ರಾಜ್ಯದಲ್ಲಿ ವೀಕೆಂಡ್ ಕರ್ಪ್ಯೂ, ನೈಟ್ ಕರ್ಪ್ಯೂ ರದ್ದುಗೊಳಿಸಿ : ಸರ್ಕಾರಕ್ಕೆ ಪ್ರತಾಪ್ ಸಿಂಹ  ಒತ್ತಾಯ – Vishwanews24

Featured, ರಾಜ್ಯ ನ್ಯೂಸ್

ರಾಜ್ಯದಲ್ಲಿ ವೀಕೆಂಡ್ ಕರ್ಪ್ಯೂ, ನೈಟ್ ಕರ್ಪ್ಯೂ ರದ್ದುಗೊಳಿಸಿ : ಸರ್ಕಾರಕ್ಕೆ ಪ್ರತಾಪ್ ಸಿಂಹ  ಒತ್ತಾಯ – Vishwanews24

ಮೈಸೂರು : ಕರ್ನಾಟಕದಲ್ಲಿ ಜಾರಿಯಲ್ಲಿರುವ ವೀಕೆಂಡ್ ಕರ್ಪ್ಯೂ, ನೈಟ್ ಕರ್ಪ್ಯೂ ರದ್ದುಗೊಳಿಸಿ ಎಂದು ರಾಜ್ಯ ಸರ್ಕಾರಕ್ಕೆ ಸಂಸದ ಪ್ರತಾಪ್ ಸಿಂಹ ಒತ್ತಾಯಿಸಿದ್ದಾರೆ.

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಂಚ ರಾಜ್ಯಗಳಲ್ಲಿ ಚುನಾವಣೆ ನಡೆಯುತ್ತಿದೆ. ಅಲ್ಲಿ ಪ್ರಚಾರ ಸಭೆ, ರ್‍ಯಾಲಿ ನಡೆಸಲಾಗುತ್ತಿದೆ. ಆದರೆ ಹೀಗಾಗಿ ರಾಜ್ಯದಲ್ಲಿ ನೈಟ್ ಕರ್ಪ್ಯೂ ಏಕೆ ಬೇಕು? ಎಂದು ಪ್ರಶ್ನಿಸಿದ್ದಾರೆ.

ಇನ್ನು ರಾಜ್ಯದ ಜನರಿಗೆ ಭಯ ಬೀಳೀಸುವುದನ್ನು ನಿಲ್ಲಿಸಿ. ಕರ್ಪ್ಯೂ ನಿಂದ ರಾಜ್ಯದ ಜನರಿಗೆ ತೊಂದರೆಯಾಗುತ್ತಿದೆ. ಜನರ ಜೀವ ಉಳಿಸಲು ಲಸಿಕೆ ಕೊಟ್ಟಿದ್ದೇವೆ. ಹೀಗಾಗಿ ಜನರ ಜೀವ ಉಳಿಸಬೇಕಾದರೆ ಕರ್ಪ್ಯೂ ತೆಗೆಯಿರಿ ಎಂದು ಹೇಳಿದ್ದಾರೆ.

ಫೆ.28ರವರೆಗೆ ಭಾರತಕ್ಕೆ ಅಂತರಾಷ್ಟ್ರೀಯ ವಿಮಾನಗಳ ಸಂಚಾರ ನಿರ್ಬಂಧ ವಿಸ್ತರಣೆ – Vishwanews24

Leave a Reply