Featured

ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ಆಗುವುದಿಲ್ಲ, ಜೆಡಿಎಸ್‌  ಸ್ಪಷ್ಟ ಬಹುಮತದ ಸರ್ಕಾರ ಸ್ಥಾಪನೆ : ಕುಮಾರಸ್ವಾಮಿ  ಭರವಸೆ – Vishwanews24

ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ಆಗುವುದಿಲ್ಲ, ಜೆಡಿಎಸ್‌  ಸ್ಪಷ್ಟ ಬಹುಮತದ ಸರ್ಕಾರ ಸ್ಥಾಪನೆ : ಕುಮಾರಸ್ವಾಮಿ  ಭರವಸೆ

ಕೊಪ್ಪಳ: ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ಆಗುವುದಿಲ್ಲ. ಜೆಡಿಎಸ್‌  ಸ್ಪಷ್ಟ ಬಹುಮತದ ಸರ್ಕಾರ ಸ್ಥಾಪನೆ ಆಗುತ್ತೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್‌.ಡಿ.ಕುಮಾರಸ್ವಾಮಿ  ಭರವಸೆ ವ್ಯಕ್ತಪಡಿಸಿದ್ದಾರೆ.

ಗಂಗಾವತಿಯಲ್ಲಿ ಮಾತನಾಡಿದರುವ ಹೆಚ್‌ಡಿಕೆ, ರಾಜ್ಯದಲ್ಲಿ 123 ಸ್ಥಾನ ಗೆಲ್ಲಲು ಕೆಲಸ‌ ಮಾಡುತ್ತಿದ್ದೇವೆ. ವಾತಾವರಣ ಸಹ ಅದೇ ರೀತಿಯಾಗಿದೆ ಎಂದು ತಿಳಿಸಿದ್ದಾರೆ.

ಕರಡಿ ಸಂಗಣ್ಣ ಜೆಡಿಎಸ್‌ನಿಂದ ಸ್ಪರ್ಧಿಸುವ ಕುರಿತು ಮಾತನಾಡಿ, ಕರಡಿ ಸಂಗಣ್ಣ ನನ್ನ‌ ಜೊತೆಗೆ ಮಾತನಾಡಿಲ್ಲ. ಸಮಯ ಬಂದಾಗ, ದೇವರು ಯಾರ‍್ಯಾರಿಗೆ ಏನೇನು ಆಟ ಆಡಿಸುತ್ತಾನೋ ನೋಡೋಣ ಎಂದು ಕರಡಿ ಸಂಗಣ್ಣ ಜೆಡಿಎಸ್‌ಗೆ ಬರಬಹುದೆಂದು ಪರೋಕ್ಷವಾಗಿ ನುಡಿದಿದ್ದಾರೆ.

ಗಂಗಾವತಿಯಲ್ಲಿ ಜನಾರ್ದನರೆಡ್ಡಿ ಸ್ಪರ್ಧೆ ಬಗ್ಗೆ ಪ್ರತಿಕ್ರಿಯಿಸಿ, ಅದು ಅವರ ತೀರ್ಮಾನ. ಅದರ ಬಗ್ಗೆ ನಾನು ಏನೂ ಹೇಳುವುದಿಲ್ಲ. ಯಾರು ಎಲ್ಲಿ ಬೇಕಾದರೂ ನಿಲ್ಲಬಹುದು. ಅವರ ಬಗ್ಗೆ ನಾವು ಸಣ್ಣದಾಗಿ, ಲಘುವಾಗಿ ಮಾತನಾಡುವುದು ಸರಿಯಲ್ಲ ಎಂದು ಹೇಳಿದ್ದಾರೆ.

