Featured

ರಾಜ್ಯದಲ್ಲೂ ಗುಜರಾತ್‌ ಮಾದರಿಯಲ್ಲಿ ಒಂದು ಕುಟುಂಬಕ್ಕೆ ಒಂದೇ ಟಿಕೆಟ್‌ , ಹೊಸಬರಿಗೆ ಅವಕಾಶ  – Vishwanews24

ರಾಜ್ಯದಲ್ಲೂ ಗುಜರಾತ್‌ ಮಾದರಿಯಲ್ಲಿ ಒಂದು ಕುಟುಂಬಕ್ಕೆ ಒಂದೇ ಟಿಕೆಟ್‌ , ಹೊಸಬರಿಗೆ ಅವಕಾಶ

ಬೆಳಗಾವಿ: ಕರ್ನಾಟಕದಲ್ಲಿಯೂ ಈ ಬಾರಿ ಗುಜರಾತ್‌ ಮಾದರಿಯಲ್ಲೇ ಬಿಜೆಪಿ ಟಿಕೆಟ್‌ ನೀಡಲಾಗುತ್ತದೆ. ಒಂದು ಕುಟುಂಬದಲ್ಲಿ ಒಬ್ಬರಿಗೇ ಟಿಕೆಟ್‌ ಸಿಗುತ್ತದೆ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದರು.

ಸುದ್ದಿಗಾರರ ಜತೆ ಮಾತನಾಡಿದ ಅವರು, ಗುಜರಾತ್‌ ಮಾದರಿಯಲ್ಲೇ ಹೊಸಬರಿಗೆ ಅವಕಾಶ ನೀಡಬೇಕು.

ಈ ಸಲ ಬಹಳಷ್ಟು ಜನರನ್ನು ಬದಲಾವಣೆ ಮಾಡುತ್ತಾರೆ. ಯಾರ ಮೇಲೆ ಆರೋಪ ಇದೆ ಅಂಥವರನ್ನು ತೆಗೆಯುವುದು, ಒಂದೇ ಕುಟುಂಬದಲ್ಲಿ ಎರಡು ಮೂರು ಟಿಕೆಟ್‌ ಸಿಗುವುದಿಲ್ಲ. ಒಂದು ಕುಟುಂಬದಲ್ಲಿ ಬಹಳ ಜನ ಜಾಕೆಟ್‌ ಹೊಲಿಸಿಕೊಂಡು ಕುಳಿತಿದ್ದಾರೆ. ಅಪ್ಪ-ಮಕ್ಕಳು, ಅಣ್ಣ-ತಮ್ಮ ಅವರಿಗೆ ಟಿಕೆಟ್‌ ಸಿಗುವುದಿಲ್ಲ. ಒಂದು ಕುಟುಂಬಕ್ಕೆ ಒಂದು ಟಿಕೆಟ್‌ ಸಿಗುತ್ತದೆ. ಕರ್ನಾಟಕದ ಬಿಜೆಪಿಯಲ್ಲಿ ಕುಟುಂಬ ರಾಜಕಾರಣಕ್ಕೆ ಬ್ರೇಕ್‌ ಬೀಳುತ್ತದೆ ಎಂದರು.

ಸಂಪುಟ ವಿಸ್ತರಣೆ ಯಾರಿಗೆ ಬೇಕು, ಎಲ್ಲವನ್ನೂ ಬೊಮ್ಮಾಯಿ ಅವರೇ ಇಟ್ಟುಕೊಂಡು ಕೂಡಲಿ. ಹತ್ತಲ್ಲ ಎಲ್ಲ ಖಾತೆಗಳನ್ನೂ ಅವರೇ ಇಟ್ಟುಕೊಂಡಿರಲಿ. 3-4 ತಿಂಗಳು ಉಳಿದಿದೆ. ಅಷ್ಟರಲ್ಲಿ ಏನೂ ಅಭಿವೃದ್ಧಿ ಮಾಡಲು ಆಗುವುದಿಲ್ಲ. ಮುಂದಿನ ಚುನಾವಣೆಯಲ್ಲಿ ಎಲ್ಲರೂ ಮಂತ್ರಿ ಆಗಬೇಕು ಅಂತ ಸುಮ್ಮನಿದ್ದಾರೆ.

ಸಮೀಕ್ಷೆಯಲ್ಲಿ ಬಿಜೆಪಿಗೆ ಹಿನ್ನಡೆ ಆಗುತ್ತಿದೆ ಎಂಬುದು ಸುಳ್ಳು. ಗುಜರಾತ್‌, ಉತ್ತರ ಪ್ರದೇಶದಲ್ಲಿಯೂ ಹೀಗೆಯೇ ಹೇಳಿದರೂ ಬಿಜೆಪಿಯೇ ಗೆದ್ದಿತು. ಕರ್ನಾಟಕದಲ್ಲಿ ಮೋದಿ ಪ್ರವಾಸ ಮಾಡುತ್ತಾರೆ. ಯಡಿಯೂರಪ್ಪ ಅವರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ರಾಷ್ಟ್ರೀಯ ಕಾರ್ಯಕಾರಣಿ ಸದಸ್ಯರನ್ನಾಗಿ ಮಾಡಿದ್ದಾರೆ. ಬೊಮ್ಮಾಯಿ ಮತ್ತು ಯಡಿಯೂರಪ್ಪ ಕ್ಷೇತ್ರ ಸಂಚಾರ ಮಾಡಬೇಕು. ಎಲ್ಲರೂ ತಮ್ಮ ತಮ್ಮ ಕ್ಷೇತ್ರದಲ್ಲಿ ಸಂಚಾರ ಮಾಡುತ್ತಾರೆ. ನಾನು ಕ್ಷೇತ್ರದಲ್ಲಿ ಸಂಚಾರ ಮಾಡುವ ಅಗತ್ಯವಿಲ್ಲ, ರಾಜ್ಯಾದ್ಯಂತ ಸಂಚರಿಸುತ್ತೇನೆ ಎಂದರು.

Vishwa News 24

Recent Posts

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

2 days ago

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ : ಬೆಸ್ಕಾಂ ಸ್ಪಷ್ಟನೆ – vishwanews24

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…

2 days ago

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ – vishwanews24

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…

2 days ago

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಆರೋಪ – vishwanews24

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಗಂಭೀರ…

2 days ago

ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ: ಸಂಸದ ಯದುವೀರ್ ಒಡೆಯರ್ ಆಕ್ಷೇಪ – vishwanews24

ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…

2 days ago

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ – vishwanews24

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…

2 days ago