ಬೆಂಗಳೂರು: ಬಡವರು, ಜನಸಾಮಾನ್ಯರಿಗೆ ಅನುಕೂಲವಾಗುವಂತೆ ರಾಜ್ಯದಲ್ಲಿ 300 ಕ್ಕೂ ಹೆಚ್ಚು ಜನೌಷಧ ಮಳಿಗೆಗಳನ್ನು ತೆರೆಯಲಾಗುವುದು ಎಂದು ಕೇಂದ್ರ ಸಚಿವ ಡಿ.ವಿ. ಸದಾನಂದಗೌಡ ತಿಳಿಸಿದ್ದಾರೆ.
ಬಾಗಲಗುಂಟೆಯಲ್ಲಿ ಪ್ರಧಾನಮಂತ್ರಿ ಜನೌಷಧಿ ಕೇಂದ್ರ ಉದ್ಘಾಟಿಸಿ ಮಾತನಾಡಿದ ಅವರು, ಮಾರುಕಟ್ಟೆಗಿಂತ ಕಡಿಮೆ ಬೆಲೆಯಲ್ಲಿ ಉತ್ತಮ ಗುಣಮಟ್ಟದ ಔಷಧಗಳ ಬಡವರು ಮತ್ತು ಶ್ರೀಸಾಮಾನ್ಯರಿಗೆ ತಲುಪಿಸಲು ಜನೌಔಷಧ ಕೇಂದ್ರಗಳನ್ನು ಆರಂಭಿಸಲಾಗಿದೆ ಎಂದು ಹೇಳಿದ್ದಾರೆ.
ರಾಜ್ಯದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಜನೌಷಧ ಕೇಂದ್ರಗಳನ್ನು ಆರಂಭಿಸಲು ಆದ್ಯತೆ ನೀಡಲಾಗಿದೆ. ಅತಿ ಹಿಂದುಳಿದ ಪ್ರದೇಶಗಳಲ್ಲಿ ಹೆಚ್ಚಿನ ಸಂಖ್ಯೆಯ ಜನೌಷಧ ಕೇಂದ್ರಗಳನ್ನು ಆರಂಭಿಸಬೇಕು ಎನ್ನುವುದು ಸರ್ಕಾರದ ಉದ್ದೇಶವಾಗಿದೆ. ಈ ನಿಟ್ಟಿನಲ್ಲಿ ರಾಜ್ಯದಲ್ಲಿ 300 ಕ್ಕೂ ಹೆಚ್ಚು ಜನ ಔಷಧ ಮಳಿಗೆಗಳು ಮತ್ತು ಉಗ್ರಾಣಗಳನ್ನು ತೆರೆಯಲಾಗುವುದು ಎಂದು ತಿಳಿಸಿದ್ದಾರೆ.
ಈಗಾಗಲೇ ಅನೇಕ ಕಡೆಗಳಲ್ಲಿ ಜನೌಷಧ ಮಳಿಗೆಗಳಿಂದ ಬಡ ಜನರಿಗೆ ಅನುಕೂಲವಾಗುತ್ತದೆ. ಕಡಿಮೆ ದರದಲ್ಲಿ ಗುಣಮಟ್ಟದ ಔಷಧ, ಆರೋಗ್ಯಸೇವೆ ಸಿಗಬೇಕೆನ್ನುವುದು ಯೋಜನೆಯ ಉದ್ದೇಶವಾಗಿದೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…