ರಾಜ್ಯದಲ್ಲಿ ಶೀಘ್ರವಾಗಿ 16 ಸಾವಿರ ಪೋಲಿಸರ ನೇಮಕ:ಬೊಮ್ಮಾಯಿ-vishwanews24
ಗದಗ: ರಾಜ್ಯದ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಪೈಕಿ 16 ಸಾವಿರ ಸಿಬಂದಿಯ ಭರ್ತಿ ಮಾಡುವ ಬಗ್ಗೆ ಯೋಚಿಸಲಾಗಿದೆ. ಇನ್ನುಳಿದ ಹುದ್ದೆಗಳನ್ನು ಮುಂದಿನ ಎರಡು ವರ್ಷಗಳಲ್ಲಿ ಹಂತ ಹಂತವಾಗಿ ಭರ್ತಿ ಮಾಡಿಕೊಳ್ಳಲಾಗುವುದು ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರು ಹೇಳಿದರು.
ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಚಿವ ಸಂಪುಟ ವಿಸ್ತರಣೆ ವಿಚಾರವಾಗಿ ಸಿಎಂ ಹಾಗೂ ಪಕ್ಷದ ವರಿಷ್ಠರು ಕೈಗೊಳ್ಳುವ ನಿರ್ಧಾರಕ್ಕೆ ಎಲ್ಲರೂ ಬದ್ಧರಾಗಿದ್ದೇವೆ. ಈ ಕುರಿತಂತೆ ಪಕ್ಷದಲ್ಲಿ ಯಾವುದೇ ರೀತಿಯ ಗೊಂದಲ, ಭಿನ್ನಾಭಿಪ್ರಾಯಗಳಿಲ್ಲ ಎಂದರು.
ಬಿಜೆಪಿ ಅಧಿಕಾರಕ್ಕೆ ಬರಬೇಕೆಂಬ ಜನರ ಅಭಿ ಲಾಷೆಯಂತೆ ಇತರ ಪಕ್ಷಗಳ 17 ಶಾಸಕರು ರಾಜೀನಾಮೆ ನೀಡಿ ಪಕ್ಷ ಸೇರಿದ್ದರಿಂದ ಬಿಜೆಪಿ ಅಧಿಕಾರಕ್ಕೆ ಬಂದಿದೆ.ಸಂತೋಷ್ ಆತ್ಮಹತ್ಯೆ ಯತ್ನ ಪ್ರಕರಣವು ಪ್ರತಿಕ್ರಿಯೆ ನೀಡುವಷ್ಟು ದೊಡ್ಡ ವಿಚಾರ ವಲ್ಲ. ಅವರು ಗುಣಮುಖರಾಗುತ್ತಿದ್ದಾರೆ. ಅವರಿಂದಲೇ ಸತ್ಯ ಹೊರಗಡೆ ಬರುತ್ತದೆ. ಊಹಾಪೋಹಗಳಿಗೆ ನಾನು ಉತ್ತರ ಕೊಡಲು ಸಾಧ್ಯವಿಲ್ಲ ಎಂದರು.

