ಬೆಂಗಳೂರು,:ಬೆಂಗಳೂರು, ಮೇ 21: ಮತ ಎಣಿಕೆಗೆ ಚುನಾವಣಾ ಆಯೋಗವು ಸರ್ವ ಸನ್ನದ್ಧವಾಗಿದ್ದು, ರಾಜ್ಯದಲ್ಲಿ ಚುನಾವಣಾ ಫಲಿತಾಂಶ ನಾಲ್ಕು ಗಂಟೆ ತಡವಾಗಲಿದೆ ಎಂದು ರಾಜ್ಯ ಚುನಾವಣಾ ಆಯೋಗ ಆಯುಕ್ತ ಸಂಜೀವ್ ಕುಮಾರ್ ಹೇಳಿದ್ದಾರೆ.
ಸುಪ್ರಿಂ ಕೋರ್ಟ್ ಆದೇಶದ ಪ್ರಕಾರ ಪ್ರತಿ ಲೋಕಸಭಾ ಕ್ಷೇತ್ರದಲ್ಲಿ 40 ವಿವಿಪ್ಯಾಟ್‌ಗಳನ್ನು ಸಹ ಎಣಿಕೆ ಮಾಡಿ ತಾಳೆ ನೋಡಬೇಕಿರುವ ಕಾರಣ ಚುನಾವಣಾ ಫಲಿತಾಂಶವು ನಾಲ್ಕು ಗಂಟೆ ತಡವಾಗಲಿದೆ ಎಂದರು.
ಈ ಕುರಿತು ಬೆಂಗಳೂರಿನಲ್ಲಿ ನಡೆಸಿದ ಸುದ್ಧ್ಗಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಮೇ 23(ನಾಳೆ)ರಂದು ಬೆಳಗ್ಗೆ 8 ಗಂಟೆಗೆ ಮೊದಲು ರಿಟರ್ನಿಂಗ್ ಅಧಿಕಾರಿಯ ಕಚೇರಿಯಲ್ಲಿ ಅಂಚೆ ಮತಪತ್ರಗಳ ಎಣಿಕೆ ಆರಂಭಿಸಲಾಗುತ್ತದೆ. ಬಳಿಕ ಇವಿಎಂಗಳಲ್ಲಿನ 28 ಲೋಕಸಭಾ ಕ್ಷೇತ್ರಗಳ ಮತ ಎಣಿಕೆ ಆರಂಭವಾಗುತ್ತದೆ ಎಂದು ತಿಳಿಸಿದರು.
ಹಿಂದೆ 12 ಗಂಟೆಗೆ ಮುಗಿಯುತ್ತಿತ್ತು. ಆದರೆ ಈಗ ಒಂದು ರೌಂಡ್ ಎಣಿಕೆಗೆ 45 ನಿಮಿಷ ಬೇಕಾಗುತ್ತದೆ. 57 ಅಭ್ಯರ್ಥಿಗಳು ಬೆಳಗಾವಿ ಕ್ಷೇತ್ರದಲ್ಲಿ ಇದ್ದಾರೆ. ಅಲ್ಲದೆ ನಾವು ಬೇಗ ಎಣಿಕೆ ಮಾಡಲು ಸಾಧ್ಯವಿಲ್ಲ. ಬೇಗ ಎಣಿಕೆ ಮುಗಿಸುವ ಪ್ರಯತ್ನ ಮಾಡುತ್ತೇವೆ. ಆದರೆ ಸ್ವಲ್ಪ ತಡ ಆಗಬಹುದು. 3 ಗಂಟೆಯ ಒಳಗೆ ಬಹುತೇಕ ರಿಸಲ್ಟ್ ಕೊಡುತ್ತೇವೆ. ಸಂಜೆ 6 ಗಂಟೆ ಒಳಗೆ 28 ಕ್ಷೇತ್ರಗಳ ರಿಸಲ್ಟ್ ಕೊಡಲಾಗುತ್ತದೆ ಎಂದು ಹೇಳಿದರು.
