ಬೆಂಗಳೂರು : “ರಾಜ್ಯದ ಪಶು ಆಸ್ಪತ್ರೆಗಳಲ್ಲಿ ಖಾಲಿ ಇರುವ 600 ಪಶು ವೈದ್ಯರ ನೇರ ನೇಮಕಾತಿ ಮಾಡಿಕೊಳ್ಳಲು ಕ್ರಮ ತೆಗೆದುಕೊಳ್ಳಲಾಗಿದೆ” ಎಂದು ಪಶು ಸಂಗೋಪನಾ ಸಚಿವ ಪ್ರಭು ಚವ್ಹಾಣ್ ಹೇಳಿದ್ದಾರೆ.
ಈ ಕುರಿತು ಮಾತನಾಡಿದ ಅವರು, “ರಾಜ್ಯದ ಗ್ರಾಮ ಸೇರಿದಂತೆ ಜಿಲ್ಲಾ ಹಾಗೂ ತಾಲೂಕು ಮಟ್ಟದಲ್ಲಿ ಪಶಿ ಚಿಕಿತ್ಸಾಲಯಗಳಲ್ಲಿ ವೈದ್ಯರು ಸೇರಿದಂತೆ ವಿವಿಧ ಹಂತದ ಹುದ್ದೆಗಳು ಖಾಲಿ ಇವೆ. 600 ವೈದ್ಯರ ನೇಮಕಾತಿ ಬಗ್ಗೆ ಈಗಾಗಲೇ ಸಿಎಂ ಬಸವರಾಜ ಬೊಮ್ಮಾಯಿ ಅವರೊಂದಿಗೆ ಚರ್ಚೆ ನಡೆಸಿದ್ದೇನೆ. ಈ ಕುರಿತು ಆರ್ಥಿಕ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಿದ್ದೇನೆ” ಎಂದಿದ್ದಾರೆ.
“1821 ಬೋಧಕ ಹಾಗೂ ಬೋಧಕೇತರ ಹುದ್ದೆಗಳು ಪಶು ವೈದ್ಯಕೀಯ ವಿವಿಯಲ್ಲಿ ಮಂಜೂರಾಗಿವೆ. ಇದರಲ್ಲಿ 1,292 ಹುದ್ದೆಗಳು ಖಾಲಿ ಇವೆ. ಹಾಗಾಗಿ ಸರ್ಕಾರ ಈಗಾಗಲೇ ಖಾಲಿ ಇರುವ ಹುದ್ದೆಗಳಲ್ಲಿ 390 ಬೋಧಕ ಹಾಗೂ 226 ಬೋಧಕೇತರ ಹುದ್ದೆಗಳಿಗೆ ನೇರ ನೇಮಕಾತಿ ಮೂಲಕ ಭರ್ತಿ ಮಾಡಿಕೊಳ್ಳಲು ಅನುಮತಿ ಕಲ್ಪಿಸಿದೆ” ಎಂದು ತಿಳಿಸಿದ್ದಾರೆ.
ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…
ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…
ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…
ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…
ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…
ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…