ಬಾಗಲಕೋಟೆ : ಲೋಡ್ ಶೆಡ್ಡಿಂಗ್ ಆತಂಕದಲ್ಲಿದ್ದ ರಾಜ್ಯದ ಜನತೆಗೆ ನೆಮ್ಮದಿಯ ಸುದ್ದಿ ಸಿಕ್ಕಿದ್ದು, ರಾಜ್ಯದಲ್ಲಿ ಲೋಡ್ ಶೆಡ್ಡಿಂಗ್ ಮಾಡುವ ಆಲೋಚನೆ ಇಲ್ಲ ಎಂದು ಇಂಧನ ಸಚಿವ ವಿ. ಸುನೀಲ್ ಕುಮಾರ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಲ್ಲಿದ್ದಲು ಕೊರತೆಯಿಂದ ಲೋಡ್ ಶೆಡ್ಡಿಂಗ್ ಮಾಡಲಾಗುತ್ತಿದೆ ಎಂಬ ವದಂತಿ ಹರಡಿದ್ದು, ರಾಜ್ಯದಲ್ಲಿ ಲೋಡ್ ಶೆಡ್ಡಿಂಗ್ ಮಾಡುವ ಆಲೋಚನೆ ಇಲ್ಲ ಎಂದು ಸುನಿಲ್ ಕುಮಾರ್ ಸ್ಪಷ್ಟಪಡಿಸಿದ್ದಾರೆ.
ಕಲ್ಲಿದ್ದಲಿನ ಕೊರತೆ ಕಾರಣಲ್ಲಿ ವಿದ್ಯುತ್ ಉತ್ಪಾದನೆ ಕಡಿಮೆಯಾಗಿಲ್ಲ. ಕಳೆದ 3 ದಿನಗಳಿಂದ ಮಳೆಯಾಗುತ್ತಿದ್ದು, ವಿದ್ಯುತ್ ಬೇಡಿಕೆ ತಗ್ಗಿದೆ. ಹೀಗಾಗಿ ರಾಯಚೂರಿನ 3 ಯೂನಿಟ್ ಸ್ಥಗಿತಗೊಳಿಸಲಾಗಿದೆ. ಹೀಗಾಗಿ ರಾಜ್ಯದಲ್ಲಿ ಲೋಡ್ ಶೆಡ್ಡಿಂಗ್ ಮಾಡುವುದಿಲ್ಲ ಎಂದು ಹೇಳಿದ್ದಾರೆ. ಈ ಮೂಲಕ ಪವರ್ ಕಟ್ ಆತಂಕದಲ್ಲಿದ್ದ ರಾಜ್ಯದ ಜನತೆಗೆ ನೆಮ್ಮದಿಯ ಸುದ್ದಿ ನೀಡಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…