Featured

ರಾಜ್ಯದಲ್ಲಿ 15 ವರ್ಷ ಮೇಲ್ಪಟ್ಟ ಮಕ್ಕಳಿಗೆ ಜ.3ರಿಂದ ಶಾಲೆಗಳಲ್ಲಿಯೇ ಕೋವಿಡ್ ಲಸಿಕೆ :  ಸಿಎಂ ಬೊಮ್ಮಾಯಿ – VIshwanews24

ರಾಜ್ಯದಲ್ಲಿ 15 ವರ್ಷ ಮೇಲ್ಪಟ್ಟ ಮಕ್ಕಳಿಗೆ ಜ.3ರಿಂದ ಶಾಲೆಗಳಲ್ಲಿಯೇ ಕೋವಿಡ್ ಲಸಿಕೆ :  ಸಿಎಂ ಬೊಮ್ಮಾಯಿ – VIshwanews24

ಬೆಂಗಳೂರು: ದೇಶದಲ್ಲಿ 15 ವರ್ಷ ಮೇಲ್ಪಟ್ಟ ಮಕ್ಕಳಿಗೆ ಜ.3ರಿಂದ ಲಸಿಕೆ ನೀಡುವುದಾಗಿ ಪ್ರಧಾನಿ ಘೋಷಿಸಿದ ಬೆನ್ನಲ್ಲೇ ರಾಜ್ಯದ ಆರೋಗ್ಯ ಇಲಾಖೆ ಲಸಿಕೆ ವಿತರಣೆಗೆ ಸಿದ್ದತೆ ನಡೆಸಿದೆ. ಆದರೆ ಮಕ್ಕಳಿಗೆ ಲಸಿಕೆ ನೀಡಲು ಯಾವ ಮಾರ್ಗಸೂಚಿ ಅನುಸರಿಸಬೇಕು ಎಂದು ಕೇಂದ್ರ ತಿಳಿಸಿರಲಿಲ್ಲ. ಆದರೆ ಈ ಕುರಿತು ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರಾಜ್ಯದಲ್ಲಿ ಆಯಾ ಶಾಲಾ ಹಂತದಲ್ಲಿಯೇ ಮಕ್ಕಳಿಗೆ ಕೋವಿಡ್ ಲಸಿಕೆಯನ್ನು ನೀಡಲಾಗುತ್ತದೆ ಎಂದು ಸ್ಪಷ್ಟಪಡಿಸಿದ್ದಾರೆ.

ಈ ಬಗ್ಗೆ ಇಂದು ಮಾಧ್ಯಮದೊಂದಿಗೆ ಮಾತನಾಡಿದಂತ ಸಿಎಂ ಬೊಮ್ಮಾಯಿ, ಆಯಾ ಶಾಲೆಗಳಲ್ಲಿ ಲಸಿಕೆ ನೀಡುವ ಕುರಿತಂತೆ ಲಸಿಕಾ ಅಭಿಯಾನಗಳಿಗೆ ಸಿದ್ಧತೆ ನಡೆಸುತ್ತಿದ್ದೇವೆ. 60 ವರ್ಷ ಮೇಲ್ಪಟ್ಟವರಿಗೆ ಸಹ-ಅಸ್ವಸ್ಥತೆ ಹೊಂದಿರುವವರಿಗೆ ‘ಮುನ್ನೆಚ್ಚರಿಕೆ ಡೋಸ್’ ನೀಡಲು ಸಿದ್ಧತೆ ನಡೆಸಲು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ನಿರ್ದೇಶನ ನೀಡಲಾಗಿದೆ ಎಂದು ತಿಳಿಸಿದ್ದಾರೆ.

ಶಾಲೆಗಳಲ್ಲಿ ಲಸಿಕೆ ಅಭಿಯಾನ ಜನವರಿ 3 ರಿಂದ ಪ್ರಾರಂಭವಾಗಲಿದ್ದು, ಜನವರಿ 10 ರಿಂದ 60 ವರ್ಷಕ್ಕಿಂತ ಹೆಚ್ಚಿನ ವಯಸ್ಸಿನವರಿಗೆ ಸಹ-ಅಸ್ವಸ್ಥತೆಹೊಂದಿರುವ ಅರ್ಹರಿಗೆ ಇನ್ನೋಕ್ಯುಲೇಷನ್ ಶಿಬಿರಗಳು ಕೇಂದ್ರದ ನಿರ್ದೇಶನದಂತೆ ಪ್ರಾರಂಭವಾಗುತ್ತವೆ ಎಂದು ಹೇಳಿದ್ದಾರೆ.

