ಹಾಸನ: ಕೋವಿಡ್ ಲಾಕ್‌ಡೌನ್‌ನಿಂದಾಗಿ ರಾಜ್ಯದಲ್ಲಿ ಹಣಕಾಸು ಸ್ಥಿತಿ ಹದಗೆಟ್ಟಿದ್ದರೂ ಬಡವರ ಅನುಕೂಲಕ್ಕೆ ಪ್ಯಾಕೇಜ್ ಘೋಷಣೆ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.
ಶುಕ್ರವಾರ ಬೂವನಹಳ್ಳಿ ಹೆಲಿಪ್ಯಾಡ್‌ನಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡರ ಅಪೇಕ್ಷೆಯಂತೆ ಸದ್ಯದಲ್ಲೇ ಹಾಸನ ಏರ್‌ಪೋರ್ಟ್ ಕೆಲಸ ಆರಂಭಿಸಲಾಗುವುದು. ಹಾಸನ ಜಿಲ್ಲೆ ಸೇರಿದಂತೆ ಕೆಲವು ಜಿಲ್ಲೆಗಳಲ್ಲಿ ಕೋವಿಡ್ ಹೆಚ್ಚಿದೆ. ಸೋಂಕು ನಿಯಂತ್ರಣಕ್ಕೆ ಕ್ರಮಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು.
ಕೋವಿಡ್‌ನಿಂದ ಜನ ಸಾವಿಗೀಡಾಗುತ್ತಿರುವುದಕ್ಕೆ ಸರ್ಕಾರವೇ ಕಾರಣ ಎಂಬ ಶಾಸಕ ಎಚ್.ಡಿ ರೇವಣ್ಣ ಹೇಳಿಕೆಗೆ ಕಿಡಿಕಾರಿದ ಮುಖ್ಯಮಂತ್ರಿ, ಜವಾಬ್ದಾರಿಯುತ ಶಾಸಕರಾಗಿ ಬೇಜವಾಬ್ದಾರಿ ಹೇಳಿಕೆ ನೀಡಬಾರದು. ಅವರು ಸಹ ಶಾಸಕರಾಗಿ ಕೆಲಸ ನಿರ್ವಹಿಸಬೇಕಿದೆ. ಅವರ ಕೆಲಸ ನಿರ್ವಹಿಸದೆ ಬೇರೆಯವರ ಬಗ್ಗೆ ಬೆಟ್ಟು ತೋರಿಸಬಾರದು ಎಂದರು.
ಮೂರನೆ ಅಲೆಯಲ್ಲಿ ಯಾವುದೇ ಅನಾಹುತ ಆಗದಂತೆ ಸಿದ್ಧತೆ ಮಾಡುತ್ತಿದ್ದೇವೆ. ಕೋವಿಡ್ ಬಗ್ಗೆ ಸುಳ್ಳು ಲೆಕ್ಕ ಕೊಡುತ್ತಿದ್ದಾರೆ ಎಂಬ ವಿರೋಧ ಪಕ್ಷದವರ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, ಕೋವಿಡ್ ಸುಳ್ಳು ಲೆಕ್ಕ ಕೊಡುತ್ತೇವೆ ಅಂದಿದ್ದು ಯಾರು..? ಅದರಿಂದ ನಮಗೇನು ಲಾಭ ಎಂದು ಪ್ರಶ್ನಿಸಿದರು.
ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…
ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…