ಬೆಂಗಳೂರು: ರಾಜ್ಯದಲ್ಲಿ ದಿನೇದಿನೇ ಹಕ್ಕಿಜ್ವರದ ಭೀತಿ ಹೆಚ್ಚಾಗುತ್ತಲೇ ಇದೆ. ಇದೀಗ ಹಕ್ಕಿಜ್ವರ ನಿಯಂತ್ರಣಕ್ಕಾಗಿ ಕೇಂದ್ರ ಸರ್ಕಾರ ಮಾರ್ಗಸೂಚಿ ಬಿಡುಗಡೆ ಮಾಡಿದ ಬೆನ್ನಲ್ಲೇ ರಾಜ್ಯ ಪಶುಸಂಗೋಪನೆ ಇಲಾಖೆಯೂ ಮಾರ್ಗಸೂಚಿ ಬಿಡುಗಡೆಗೊಳಿಸಿದೆ.
ರಾಜ್ಯ ಸರ್ಕಾರ ಇಂದು ಗೈಡ್‌ಲೈನ್ಸ್ ಬಿಡುಗಡೆ ಮಾಡಿದ್ದು, ಹಕ್ಕಿಜ್ವರ ಹೆಚ್ಚಾಗುತ್ತಿರುವ ಹೊತ್ತಲ್ಲಿ ಕೋಳಿ ಸೇವನೆ ಎಷ್ಟು ಸುರಕ್ಷಿತ? ಹಕ್ಕಿಜ್ವರದ ಭೀತಿ ಮಧ್ಯೆಯೂ ಕೋಳಿ ಸೇವನೆಗೆ ಏನೆಲ್ಲಾ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳಬೇಕು ಎಂದು ಈ ಮಾರ್ಗಸೂಚಿಯಲ್ಲಿ ತಿಳಿಸಿದೆ.
ಕೋಳಿ ಸೇವನೆಗೆ ಮಾರ್ಗಸೂಚಿ:
70 ಡಿಗ್ರಿ ಸೆಂಟಿಗ್ರೇಡ್ ಅಧಿಕ ಉಷ್ಣಾಂಶದಲ್ಲಿ ಕನಿಷ್ಠ 30 ನಿಮಿಷ ಕೋಳಿ ಬೇಯಿಸಿ ಕೋಳಿ ಮಾಂಸ ಮತ್ತು ಮೊಟ್ಟೆ ಸೇವಿಸಬಹುದು. ಕೋಳಿ ಮಾಂಸವನ್ನ ಅಡುಗೆಗೆ ತಯಾರು ಮಾಡುವವರು ಮುಂಜಾಗ್ರತಾ ಕ್ರಮ ತೆಗೆದುಕೊಳ್ಳಬೇಕು. ಅಡುಗೆಗಾಗಿ ಕೋಳಿಮಾಂಸವನ್ನ ತಯಾರು ಮಾಡಿದ ಬಳಿಕ ನಂಜುನಾಶಕದಿಂದ ಕೈಗಳನ್ನ ಶುಚಿಗೊಳಿಸಿಕೊಳ್ಳಬೇಕು ಎಂದು ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ.
ಹಸಿ ಕೋಳಿಮಾಂಸ, ಅದರ ದ್ರವಗಳು ಅಥವಾ ಬೇಯಿಸಿದ ಮೊಟ್ಟೆಯನ್ನು, ಬೇಯಿಸದೇ ಉಪಯೋಗಿಸುವ ಆಹಾರ ಪದಾರ್ಥಗಳು ಸಂಪರ್ಕಕ್ಕೆ ಬಾರದಂತೆ ಎಚ್ಚರಿಕೆ ವಹಿಸಬೇಕು. ಬೇಯಿಸದಿರುವ, ಅರೆಬೆಂದ ಮೊಟ್ಟೆಯನ್ನ ತಿನ್ನಬಾರದು. ಅಧಿಕ ಉಷ್ಣಾಂಶದ ವಾತಾವರಣದಲ್ಲಿ ವೈರಾಣು ಹೆಚ್ಚಿನ ಕಾಲ ಬದುಕುಳಿಯುವುದಿಲ್ಲ ಎಂದು ಗೈಡ್‌ಲೈನ್ಸ್ ಹೇಳಿದೆ.
ಸಾರ್ವಜನಿಕರಿಗೆ ಮುಂಜಾಗ್ರತಾ ಕ್ರಮ:
ಸಾರ್ವಜನಿಕರು ಅನಗತ್ಯವಾಗಿ ಕೋಳಿ ಫಾರಂಗೆ ಭೇಟಿ ನೀಡಬಾರದು. ಕೋಳಿ ಫಾರಂನಲ್ಲಿ ಕೆಲಸ ನಿರ್ವಹಿಸುವ ಕೆಲಸಗಾರರು ತಮ್ಮ ಬಟ್ಟೆ, ಶೂ ಹಾಗೂ ಕೈ, ಕಾಲುಗಳಿಗೆ ನಂಜುನಾಶಕ ದ್ರಾವಣ ಸಿಂಪಡಿಸಬೇಕು. ಕೋಳಿ ಸಾಕಾಣಿಕೆಗೆ ಬೇಕಾಗುವ ಸಲಕರಣೆಗಳನ್ನ ಬೇರೆ ಕೋಳಿ ಫಾರಂನಿಂದ ಪಡೆಯಬೇಕಾದರೆ ಸ್ಯಾನಿಟೈಸೆಷನ್ ಮಾಡಬೇಕು ಮತ್ತು ನಂಜುನಾಶಕವನ್ನ ಅಳವಡಿಸಬೇಕು. ಕೋಳಿ ಪಂಜರಗಳನ್ನ ದಿನನಿತ್ಯ ಶುಚಿ ಮಾಡುವುದು. ಆಹಾರ ಮತ್ತು ನೀರನ್ನ ಪ್ರತಿದಿನ ಬದಲಾಯಿಸುವುದು. ಕೋಳಿ ಫಾರಂನಲ್ಲಿ ಬೇರೆ ಹಕ್ಕಿಗಳು ಕೋಳಿಗಳ ಸಂಪರ್ಕಕ್ಕೆ ಬಾರದಂತೆ ಎಚ್ಚರಿಕೆ ವಹಿಸಬೇಕು ಎಂದು ರಾಜ್ಯ ಸರ್ಕಾರ ಪ್ರಕಟಣೆಯಲ್ಲಿ ತಿಳಿಸಿದೆ.
ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…
ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…
ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…
ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…
ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…
ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…