ರಾಜ್ಯದಲ್ಲಿ ಲಾಕ್‌ಡೌನ್, ನೈಟ್ ಕರ್ಫ್ಯೂ ಇಲ್ಲ ; ಒಳಾಂಗಣ ಚಟುವಟಿಕೆಗಳಿಗೆ ಕಠಿಣ ಮಾರ್ಗಸೂಚಿ ರಚನೆ : ಸಿಎಂ ಯಡಿಯೂರಪ್ಪ -Vishwanews24
ರಾಜ್ಯದಲ್ಲಿ ಲಾಕ್‌ಡೌನ್, ನೈಟ್ ಕರ್ಫ್ಯೂ ಇಲ್ಲ ; ಒಳಾಂಗಣ ಚಟುವಟಿಕೆಗಳಿಗೆ ಕಠಿಣ ಮಾರ್ಗಸೂಚಿ ರಚನೆ : ಸಿಎಂ ಯಡಿಯೂರಪ್ಪ -Vishwanews24
ಬೆಂಗಳೂರು: ರಾಜ್ಯದಲ್ಲಿ ಲಾಕ್ ಡೌನ್ ಅಥವಾ ರಾತ್ರಿ ಕರ್ಫ್ಯೂ ಹೇರುವ ಯಾವುದೇ ಉದ್ದೇಶ ಇಲ್ಲ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ.
ಕೋವಿಡ್ ಸೋಂಕು ಹರಡುವುದನ್ನು ತಡೆಯಲು ಮದುವೆ, ಬರ್ತ್ ಡೇ ಪಾರ್ಟಿ, ಪಾರ್ಟಿಗಳು ಮತ್ತಿತರ ಕಾರ್ಯಕ್ರಮಗಳು ಸೇರಿದಂತೆ ಎಲ್ಲ ರೀತಿಯ ಒಳಾಂಗಣ ಚಟುವಟಿಕೆಗಳಿಗೆ ಕಠಿಣ ಮಾರ್ಗಸೂಚಿ ರಚಿಸಲಾಗುತ್ತದೆ ಎಂದು ಸಿಎಂ ಹೇಳಿದ್ದು, ಹೊರಾಂಗಣ ಕಾರ್ಯಕ್ರಮಗಳಿಗೆ ಹೆಚ್ಚಿನ ನಿರ್ಬಂಧಗಳಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ಇದನ್ನೂ ಓದಿ : ನೀವು ನಿಮ್ಮ ಧರ್ಮವನ್ನು ಅನುಸರಿಸಬೇಕು ಎಂದಿದ್ದರೆ ಬಿಜೆಪಿಗೆ ಮತ ನೀಡಬೇಡಿ : ಮಮತಾ ಬ್ಯಾನರ್ಜಿ -Vishwanews24
ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ಪ್ರಧಾನಮಂತ್ರಿ ನರೇಂದ್ರ ಮೋದಿ ನಡೆಸುತ್ತಿರುವ ವೀಡಿಯೊ ಕಾನ್ಫರೆನ್ಸ್‌ನಲ್ಲಿ ಭಾಗವಹಿಸಿದ ಬಳಿಕ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ಸಿಎಂ ಯಡಿಯೂರಪ್ಪ, ‘ಕೋವಿಡ್ -19 ಪ್ರೋಟೋಕಾಲ್‌ಗಳನ್ನು ಉಲ್ಲಂಘಿಸುವ, ಹೆಚ್ಚಿನ ಜನ ಸೇರುವ ದೊಡ್ಡ ಕಾರ್ಯಕ್ರಮಗಳನ್ನು ಸರ್ಕಾರ ಕಟ್ಟುನಿಟ್ಟಾಗಿ ನಿಯಂತ್ರಿಸುತ್ತದೆ’ ಎಂದು ಹೇಳಿದರು.
ಇದನ್ನೂ ಓದಿ :ಕಾಪು : ಮಾರ್ಚ್ 23 ಸುಗ್ಗಿ ಮಾರಿಪೂಜೆಯಂದು ಶಿಲಾಸೇವೆ ಸಮರ್ಪಣಾ ಸಮಾರಂಭ: ಕೆ ವಾಸುದೇವ ಶೆಟ್ಟಿ -Vishwanews24