ಮುಂದಿನ ಎರಡು ಮೂರು ತಿಂಗಳಲ್ಲಿ ಎಸೆಸೆಲ್ಸಿ ಮತ್ತುಪಿಯುಸಿ ಸೇರಿದಂತೆ ವಿವಿಧ ಪರೀಕ್ಷೆಗಳು ನಡೆಯಲಿವೆ. ಆ ದೃಷ್ಟಿಯಿಂದ ವಿದ್ಯಾರ್ಥಿಗಳಿಗೆ ಲಸಿಕೆ ನೀಡುವುದು ಬಹಳ ಮುಖ್ಯವಾಗಿದೆ. ರಾಜ್ಯದಲ್ಲಿ 15 ರಿಂದ 18 ವರ್ಷದ ಒಲಗಿನ ೪೩ ಲಕ್ಷ ಮಂದಿ ಇದ್ದು ಇವರೆಲ್ಲರೂ ಬೂಸ್ಟರ್ ಡೋಸ್ ಪಡೆಯಲು ಅರ್ಹರಿದ್ದಾರೆ.

Vishwa News 24

Recent Posts

ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಅಧಿಕಾರಿಗಳ ಸಮಿತಿ ರಚನೆ: ಸಚಿವ ಯು.ಟಿ. ಖಾದರ್ – vishwanews24

ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಅಧಿಕಾರಿಗಳ ಸಮಿತಿ ರಚನೆ: ಸಚಿವ ಯು.ಟಿ. ಖಾದರ್ ಮಂಗಳೂರು: ಮಂಗಳೂರಿನಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆ…

8 hours ago

ಮಂಗಳೂರು: ದಸರಾ ರಜೆ ವೇಳೆ ಸೆಮಿಸ್ಟರ್ ಪರೀಕ್ಷೆ: ಖಾಸಗಿ ಕಾಲೇಜು ವಿರುದ್ಧ ವಿದ್ಯಾರ್ಥಿಗಳ ಪ್ರತಿಭಟನೆ – vishwanews24

ಮಂಗಳೂರು: ದಸರಾ ರಜೆ ವೇಳೆ ಸೆಮಿಸ್ಟರ್ ಪರೀಕ್ಷೆ: ಖಾಸಗಿ ಕಾಲೇಜು ವಿರುದ್ಧ ವಿದ್ಯಾರ್ಥಿಗಳ ಪ್ರತಿಭಟನೆ ಮಂಗಳೂರು: ದಸರಾ  ಸಂಭ್ರಮದ ನಡುವೆಯೇ…

8 hours ago

ಮಂಗಳೂರು : ದಸರಾ ಉದ್ಘಾಟನೆಗೆ ಸಿಎಂ ಗೈರು ; ಕರಾವಳಿ ತೀವ್ರ ಜನರಲ್ಲಿ ಅಸಮಾಧಾನ  : ಅಕ್ಷಿತ್ ಸುವರ್ಣ  – vishwanews24

ಮಂಗಳೂರು : ದಸರಾ ಉದ್ಘಾಟನೆಗೆ ಸಿಎಂ ಗೈರು ; ಕರಾವಳಿ ತೀವ್ರ ಜನರಲ್ಲಿ ಅಸಮಾಧಾನ  : ಅಕ್ಷಿತ್ ಸುವರ್ಣ   ಮಂಗಳೂರು:…

8 hours ago

ಮಂಗಳೂರು: ಅಕ್ರಮ ಸಂಬಂಧದ ಶಂಕೆ ; ಪತ್ನಿಯನ್ನು ಚೂರಿಯಿಂದ ಇರಿದು ಕೊಂದ ಪತಿ – vishwanews24

ಮಂಗಳೂರು: ಅಕ್ರಮ ಸಂಬಂಧದ ಶಂಕೆ ; ಪತ್ನಿಯನ್ನು ಚೂರಿಯಿಂದ ಇರಿದು ಕೊಂದ ಪತಿ ಮಂಗಳೂರು: ಅಕ್ರಮ ಸಂಬಂಧದ ಶಂಕೆಯ ಹಿನ್ನೆಲೆ…

8 hours ago

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ – vishwanews24

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…

2 days ago

ಉಡುಪಿ ನಗರಸಭೆ ಬಾಕಿ ಕಾಮಗಾರಿ ಶೀಘ್ರ ಆರಂಭಕ್ಕೆ ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ – vishwanews24

ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…

2 days ago