ಇದೂವರೆಗೆ 98, 606 ಪೋಸ್ಟಲ್ ಬ್ಯಾಲೆಟ್ ಬಂದಿದೆ. 25, 768 ಸರ್ವಿಸ್ ವೋಟರ್ಸ್ ಪೋಸ್ಟಲ್ ಬ್ಯಾಲೆಟ್ ಬಂದಿದೆ. 5 ವಿವಿ ಪ್ಯಾಟ್ ಗಳನ್ನು ವೇಗವಾಗಿ ಎಣಿಕೆ ಮಾಡಲಾಗುತ್ತದೆ ಎಂದೂ ಅವರು ತಿಳಿಸಿದರು.
ಇನ್ನು ಅಧಿಕೃತ ಪಾಸ್ ಇದ್ದವರಿಗೆ ಮಾತ್ರ ಎಣಿಕಾ ಕೇಂದ್ರಕ್ಕೆ ಪ್ರವೇಶ ಕೊಡಲಾಗುವುದು. ಪೊಲೀಸ್ ಸಿದ್ಧತೆ ಮಾಡಲಾಗಿದೆ. ಕೌಂಟರ್ ಸೆಂಟರ್ ಗೆ ವೀಕ್ಷಕರಿಗೆ ಹೊರತುಪಡಿಸಿ ಯಾರೂ ಮೊಬೈಲ್ ತೆಗೆದುಕೊಂಡು ಹೋಗುವಂತಿಲ್ಲ. 18 ರಿಂದ 33 ರೌಂಡ್ಸ್ ಎಣಿಕೆ ನಡೆಯುತ್ತದೆ. ಮತದಾರರ ಸಂಖ್ಯೆ ಆಧಾರದಲ್ಲಿ ಎಷ್ಟು ರೌಂಡ್ಸ್ ಅನ್ನೋದು ಡಿಸೈಡ್ ಆಗುತ್ತದೆ. ಬೆಂಗಳೂರು ಸೆಂಟ್ರಲ್ ಕ್ಷೇತ್ರದಲ್ಲಿ ಅತೀ ಹೆಚ್ಚು ರೌಂಡ್ಸ್ ಮತ ಎಣಿಕೆ ನಡೆಯುತ್ತದೆ ಎಂದು ಅವರು ಮಾಹಿತಿ ನೀಡಿದರು.
ಮತ ಎಣಿಕೆಗೆ 28 ಕ್ಷೇತ್ರಗಳಲ್ಲಿ ಎಲ್ಲಾ ರೀತಿಯ ವ್ಯವಸ್ಥೆ ಮಾಡಲಾಗಿದೆ. ಅಡಿಷನಲ್ ಎಆರ್ ಓ- 180 ಮಂದಿ ಇರಲಿದ್ದಾರೆ. 28 ಲೋಕಸಭಾ ಹಾಗೂ 2 ಕ್ಷೇತ್ರಗಳ ಬೈ ಎಲೆಕ್ಷನ್ ಮತ ಎಣಿಕೆ 23ರಂದು ಬೆಳಗ್ಗೆ 8 ಗಂಟೆಗೆ ನಡೆಯುತ್ತದೆ. ಶೇ. 80.23 ಅತೀ ಹೆಚ್ಚು ಮತದಾನ ಮಂಡ್ಯದಲ್ಲಿ ಆಗಿದೆ. ದಕ್ಷಿಣ ಕನ್ನಡದಲ್ಲಿ ಶೇ. 77.90, ತುಮಕೂರಿನಲ್ಲಿ ಶೇ.77.90 ಮತದಾನವಾಗಿತ್ತು. ಶೇ.53.47 ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಅತೀ ಕಡಿಮೆ ಮತದಾನವಾಗಿದೆ. 28 ಕ್ಷೇತ್ರಗಳಲ್ಲಿ 461 ಮಂದಿ ಕಣದಲ್ಲಿದ್ದಾರೆ. 3224 ಕೌಂಟಿಂಗ್ ಟೇಬಲ್ ಗಳನ್ನ ಅಳವಡಿಸಲಾಗಿದೆ ಎಂದರು.
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…