ರಾಜ್ಯದಲ್ಲಿ ಅಮುಲ್ ಉತ್ಪನ್ನಗಳ ಮಾರಾಟ ವಿಚಾರವಾಗಿ ಮಾತನಾಡಿ, ಅಮುಲ್‌ಗೆ ನಂದಿನಿ ಸರಿಸಾಟಿಯಾಗಿ ಬೆಳೆಯುತ್ತಿದೆ. ನಂದಿನಿಯನ್ನು ಮುಗಿಸುವ ಸಂಚು ನಡೆಯುತ್ತಿದೆ. ಈ ಸರ್ಕಾರ ಹುಡುಗಾಟಿಕೆ ಆಡ್ತಾ ಇದೆ. ಇವರಲ್ಲಿ ಹಲವರು ಇದಕ್ಕೆ ಕುಮ್ಮಕ್ಕು ಕೋಡ್ತಾ ಇದ್ದಾರೆ. ಅವರಿಗೆ ಎಚ್ಚರಿಕೆ ಕೊಡ್ತೀನಿ. ಇನ್ನು‌ 15-20 ದಿನದಲ್ಲಿ ಈ ಸರ್ಕಾರ ಉಳಿಯುವುದಿಲ್ಲ. ಆಮೇಲೆ ನಮ್ಮ ಸಂಪತ್ತು, ಆಸ್ತಿ ಉಳಿಸೋದು ಹೇಗೆ ಅಂತ ನೋಡುತ್ತೇವೆ ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ.

Vishwa News 24

Recent Posts

ದುರಸ್ತಿ ಕಾಮಗಾರಿ: ಅ.7ರಂದು ಹಂದಾಡಿ ರೈಲ್ವೆ ಗೇಟ್ ಬಂದ್ -vishwanews24

ದುರಸ್ತಿ ಕಾಮಗಾರಿ: ಅ.7ರಂದು ಹಂದಾಡಿ ರೈಲ್ವೆ ಗೇಟ್ ಬಂದ್ ಕುಂದಾಪುರ : ರೈಲ್ವೆ ಲೆವೆಲ್ ಕ್ರಾಸಿಂಗ್ ಗೇಟ್‌ನಲ್ಲಿ ಅಗತ್ಯ ದುರಸ್ತಿ…

13 hours ago

ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ – vishwanews24

ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ…

21 hours ago

ಎಂಆರ್‌ಪಿಎಲ್ ದುರಂತ:  ಮೃತರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ : ಸಂಸದ ಕ್ಯಾ. ಬ್ರಿಜೇಶ್ ಚೌಟ – vishwanews24

ಎಂಆರ್‌ಪಿಎಲ್ ದುರಂತ:  ಮೃತರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ, ಸದಸ್ಯರೊಬ್ಬರಿಗೆ ಉದ್ಯೋಗ : ಸಂಸದ ಕ್ಯಾ. ಬ್ರಿಜೇಶ್ ಚೌಟ ಮಂಗಳೂರು:…

21 hours ago

ಉಡುಪಿ: ಜೈಲು ವಾರ್ಡನ್‌ಗೆ ಕೊಲೆ ಬೆದರಿಕೆ, ಹಲ್ಲೆ ಪ್ರಕರಣ :ಆರೋಪಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ – vishwanews24

ಉಡುಪಿ: ಜೈಲು ವಾರ್ಡನ್‌ಗೆ ಕೊಲೆ ಬೆದರಿಕೆ, ಹಲ್ಲೆ ಪ್ರಕರಣ :ಆರೋಪಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ ಉಡುಪಿ: ಸುಮಾರು…

21 hours ago

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು – vishwanews24

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕರೊಬ್ಬರು ಮೃತಪಟ್ಟ ಘಟನೆ ಸೋಮವಾರ ಬೆಳಗ್ಗೆ…

21 hours ago

ದ. ಕ, ಉಡುಪಿಯಲ್ಲಿ ಅ. 11 ರವರೆಗೆ ಮಳೆಯಾಗುವ ನಿರೀಕ್ಷೆ:  ಹವಾಮಾನ ಇಲಾಖೆ ಮುನ್ಸೂಚನೆ – vishwanews24

ದ. ಕ, ಉಡುಪಿಯಲ್ಲಿ ಅ. 11 ರವರೆಗೆ ಮಳೆಯಾಗುವ ನಿರೀಕ್ಷೆ:  ಹವಾಮಾನ ಇಲಾಖೆ ಮುನ್ಸೂಚನೆ ಮಂಗಳೂರು/ಉಡುಪಿ:  ದಕ್ಷಿಣ ಕನ್ನಡ (ದ.ಕ)…

21 hours ago