ರಾಜ್ಯದಲ್ಲಿ ಸದ್ಯಕ್ಕೆ ಲಾಕ್‌ಡೌನ್ ಮಾಡುವ ಪ್ರಶ್ನೆ ಇಲ್ಲವೇ ಇಲ್ಲ : BSY -Vishwanews24

Featured, ರಾಜ್ಯ ನ್ಯೂಸ್

ರಾಜ್ಯದಲ್ಲಿ ಸದ್ಯಕ್ಕೆ ಲಾಕ್‌ಡೌನ್ ಮಾಡುವ ಪ್ರಶ್ನೆ ಇಲ್ಲವೇ ಇಲ್ಲ : BSY -Vishwanews24

ಬೆಂಗಳೂರು: “ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವ ಕಾರಣ ರಾಜ್ಯ ಸರ್ಕಾರ ಮತ್ತೆ ಲಾಕ್​ಡೌನ್ ಮೊರೆ ಹೋಗಬಹುದು ಎಂಬ ಮಾತುಗಳು ಕೇಳಿಬರುತ್ತಿದ್ದು, ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಕೂಡ ತಾಂತ್ರಿಕ ಸಲಹಾ ಸಮಿತಿ ಲಾಕ್​ಡೌನ್ ಮಾಡಲು ಸೂಚಿಸಿದೆ ಎಂದು ಹೇಳಿದ್ದರು. ಆದರೆ, ಇದೆಲ್ಲವನ್ನೂ ನಿರಾಕರಿಸಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ “ರಾಜ್ಯದಲ್ಲಿ ಸದ್ಯಕ್ಕೆ ಲಾಕ್‌ಡೌನ್ ಪ್ರಶ್ನೆಯೇ ಇಲ್ಲ” ಎಂದು ಹೇಳಿದ್ದಾರೆ.

ಲಾಕ್​ಡೌನ್ ಮಾಡಲು ತಾಂತ್ರಿಕ ಸಲಹಾ ಸಮಿತಿ ಸೂಚಿಸಿದೆ ಎಂಬ ಸುಧಾಕರ್ ಹೇಳಿಕೆ ಬಗ್ಗೆ ಉತ್ತರಿಸಿದ ಸಿಎಂ, “ನಾನು ಕೂಡಾ ಸಲಹಾ ಸಮಿತಿಯಲ್ಲಿ ಇದ್ದೇನೆ. ಯಾರೂ ಲಾಕ್​ಡೌನ್​ಗೆ ಸೂಚನೆ ನೀಡಿಲ್ಲ. ಸುಮ್ಮನೇ ಸುಳ್ಳು ಸುದ್ದಿ ಹರಡಬೇಡಿ ಕರ್ನಾಟಕದಲ್ಲಿ ಸದ್ಯಕ್ಕೆ ಲಾಕ್​ಡೌನ್ ಮಾಡುವ ಪ್ರಶ್ನೆ ಇಲ್ಲವೇ ಇಲ್ಲ” ಎಂದರು.

ಹವಾಮಾನ ವೈಪರೀತ್ಯ ಹಿನ್ನೆಲೆ; ದುಬೈನಿಂದ ಮಂಗಳೂರಿಗೆ ಬರಬೇಕಿದ್ದ ವಿಮಾನ ಕೊಚ್ಚಿಯಲ್ಲಿ ಲ್ಯಾಂಡಿಂಗ್ -Vishwanews24

ಇನ್ನು “ಕೊರೊನಾವನ್ನು ನಿಯಂತ್ರಿಸುವುದಕ್ಕೆ ಜನತೆ ಸಹಕಾರ ನೀಡಬೇಕು, ಕೊರೊನಾ ತಡೆ ಬಗ್ಗೆ ಸರ್ವಪಕ್ಷ ಸಭೆಯಲ್ಲಿ ಸಲಹೆ ಪಡೆದು ತೀರ್ಮಾನಿಸುತ್ತೇವೆ. ಏನೇನು ಮಾಡಬೇಕೆಂದು ನಂತರ ನಿರ್ಧರಿಸುತ್ತೇವೆ” ಎಂದಿದ್ದಾರೆ.

ಡಿ.ಕೆ.ಶಿವಕುಮಾರ್​ ಅವರು ಸರ್ವಪಕ್ಷ ಸಭೆಗೆ ಬರುವುದಿಲ್ಲವೆಂಬ ಹೇಳಿಕೆಗೆ ಪ್ರತಿಕ್ರಿಯಿಸಿದ ಸಿಎಂ, “ಸಭೆ ಕರೆಯಿರಿ ಎಂದು ಅವರೇ ಹೇಳಿದ್ದು ಈಗ ಬರಲ್ಲ ಅಂತಾರೆ. ಸಭೆಗೆ ಕರೆಯುತ್ತೇವೆ, ಬರುವುದು, ಬಿಡುವುದು ಅವರಿಗೆ ಬಿಟ್ಟಿದ್ದು” ಎಂದು ಹೇಳಿದ್ದಾರೆ.

ಮಂಗಳೂರು : ನೈಟ್‌ ಕರ್ಫ್ಯೂ ಉಲ್ಲಂಘನೆ , 2 ದಿನಗಳಲ್ಲಿ 78 ವಾಹನ ಮಾಲಕರ ವಿರುದ್ದ ಪ್ರಕರಣ ದಾಖಲು -Vishwanews24