಿಸಿ ಬ್ಯಾಂಕ್‌ ಗೆ ವಂಚನೆಗೆ ಯತ್ನ: ಇಬ್ಬರ ಬಂಧನ ಕಡಬ: ಚಿನ್ನಾಭರಣದ ತೂಕವನ್ನು ಕೃತಕವಾಗಿ ಹೆಚ್ಚಿಸಿ…

19 hours ago

ಮಹಾರಾಷ್ಟ್ರ : ಕುಸಿದು ಬಿದ್ದ ರತ್ನಗಿರಿ ರೈಲು ನಿಲ್ದಾಣದ ಛಾವಣಿ ; ತಪ್ಪಿದ ದೊಡ್ಡ ದುರಂತ- vishwanews24

ಮಹಾರಾಷ್ಟ್ರ : ಮಳೆ ಅಬ್ಬರ - ಕುಸಿದು ಬಿದ್ದ ರತ್ನಗಿರಿ ರೈಲು ನಿಲ್ದಾಣದ ಛಾವಣಿ ; ತಪ್ಪಿದ ದೊಡ್ಡ ದುರಂತ…

19 hours ago

ಶಿವಮೊಗ್ಗ: ಬಸ್ ನಿಲ್ದಾಣದಲ್ಲಿ ಚೀಲದೊಳಗೆ ನವಜಾತ ಹೆಣ್ಣು ಮಗು ಪತ್ತೆ  – vishwanews24

ಶಿವಮೊಗ್ಗ: ಬಸ್ ನಿಲ್ದಾಣದಲ್ಲಿ ಚೀಲದೊಳಗೆ ನವಜಾತ ಹೆಣ್ಣು ಮಗು ಪತ್ತೆ  ಶಿವಮೊಗ್ಗ: ನವಜಾತ ಹೆಣ್ಣು ಶಿಶುವೊಂದನ್ನು ಬಸ್ ನಿಲ್ದಾಣದಲ್ಲಿ ಅನಾಥವಾಗಿ…

19 hours ago

ಪಡುಬಿದ್ರಿ : ನಡಿಪಟ್ಟಣದಲ್ಲಿ ಕಡಲು ಕೊರೆತಕ್ಕೆ ತಡೆಗೋಡೆ ನಿರ್ಮಾಣಕ್ಕೆ ಸಚಿವ ಖಾದರ್ ಗೆ ವಿಶ್ವಾಸ್ ಅಮೀನ್ ಮನವಿ – vishwanews24

ಪಡುಬಿದ್ರಿ : ನಡಿಪಟ್ಟಣದಲ್ಲಿ ಕಡಲು ಕೊರೆತಕ್ಕೆ ತಡೆಗೋಡೆ ನಿರ್ಮಾಣಕ್ಕೆ ಸಚಿವ ಖಾದರ್ ಗೆ ವಿಶ್ವಾಸ್ ಅಮೀನ್ ಮನವಿ ಪಡುಬಿದ್ರಿ: ಉಡುಪಿ…

19 hours ago

ಬಂಟ್ವಾಳ : ಬಸ್ಸಿಗೆ ಕಾಯುತ್ತಿದ್ದ ವಿದ್ಯಾರ್ಥಿಗೆ ಚೂರಿ ಇರಿತ – vishwanews24

ಬಂಟ್ವಾಳ : ಬಸ್ಸಿಗೆ ಕಾಯುತ್ತಿದ್ದ ವಿದ್ಯಾರ್ಥಿಗೆ ಚೂರಿ ಇರಿತ ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಇರಾ…

20 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

4 days ago