Featured

ರಾಜ್ಯದಲ್ಲಿ ಸದ್ಯಕ್ಕೆ ಮಾಸ್ಕ್ ಕಡ್ಡಾಯ ಮಾಡುವ ಪರಿಸ್ಥಿತಿ ಇಲ್ಲ : ಡಾ. ಕೆ. ಸುಧಾಕರ್ – Vishwanews24

ರಾಜ್ಯದಲ್ಲಿ ಸದ್ಯಕ್ಕೆ ಮಾಸ್ಕ್ ಕಡ್ಡಾಯ ಮಾಡುವ ಪರಿಸ್ಥಿತಿ ಇಲ್ಲ : ಡಾ. ಕೆ. ಸುಧಾಕರ್ – Vishwanews24

ಮೈಸೂರು : ಮಾಸ್ಕ್ ಕಡ್ಡಾಯ ಮಾಡುವ ಪರಿಸ್ಥಿತಿ ಸದ್ಯಕ್ಕೆ ರಾಜ್ಯದಲ್ಲಿ ಇಲ್ಲ. ಎರಡನೇ ಮತ್ತು ಮೂರನೇ ಡೋಸ್ ಲಸಿಕೆಯನ್ನು ನಿರ್ಲಕ್ಷಿಸದೆ ಶೀಘ್ರ ಎಲ್ಲರೂ ಹಾಕಿಸಿಕೊಳ್ಳಿ ಎಂದು ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉತ್ತರ ಭಾರತದ ಕೆಲವು ರಾಜ್ಯಗಳಲ್ಲಿ ಕೊರೊನಾ ಪ್ರಕರಣ ಹೆಚ್ಚುತ್ತಿದೆ. ಹಾಗಾಗಿ ಅಲ್ಲಿ ನಿಯಮಗಳನ್ನು ಹೇರಲಾಗುತ್ತಿದೆ. ರಾಜ್ಯದಲ್ಲಿ ಅಂತಹ ಸ್ಥಿತಿ ಈವರೆಗೆ ಬಂದಿಲ್ಲ. ಜನ ನಿರ್ಲಕ್ಷ್ಯ ಮಾಡದೆ ಲಸಿಕೆ ಹಾಕಿಸಿಕೊಳ್ಳಬೇಕು. ನಿಯಮಗಳನ್ನು ಬಿಡುಗಡೆ ಮಾಡದಿದ್ದರೂ, ಆರೋಗ್ಯದ ದೃಷ್ಟಿಯಿಂದ ಈಗಿಂದಲೇ ಪಾಲಿಸಿದರೆ ಉತ್ತಮ. ಎಲ್ಲೋ ಬೇರೆ ಕಡೆ ಕೊರೊನಾ ಇರುವುದು, ನಮ್ಮಲ್ಲಿ ಇಲ್ಲ ಎಂಬ ನಿರ್ಲಕ್ಷ್ಯ ಸಲ್ಲ ಎಂದರು.

ಮುಂದಾಗುವ ತೊಂದರೆಗಳನ್ನು ತಪ್ಪಿಸಿಕೊಳ್ಳಲು ಲಸಿಕೆ ಹಾಕಿಸಿಕೊಳ್ಳಬೇಕು. ಜನಜಂಗುಳಿ ಇರುವೆಡೆಗಳಲ್ಲಿ ಮಾಸ್ಕ್ ಧರಿಸಿಕೊಳ್ಳುವುದು ಉತ್ತಮ. 12 ವರ್ಷ ಮೇಲ್ಪಟ್ಟ ಮಕ್ಕಳಿಗೆ ಈಗಾಗಲೇ ಲಸಿಕೆ ನೀಡಲಾಗುತ್ತಿದ್ದು, ಕೇಂದ್ರ ಸರ್ಕಾರ 5 ರಿಂದ 11 ವರ್ಷದ ಮಕ್ಕಳಿಗೆ ಲಸಿಕೆ ಒದಗಿಸಲು ತಯಾರಿ ನಡೆಸುತ್ತಿದೆ ಎಂದವರು ತಿಳಿಸಿದರು.

