ಬೆಂಗಳೂರು: ‘ರಾಜ್ಯದಲ್ಲಿ ಶಾಂತಿ ಭಂಗವಾದ್ರೆ ಭಜರಂಗದಳ ಮಾತ್ರವಲ್ಲ ಆರೆಸ್ಸೆಸ್ ನ್ನು ನಮ್ಮ ಸರ್ಕಾರ ನಿಷೇಧಿಸುತ್ತದೆ. ಒಂದು ವೇಳೆ ಬಿಜೆಪಿ ನಾಯಕರಿಗೆ ಇದನ್ನು ಒಪ್ಪಿಕೊಳ್ಳಲು ಅಸಾದ್ಯವಾದ್ರೆ ಪಾಕಿಸ್ತಾನಕ್ಕೆ ಹೋಗಬಹುದು’ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.
ಪೊಲೀಸರು ಕೇಸರಿ ಶಾಲು ಹಾಕಿದ್ದಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ಎಚ್ಚರಿಕೆ ವಿಚಾರಕ್ಕೆ ಸಂಬಂಧಿಸಿ ಬೆಂಗಳೂರಿನಲ್ಲಿ ನೂತನ ಸಚಿವ ಪ್ರಿಯಾಂಕ್ ಖರ್ಗೆ ಸಮರ್ಥನೆ ಮಾಡಿಕೊಂಡು ಮಾತನಾಡಿ, ‘ರಾಜ್ಯವನ್ನುಸರ್ವ ಜನಾಂಗದ ಶಾಂತಿಯ ತೋಟ ಮಾಡುವ ಭರವಸೆ ನೀಡಿ ಅಧಿಕಾರಕ್ಕೆ ಬಂದಿದ್ದೇವೆ. ಹೀಗಾಗಿ ಶಾಂತಿ ಭಂಗವಾದ್ರೆ ಬಜರಂಗದಳ ಅಥವಾ ಆರೆಸ್ಸೆಸ್ ಎಂಬುದನ್ನು ನಾವು ಪರಿಗಣಿಸುವುದಿಲ್ಲ.ಕಾನೂನನ್ನು ಕೈಗೆ ತೆಗೆದುಕೊಂಡರೆ ನಿಷೇಧ ಕಟ್ಟಿಟ್ಟ ಬುತ್ತಿ’ ಎಂದು ಖಡಕ್ ಎಚ್ಚರಿಕೆ ನೀಡಿದ್ದಾರೆ.
‘ಪ್ರಣಾಳಿಕೆಯಲ್ಲಿ ನೀಡಿರುವ ಭರವಸೆಯಂತೆ ಯಾವುದೇ ಸಂಘಟನೆಯನ್ನು ನಿಷೇಧಿಸಲು ಹಿಂದೆ ಮುಂದೆ ಯೋಚಿಸುವುದಿಲ್ಲ. ಅಲ್ಲದೇ ಹಿಜಾಬ್, ಹಲಾಲ್ ಕಟ್ ಮತ್ತು ಗೋಹತ್ಯೆ ಕಾನೂನುಗಳ ಮೇಲಿನ ನಿಷೇಧವನ್ನು ಸರ್ಕಾರ ಹಿಂಪಡೆಯಲಿದೆ. ಕೇಸರಿಕರಣ ತಪ್ಪು ಯಾಕೆಂದರೆ ಕಾಂಗ್ರೆಸ್ ಪಕ್ಷ ಎಲ್ಲರೂ ಅನುಸರಿಸಬಹುದಾದ ಬಸವಣ್ಣನವರ ತತ್ವ ಅನುಸರಿಸುತ್ತದೆ ಎಂದು ಹೇಳಿದ್ದಾರೆ.
ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ…
ಎಂಆರ್‌ಪಿಎಲ್ ದುರಂತ: ಮೃತರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ, ಸದಸ್ಯರೊಬ್ಬರಿಗೆ ಉದ್ಯೋಗ : ಸಂಸದ ಕ್ಯಾ. ಬ್ರಿಜೇಶ್ ಚೌಟ ಮಂಗಳೂರು:…
ಉಡುಪಿ: ಜೈಲು ವಾರ್ಡನ್‌ಗೆ ಕೊಲೆ ಬೆದರಿಕೆ, ಹಲ್ಲೆ ಪ್ರಕರಣ :ಆರೋಪಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ ಉಡುಪಿ: ಸುಮಾರು…
ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕರೊಬ್ಬರು ಮೃತಪಟ್ಟ ಘಟನೆ ಸೋಮವಾರ ಬೆಳಗ್ಗೆ…
ದ. ಕ, ಉಡುಪಿಯಲ್ಲಿ ಅ. 11 ರವರೆಗೆ ಮಳೆಯಾಗುವ ನಿರೀಕ್ಷೆ: ಹವಾಮಾನ ಇಲಾಖೆ ಮುನ್ಸೂಚನೆ ಮಂಗಳೂರು/ಉಡುಪಿ: ದಕ್ಷಿಣ ಕನ್ನಡ (ದ.ಕ)…
ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…