ರಾಜ್ಯದಲ್ಲೇ ಪ್ರಪ್ರಥಮ – ಮೀನುಗಾರರ ರಕ್ಷಣೆಗೆ ಸಮುದ್ರ ಅಂಬುಲೆನ್ಸ್ ಖರೀದಿ : ಸಿಎಂ ಘೋಷಣೆ – Vishwanews24
ರಾಜ್ಯದಲ್ಲೇ ಪ್ರಪ್ರಥಮ – ಮೀನುಗಾರರ ರಕ್ಷಣೆಗೆ ಸಮುದ್ರ ಅಂಬುಲೆನ್ಸ್ ಖರೀದಿ : ಸಿಎಂ ಘೋಷಣೆ
ಬೆಂಗಳೂರು: ಕಡಲಿಗಿಳಿದು ಮೀನು ಹಿಡಿಯುವ ಮೀನುಗಾರರ ಹಿತರಕ್ಷಣೆಗೆ ಸರ್ಕಾರ ಪ್ರಮುಖ ಆದ್ಯತೆ ನೀಡಿದೆ. ಮೀನುಗಾರರ ರಕ್ಷಣೆಗೆ ಸಮುದ್ರ ಅಂಬುಲೆನ್ಸ್ ಖರೀದಿ ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ ಮಾಡಿದ್ದು, ಇದು ರಾಜ್ಯದಲ್ಲೇ ಪ್ರಪ್ರಥಮವಾಗಿದೆ.
ಇಂದು ತಮ್ಮ 15ನೇ ಬಜಟ್ ಮಂಡನೆ ಮಾಡಿದ ಅವರು, ಮೀನುಗಾರರ ರಕ್ಷಣೆಗೆಂದು ಸಮುದ್ರ ಅಂಬ್ಯುಲೆನ್ಸ್ ಖರೀದಿಗೆ 7 ಕೋಟಿ ರೂ. ಅನುದಾನ ನೀಡಲಾಗುವುದು ಎಂದರು.
ಮೀನುಗಾರಿಕೆ ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಗೆ ಮುಂದಿನ ವರ್ಷಗಳಲ್ಲಿ 3,000 ಕೋಟಿ ರೂ.ಗಳಷ್ಟು ಬೃಹತ್ ಗಾತ್ರದ ವಿವಿಧ ಯೋಜನೆಗಳನ್ನು ಅನುಷ್ಠಾನಕ್ಕೆ ತರಲಾಗುವುದು. ಮತ್ಸ ಆಶಾಕಿರಣ ಯೋಜನೆಯಡಿ ಕರಾವಳಿ ಮೀನುಗಾರರ ಪರಿಹಾರದ ರಾಜ್ಯದ ಪಾಲು 3,000 ರೂ. ಗಳಿಗೆ ಹೆಚ್ಚಳ ಮಾಡುವುದಾಗಿ ಸಿಎಂ ತಿಳಿಸಿದರು.
ವಿವಿಧ ವಸತಿ ಯೋಜನೆಗಳಡಿ 10,000 ವಸತಿರಹಿತ ಮೀನುಗಾರರಿಗೆ ಮನೆ ನಿರ್ಮಿಸಲು ಸಹಾಯಧನ ನೀಡಲಾಗುವುದು ಎಂದರು.
