Featured

ರಾಜ್ಯದಲ್ಲಿ ಹಕ್ಕಿ ಜ್ವರದ ಭೀತಿ : ಪಶುಸಂಗೋಪನೆ ಇಲಾಖೆಯಿಂದ  ಮಾರ್ಗಸೂಚಿ ಬಿಡುಗಡೆ – vishwanews24

ರಾಜ್ಯದಲ್ಲಿ ಹಕ್ಕಿ ಜ್ವರದ ಭೀತಿ : ಕೋಳಿ ಸೇವನೆಗೆ ಪಶುಸಂಗೋಪನೆ ಇಲಾಖೆಯಿಂದ  ಮಾರ್ಗಸೂಚಿ ಬಿಡುಗಡೆ

ಬೆಂಗಳೂರು: ರಾಜ್ಯದಲ್ಲಿ ದಿನೇದಿನೇ ಹಕ್ಕಿಜ್ವರದ ಭೀತಿ ಹೆಚ್ಚಾಗುತ್ತಲೇ ಇದೆ. ಇದೀಗ ಹಕ್ಕಿಜ್ವರ ನಿಯಂತ್ರಣಕ್ಕಾಗಿ ಕೇಂದ್ರ ಸರ್ಕಾರ ಮಾರ್ಗಸೂಚಿ ಬಿಡುಗಡೆ ಮಾಡಿದ ಬೆನ್ನಲ್ಲೇ ರಾಜ್ಯ ಪಶುಸಂಗೋಪನೆ ಇಲಾಖೆಯೂ ಮಾರ್ಗಸೂಚಿ ಬಿಡುಗಡೆಗೊಳಿಸಿದೆ.

ರಾಜ್ಯ ಸರ್ಕಾರ ಇಂದು ಗೈಡ್‌ಲೈನ್ಸ್ ಬಿಡುಗಡೆ ಮಾಡಿದ್ದು, ಹಕ್ಕಿಜ್ವರ ಹೆಚ್ಚಾಗುತ್ತಿರುವ ಹೊತ್ತಲ್ಲಿ ಕೋಳಿ ಸೇವನೆ ಎಷ್ಟು ಸುರಕ್ಷಿತ? ಹಕ್ಕಿಜ್ವರದ ಭೀತಿ ಮಧ್ಯೆಯೂ ಕೋಳಿ ಸೇವನೆಗೆ ಏನೆಲ್ಲಾ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳಬೇಕು ಎಂದು ಈ ಮಾರ್ಗಸೂಚಿಯಲ್ಲಿ ತಿಳಿಸಿದೆ.

ಕೋಳಿ ಸೇವನೆಗೆ ಮಾರ್ಗಸೂಚಿ:
70 ಡಿಗ್ರಿ ಸೆಂಟಿಗ್ರೇಡ್ ಅಧಿಕ ಉಷ್ಣಾಂಶದಲ್ಲಿ ಕನಿಷ್ಠ 30 ನಿಮಿಷ ಕೋಳಿ ಬೇಯಿಸಿ ಕೋಳಿ ಮಾಂಸ ಮತ್ತು ಮೊಟ್ಟೆ ಸೇವಿಸಬಹುದು. ಕೋಳಿ ಮಾಂಸವನ್ನ ಅಡುಗೆಗೆ ತಯಾರು ಮಾಡುವವರು ಮುಂಜಾಗ್ರತಾ ಕ್ರಮ ತೆಗೆದುಕೊಳ್ಳಬೇಕು. ಅಡುಗೆಗಾಗಿ ಕೋಳಿಮಾಂಸವನ್ನ ತಯಾರು ಮಾಡಿದ ಬಳಿಕ ನಂಜುನಾಶಕದಿಂದ ಕೈಗಳನ್ನ ಶುಚಿಗೊಳಿಸಿಕೊಳ್ಳಬೇಕು ಎಂದು ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ.

