ರಾಜ್ಯದಲ್ಲಿ ಲವ್ ಜಿಹಾದ್ ಹಾಗೂ ಗೋ ಹತ್ಯೆ ನಿಷೇಧ ಕಾಯ್ದೆ ಜಾರಿಯಾಗುತ್ತದೆ : ನಳೀನ್ ಕುಮಾರ್ ಕಟೀಲ್ -Vishwanews24
ರಾಜ್ಯದಲ್ಲಿ ಲವ್ ಜಿಹಾದ್ ಹಾಗೂ ಗೋ ಹತ್ಯೆ ನಿಷೇಧ ಕಾಯ್ದೆ ಜಾರಿಯಾಗುತ್ತದೆ : ನಳೀನ್ ಕುಮಾರ್ ಕಟೀಲ್ -Vishwanews24
ಬೆಂಗಳೂರು : ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಒಪ್ಪಲಿ ಬಿಡಲೀ, ರಾಜ್ಯದಲ್ಲಿ ಲವ್ ಜಿಹಾದ್ ಹಾಗೂ ಗೋ ಹತ್ಯೆ ನಿಷೇಧ ಕಾಯ್ದೆ ಜಾರಿಯಾಗುತ್ತದೆ ಎಂಬುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಘೋಷಣೆ ಮಾಡಿದ್ದಾರೆ.
ಆನೇಕಲ್ ನಲ್ಲಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಮಾತನಾಡಿದ ಅವರು, ಸಂಪುಟ ವಿಸ್ತರಣೆಯಲ್ಲ, ಪುನರ್ ರಚನೆಯಾಗಲಿದೆ ಎಂಬ ಸುಳಿವು ನೀಡಿದರು. ಅಲ್ಲದೇ ಬಿಜೆಪಿ ಸೇರಿದಂತ 17 ಶಾಸಕರು ಸಚಿವರಾಗಲು ಅರ್ಹರು. ಸಿಎಂ ಹಾಗೂ ಬಿಜೆಪಿ ವರಿಷ್ಠರ ಜೊತೆಗೆ ಚರ್ಚಿಸಿ ಸಚಿವ ಸ್ಥಾನ ನೀಡಲಾಗುತ್ತದೆ ಎಂಬುದಾಗಿ ತಿಳಿಸಿದರು.
ಇನ್ನೂ ಮುಂದುವರೆದು ಮಾತನಾಡಿದ ಅವರು, ರಾಜ್ಯದಲ್ಲಿ ಮೂಲ ಬಿಜೆಪಿಗರು, ವಲಸಿಗ ಬಿಜೆಪಿಗರು ಅನ್ನೋ ಪ್ರಶ್ನೆಯೇ ಇಲ್ಲ. ನಾಯಕತ್ವ ಬದಲಾವಣೆಯಂತೂ ಇಲ್ಲವೇ ಇಲ್ಲ ಎಂದರು.
ಲವ್ ಜಿಹಾದ್, ಗೋ ಹತ್ಯೆ ನಿಷೇಧ ಕಾಯ್ದೆಯ ಕುರಿತಂತೆ ಪುನರ್ ಉಚ್ಚರಿಸಿದ ಅವರು, ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಒಪ್ಪಲಿ ಬಿಡಲಿ, ಲವ್ ಜಿಹಾದ್ ಹಾಗೂ ಗೋ ಹತ್ಯೆ ನಿಷೇಧ ಕಾಯ್ದೆಯನ್ನು ಜಾರಿಯಾಗೇ ಆಗುತ್ತದೆ. ಅದರಲ್ಲಿ ಎರಡು ಮಾತಿಲ್ಲ ಎಂಬುದಾಗಿ ತಿಳಿಸಿದರು.
