Featured

ರಾಜ್ಯದಲ್ಲಿ 14 ಲಕ್ಷ ಅನರ್ಹ ಪಡಿತರ ಚೀಟಿಗಳು ಪತ್ತೆ : ಆಹಾರ ಸಚಿವ ಕೆ ಎಚ್ ಮುನಿಯಪ್ಪ – vishwanews24

ರಾಜ್ಯದಲ್ಲಿ 14 ಲಕ್ಷ ಅನರ್ಹ ಪಡಿತರ ಚೀಟಿಗಳು ಪತ್ತೆ : ಆಹಾರ ಸಚಿವ ಕೆ ಎಚ್ ಮುನಿಯಪ್ಪ

ಬೆಂಗಳೂರು: ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯು ರಾಜ್ಯದಲ್ಲಿ ಸುಮಾರು 14 ಲಕ್ಷ ಅನರ್ಹ ಪಡಿತರ ಚೀಟಿಗಳನ್ನು ಗುರುತಿಸಿದೆ ಎಂದು ಸಚಿವ ಕೆಎಚ್ ಮುನಿಯಪ್ಪ ಮಾಹಿತಿ ನೀಡಿದ್ದಾರೆ. ಅಧಿಕಾರಿಗಳು 13.87 ಲಕ್ಷ ಅನರ್ಹ ಕಾರ್ಡ್ಗಳನ್ನು ಗುರುತಿಸಿದ್ದು, ಅವುಗಳಲ್ಲಿ 3.64 ಲಕ್ಷ ಕಾರ್ಡುಗಳನ್ನು ಈಗಾಗಲೇ ರದ್ದುಗೊಳಿಸಲಾಗಿದೆ. ಇದರಲ್ಲಿ ಸರ್ಕಾರಿ ನೌಕರರ 2,964 ಕಾರ್ಡ್ಗಳನ್ನು ರದ್ದುಗೊಳಿಸಲಾಗಿದೆ. ಅನರ್ಹ ಪಡಿತರ ಚೀಟಿಗಳ ಸಂಖ್ಯೆ 20 ಲಕ್ಷಕ್ಕಿಂತ ಹೆಚ್ಚಿರಬಹುದು ಎಂದು ಹೇಳಿದ್ದಾರೆ.

6 ತಿಂಗಳವರೆಗೆ ಪಡಿತರ ಪಡೆಯದಿರುವವರು, ಒಂದು ವರ್ಷದವರೆಗೆ ನೇರ ನಗದು ವರ್ಗಾವಣೆ ಸೌಲಭ್ಯ ಪಡೆಯದಿರುವವರು ಮತ್ತು ನಿಗದಿಪಡಿಸಿದ್ದಕ್ಕಿಂತ ಹೆಚ್ಚಿನ ವಾರ್ಷಿಕ ಆದಾಯ ಹೊಂದಿರುವವರನ್ನು ಅನರ್ಹರೆಂದು ಪರಿಗಣಿಸಲಾಗುತ್ತಿದೆ. ಅರ್ಹ ಫಲಾನುಭವಿಗಳು ಸೌಲಭ್ಯ ಪಡೆಯದೇ ಕಾರ್ಡ್ ರದ್ದಾದಲ್ಲಿ ಮುಂದಿನ ದಿನಗಳಲ್ಲಿ ಹೊಸ ಕಾರ್ಡ್ಗಳನ್ನು ಪಡೆಯಲು ಅರ್ಜಿಗಳನ್ನು ಸಲ್ಲಿಸಲು ಅವಕಾಶ ನೀಡಲಾಗುತ್ತದೆ ಎಂದು ಸಚಿವರು ತಿಳಿಸಿದ್ದಾರೆ.

Vishwa News 24

Recent Posts

ಉದ್ಯಾವರ : ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆ ; ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ -vishwanews24

ಉದ್ಯಾವರ : ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆ ; ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ ಉಡುಪಿ: ಉದ್ಯಾವರ…

12 hours ago

ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ -vishwanews24

ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ ಮಂಗಳೂರು: ಕಾಂಗ್ರೆಸ್ ಪಕ್ಷಕ್ಕಾಗಿ ಕೆಲಸ…

13 hours ago

ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್‌ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ -vishwanews24

ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್‌ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ…

13 hours ago

ಕಾರ್ಕಳ : ಯಕ್ಷರಂಗಾಯಣದ ಹೆಸರನ್ನು ಬದಲಾಯಿಸಿರುವುದು ಅತ್ಯಂತ ಬೇಜವಾಬ್ದಾರಿ ಹಾಗೂ ಏಕಪಕ್ಷೀಯ ನಿರ್ಧಾರ : ಸುನಿಲ್‌ ಕುಮಾರ್‌ ಆಕ್ರೋಶ -vishwanews24

ಕಾರ್ಕಳ :ಯಕ್ಷರಂಗಾಯಣ ದ ಹೆಸರು ಬದಲಾವಣೆಗೆ ಶಾಸಕ ಸುನಿಲ್‌ ಕುಮಾರ್‌ ಆಕ್ರೋಶ ಮೂಲ ಹೆಸರನ್ನೇ ಉಳಿಸಿಕೊಳ್ಳಲು ಸರಕಾರಕ್ಕೆ ಆಗ್ರಹ ಕಾರ್ಕಳ:…

16 hours ago

ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ -vishwanews24

ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ ಕೋಲ್ಕತ್ತಾ : ಪಶ್ಚಿಮ ಬಂಗಾಳದ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಅವರನ್ನು…

16 hours ago

ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ -vishwanews24

ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ ಉಡುಪಿ :…

17 hours ago