ಹಸಿ ಕೋಳಿಮಾಂಸ, ಅದರ ದ್ರವಗಳು ಅಥವಾ ಬೇಯಿಸಿದ ಮೊಟ್ಟೆಯನ್ನು, ಬೇಯಿಸದೇ ಉಪಯೋಗಿಸುವ ಆಹಾರ ಪದಾರ್ಥಗಳು ಸಂಪರ್ಕಕ್ಕೆ ಬಾರದಂತೆ ಎಚ್ಚರಿಕೆ ವಹಿಸಬೇಕು. ಬೇಯಿಸದಿರುವ, ಅರೆಬೆಂದ ಮೊಟ್ಟೆಯನ್ನ ತಿನ್ನಬಾರದು. ಅಧಿಕ ಉಷ್ಣಾಂಶದ ವಾತಾವರಣದಲ್ಲಿ ವೈರಾಣು ಹೆಚ್ಚಿನ ಕಾಲ ಬದುಕುಳಿಯುವುದಿಲ್ಲ ಎಂದು ಗೈಡ್‌ಲೈನ್ಸ್ ಹೇಳಿದೆ.

ಸಾರ್ವಜನಿಕರಿಗೆ ಮುಂಜಾಗ್ರತಾ ಕ್ರಮ:
ಸಾರ್ವಜನಿಕರು ಅನಗತ್ಯವಾಗಿ ಕೋಳಿ ಫಾರಂಗೆ ಭೇಟಿ ನೀಡಬಾರದು. ಕೋಳಿ ಫಾರಂನಲ್ಲಿ ಕೆಲಸ ನಿರ್ವಹಿಸುವ ಕೆಲಸಗಾರರು ತಮ್ಮ ಬಟ್ಟೆ, ಶೂ ಹಾಗೂ ಕೈ, ಕಾಲುಗಳಿಗೆ ನಂಜುನಾಶಕ ದ್ರಾವಣ ಸಿಂಪಡಿಸಬೇಕು. ಕೋಳಿ ಸಾಕಾಣಿಕೆಗೆ ಬೇಕಾಗುವ ಸಲಕರಣೆಗಳನ್ನ ಬೇರೆ ಕೋಳಿ ಫಾರಂನಿಂದ ಪಡೆಯಬೇಕಾದರೆ ಸ್ಯಾನಿಟೈಸೆಷನ್ ಮಾಡಬೇಕು ಮತ್ತು ನಂಜುನಾಶಕವನ್ನ ಅಳವಡಿಸಬೇಕು. ಕೋಳಿ ಪಂಜರಗಳನ್ನ ದಿನನಿತ್ಯ ಶುಚಿ ಮಾಡುವುದು. ಆಹಾರ ಮತ್ತು ನೀರನ್ನ ಪ್ರತಿದಿನ ಬದಲಾಯಿಸುವುದು. ಕೋಳಿ ಫಾರಂನಲ್ಲಿ ಬೇರೆ ಹಕ್ಕಿಗಳು ಕೋಳಿಗಳ ಸಂಪರ್ಕಕ್ಕೆ ಬಾರದಂತೆ ಎಚ್ಚರಿಕೆ ವಹಿಸಬೇಕು ಎಂದು ರಾಜ್ಯ ಸರ್ಕಾರ ಪ್ರಕಟಣೆಯಲ್ಲಿ ತಿಳಿಸಿದೆ.

Vishwa News 24

Recent Posts

ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನ ನಮ್ಮ ಸರಕಾರ ಪ್ರಾಮಾಣಿಕವಾಗಿ ಮಾಡುತ್ತಿದೆ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ – vishwanews24

ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಗಳೂರು: ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನು ನಮ್ಮ ಸರಕಾರ ಪ್ರಾಮಾಣಿಕವಾಗಿ…

3 minutes ago

ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು – vishwanews24

ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು ಮೈಸೂರು: ಒಣಗಿದ ದಾಸವಾಳ ಹೂನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿದ…

21 minutes ago

ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ – vishwanews24

ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಉಡುಪಿ : ಜಿಲ್ಲಾಡಳಿತ, ಜಿಪಂ, ಕೌಶಲ್ಯಾಭಿವೃದ್ಧಿ, ಉದ್ಯಮ…

30 minutes ago

ಅಡುಗೆ ಅನಿಲದ ಅಭಾವ – ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ – vishwanews24

ಅಡುಗೆ ಅನಿಲದ ಅಭಾವ - ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ ಬೆಂಗಳೂರು : ಗಲ್ಫ್…

47 minutes ago

ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ – ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ : ಪೊಲೀಸ್ ಆಯುಕ್ತ – vishwanews24

ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ - ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ…

56 minutes ago

ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ – vishwanews24

ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಕಾಪು: ಉಳಿಯಾರಗೋಳಿ ಗ್ರಾಮದ ನೀಲಾಧರ ಬಂಗೇರ (58) ಇಲಿ ಪಾಷಾಣ…

2 hours ago