Vishwa News 24

Recent Posts

ಕಡಬ: ಚಿನ್ನದ ತೂಕ ಹೆಚ್ಚಿಸಿ ಬ್ಯಾಂಕ್‌ ಗೆ ವಂಚನೆಗೆ ಯತ್ನ: ಇಬ್ಬರ ಬಂಧನ – vishwanews24

ಕಡಬ: ಚಿನ್ನದ ತೂಕ ಹೆಚ್ಚಿಸಿ ಬ್ಯಾಂಕ್‌ ಗೆ ವಂಚನೆಗೆ ಯತ್ನ: ಇಬ್ಬರ ಬಂಧನ ಕಡಬ: ಚಿನ್ನಾಭರಣದ ತೂಕವನ್ನು ಕೃತಕವಾಗಿ ಹೆಚ್ಚಿಸಿ…

1 hour ago

ಮಹಾರಾಷ್ಟ್ರ : ಕುಸಿದು ಬಿದ್ದ ರತ್ನಗಿರಿ ರೈಲು ನಿಲ್ದಾಣದ ಛಾವಣಿ ; ತಪ್ಪಿದ ದೊಡ್ಡ ದುರಂತ- vishwanews24

ಮಹಾರಾಷ್ಟ್ರ : ಮಳೆ ಅಬ್ಬರ - ಕುಸಿದು ಬಿದ್ದ ರತ್ನಗಿರಿ ರೈಲು ನಿಲ್ದಾಣದ ಛಾವಣಿ ; ತಪ್ಪಿದ ದೊಡ್ಡ ದುರಂತ…

1 hour ago

ಶಿವಮೊಗ್ಗ: ಬಸ್ ನಿಲ್ದಾಣದಲ್ಲಿ ಚೀಲದೊಳಗೆ ನವಜಾತ ಹೆಣ್ಣು ಮಗು ಪತ್ತೆ  – vishwanews24

ಶಿವಮೊಗ್ಗ: ಬಸ್ ನಿಲ್ದಾಣದಲ್ಲಿ ಚೀಲದೊಳಗೆ ನವಜಾತ ಹೆಣ್ಣು ಮಗು ಪತ್ತೆ  ಶಿವಮೊಗ್ಗ: ನವಜಾತ ಹೆಣ್ಣು ಶಿಶುವೊಂದನ್ನು ಬಸ್ ನಿಲ್ದಾಣದಲ್ಲಿ ಅನಾಥವಾಗಿ…

1 hour ago

ಪಡುಬಿದ್ರಿ : ನಡಿಪಟ್ಟಣದಲ್ಲಿ ಕಡಲು ಕೊರೆತಕ್ಕೆ ತಡೆಗೋಡೆ ನಿರ್ಮಾಣಕ್ಕೆ ಸಚಿವ ಖಾದರ್ ಗೆ ವಿಶ್ವಾಸ್ ಅಮೀನ್ ಮನವಿ – vishwanews24

ಪಡುಬಿದ್ರಿ : ನಡಿಪಟ್ಟಣದಲ್ಲಿ ಕಡಲು ಕೊರೆತಕ್ಕೆ ತಡೆಗೋಡೆ ನಿರ್ಮಾಣಕ್ಕೆ ಸಚಿವ ಖಾದರ್ ಗೆ ವಿಶ್ವಾಸ್ ಅಮೀನ್ ಮನವಿ ಪಡುಬಿದ್ರಿ: ಉಡುಪಿ…

2 hours ago

ಬಂಟ್ವಾಳ : ಬಸ್ಸಿಗೆ ಕಾಯುತ್ತಿದ್ದ ವಿದ್ಯಾರ್ಥಿಗೆ ಚೂರಿ ಇರಿತ – vishwanews24

ಬಂಟ್ವಾಳ : ಬಸ್ಸಿಗೆ ಕಾಯುತ್ತಿದ್ದ ವಿದ್ಯಾರ್ಥಿಗೆ ಚೂರಿ ಇರಿತ ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಇರಾ…

2 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

3 days ago