ರಾಜ್ಯದಲ್ಲಿ ವೀಕೆಂಡ್ , ನೈಟ್ ಕರ್ಪ್ಯೂ ವಿಸ್ತರಣೆ ಬಗ್ಗೆ ಶುಕ್ರವಾರ ಅಂತಿಮ ನಿರ್ಧಾರ : ಸಿಎಂ ಬೊಮ್ಮಾಯಿ – Vishwanews24
ರಾಜ್ಯದಲ್ಲಿ ವೀಕೆಂಡ್ , ನೈಟ್ ಕರ್ಪ್ಯೂ ವಿಸ್ತರಣೆ ಬಗ್ಗೆ ಶುಕ್ರವಾರ ಅಂತಿಮ ನಿರ್ಧಾರ : ಸಿಎಂ ಬೊಮ್ಮಾಯಿ – Vishwanews24
ಬೆಂಗಳೂರು : ರಾಜ್ಯದಲ್ಲಿ ವೀಕೆಂಡ್ ಕರ್ಫ್ಯೂ ವಾಪಸ್, ನಿರ್ಬಂಧಗಳ ಸಡಿಲಿಕೆ ಬಗ್ಗೆ ತಜ್ಞರ ಅಭಿಪ್ರಾಯದಂತೆ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಫೆಬ್ರವರಿ ಮಧ್ಯಭಾಗದಲ್ಲಿ ಪೀಕ್‍ಗೆ ಹೋಗುತ್ತೆ ಅಂತ ಬೇರೆ ಬೇರೆ ದೇಶಗಳ ಟ್ರೆಂಡ್ ನೋಡಿ ಅಂದಾಜು ಮಾಡಿದ್ದಾರೆ.
ಎಲ್ಲ ಶಾಲಾ ಕಾಲೇಜುಗಳಲ್ಲಿ ಸುಭಾಷಚಂದ್ರ ಭೋಸ್‌ರ 125 ನೇ ಜಯಂತಿ ಆಚರಣೆ : ಸಿಎಂ ಬೊಮ್ಮಾಯಿ – Vishwanews24
ಈ ಹಿನ್ನೆಲೆಯಲ್ಲಿ ನಿಯಮಗಳ ಸಡಿಲಿಕೆ ಬಗ್ಗೆ ತಜ್ಞರು ಪರಾಮರ್ಶೆ ಮಾಡುತ್ತಿದ್ದಾರೆ. ಶುಕ್ರವಾರದ ಸಭೆಯಲ್ಲಿ ತಜ್ಞರ ಜತೆ ಚರ್ಚಿಸಿ ತಜ್ಞರ ಸಲಹೆಯಂತೆ ಸಡಿಲಿಕೆ ಬಗ್ಗೆ ಕ್ರಮ ತೆಗೆದುಕೊಳ್ಳುತೇವೆ ಎಂದಿದ್ದಾರೆ.
ಜನವರಿ ಅಂತ್ಯಭಾಗದಿಂದ ಫೆಬ್ರವರಿ ಮಧ್ಯಭಾಗದವರೆಗೂ ಕೋವಿಡ್ ಹೆಚ್ಚಾಗುತ್ತೆ ಅಂತ ತಜ್ಞರು ಅಂದಾಜು ಮಾಡಿದ್ದಾರೆ. ಕಾಂಗ್ರೆಸ್ ನವರು ದೂರು ಕೊಡುವ ಅಗತ್ಯ ಇಲ್ಲ, ಯಾರೇ ಕೋವಿಡ್ ನಿಯಮ ಉಲ್ಲಂಘಿಸಿದರೂ ಖಂಡಿತಾ ಕ್ರಮ ತೆಗೆದುಕೊಳ್ಳುತ್ತೇವೆ ಎನ್ನುವ ಖಡಕ್ ಸೂಚನೆ ನೀಡಿದ್ದಾರೆ.
ಮಂಗಳೂರು : ಮರುವಾಯಿ ಪದಾರ್ಥ ಸೇವಿಸಿ ಹಲವರು ಅಸ್ವಸ್ಥ ; ಆಸ್ಪತ್ರೆಗೆ ದಾಖಲು – Vishwanews24
