ಬೆಂಗಳೂರು: ರಾಜ್ಯದಲ್ಲಿ ಲಾಕ್ ಡೌನ್ ಜಾರಿ ಇಲ್ಲ. ಈ ಕುರಿತಂತೆ ಊಹಾಪೋಹಗಳಿಗೆ ಜನ ಕಿವಿಗೊಡಬಾರದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ಪುನರುಚ್ಚರಿಸಿದರು. ಅವರು ಇಂದು ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡುತ್ತಿದ್ದರು.
ಸದ್ಯಕ್ಕೆ ಲಾಕ್ ಡೌನ್ ಪ್ರಶ್ನೆಯೇ ಇಲ್ಲ. ಜನಜೀವನ ಎಂದಿನಂತೆ ನಡೆಯಬೇಕು. ಹೆಚ್ಚು ಜನರು ಸೇರುವಲ್ಲಿ ಕೋವಿಡ್ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಸಂಘಸಂಸ್ಥೆಗಳು ಹಮ್ಮಿಕೊಳ್ಳುವ ಕಾರ್ಯಕ್ರಮಗಳಲ್ಲಿ ಸಂಸ್ಥೆಗಳು ಜವಾಬ್ದಾರಿಯುತವಾಗಿ ನಡೆದುಕೊಂಡು ಕೋವಿಡ್ ನಿಯಮಗಳನ್ನು ಪಾಲಿಸಬೇಕು ಎಂದು ಮನವಿ ಮಾಡಿದರು. ಕೋವಿಡ್ ಬಗ್ಗೆ ಸರ್ಕಾರ ತೀವ್ರ ಕಟ್ಟೆಚ್ಚರ ವಹಿಸಿದೆ. ಕ್ಲಸ್ಟರ್ ಆಗಿರುವಲ್ಲಿ ವಿಶೇಷ ನಿಗಾ ವಹಿಸಲಾಗಿದೆ ಎಂದರು.
ಕೋವಿಡ್ ಹೊಸ ತಳಿ ಒಮಿಕ್ರಾನ್ ಕುರಿತು ನಿಗಾ ಇರಿಸಲಾಗಿದೆ. ಈಗಿರುವ ಡೆಲ್ಟಾ ತಳಿಯಿಂದ ಅಲ್ಲಲ್ಲಿ ಕ್ಲಸ್ಟರ್ ಆಗಿದೆ. ಎರಡು ಹಂತಗಳಲ್ಲಿ ಇದನ್ನು ನಿಭಾಯಿಸುವ ಕೆಲಸವನ್ನು ರಾಜ್ಯ ಸರ್ಕಾರ ಮಾಡು ತ್ತಿದ್ದು, ವೈಜ್ಞಾನಿಕವಾಗಿ ಕೈಗೊಳ್ಳಬೇಕಿರುವ ಕ್ರಮಗಳನ್ನು ಕೈಗೊಂಡಿದೆ., ಹೆಚ್ಚಿನ ತನಿಖೆಗೆ ಎನ್.ಸಿ.ಬಿ.ಎಸ್ ಗೂ ಮಾದರಿಗಳನ್ನು ಕಳುಹಿಸಲಾಗಿದೆ. ವಿದೇಶಗಳಿಂದ ಬಂದಿರುವ ಪ್ರಯಾಣಿಕರ ಬಗ್ಗೆ ವಿಶೇಷ ನಿಗಾ ಇರಿಸಿದ್ದು, ಸಂಪರ್ಕಿತರ ಪತ್ತೆ ಹಾಗೂ ಪರೀಕ್ಷೆಗಳನ್ನು ಮಾಡಲಾಗುತ್ತಿದೆ.
ಕ್ಲಸ್ಟರ್ ಗಳ ಬಗ್ಗೆ ಮಾರ್ಗಸೂಚಿ ಗಳನ್ನು ಬಿಡುಗಡೆ ಮಾಡಿದ್ದು, ಅಲ್ಲಿ ಪಾಲ್ಗೊಂಡಿದ್ದವರ ಪರೀಕ್ಷೆ, 7 ದಿನಗಳ ನಂತರ ಮತ್ತೊಮ್ಮೆ ಪರೀಕ್ಷೆ ಮಾಡಲು ಸೂಚಿಸಲಾಗಿದೆ. ಧಾರವಾಡದ ಎಸ್.ಡಿ.ಎಂ ಕಾಲೇಜಿನಲ್ಲಿ ಸುಮಾರು 4 ಸಾವಿರ ಜನರ ಪರೀಕ್ಷೆಯನ್ನು ಮಾಡಲಾಗಿದೆ. ಅದೇ ರೀತಿ ಮೈಸೂರು, ಹಾಸನ ಮತ್ತು ಬೆಂಗಳೂರಿನ ಆನೇಕಲ್ ನಲ್ಲಿನ ಕಸ್ಟರ್ ಗಳಲ್ಲಿ ತಪಾಸಣೆಯನ್ನು ತೀವ್ರ ಗೊಳಿಸಲಾಗಿದೆ. ಸಾಮಾನ್ಯ ಪರೀಕ್ಷೆಗಳನ್ನು ಹೆಚ್ಚಿಸಲೂ ಸಹ ಸೂಚನೆ ನೀಡಲಾಗಿದೆ ಎಂದರು.
ಇಂದು ಕೇಂದ್ರ ಆರೋಗ್ಯ ಇಲಾಖೆಯ ಕಾರ್ಯದರ್ಶಿಗಳು ರಾಜ್ಯಗಳ ಜೊತೆಗೆ ನಡೆಸುವ ಪರಿಶೀಲನಾ ಸಭೆ ನಡೆಸುತ್ತಿದ್ದು, ಸಭೆಯ ನಂತರ ಪರಿಸ್ಥಿತಿ ಅವಲೋಕಿಸಿ ಕ್ರಮ ವಹಿಸಲಾಗುವುದು ಎಂದರು.
ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…
ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…
ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್ ರಾಯ್ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…
ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…
ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್ ಲಕ್ನೋ: ರಾಮಭಕ್ತರ…
ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…