Featured

ರಾಜ್ಯದಲ್ಲೇ ಮೊದಲ ಬಾರಿಗೆ ʻಟ್ರಾನ್ಸ್‌ಜೆಂಡರ್ ಸಮುದಾಯ : 160 ಮನೆಗಳಿಗೆ ಚಾಲನೆ ನೀಡಿದ ಸಚಿವ ವಿ ಸೋಮಣ್ಣ  – Vishwanews24

ರಾಜ್ಯದಲ್ಲೇ ಮೊದಲ ಬಾರಿಗೆ ʻಟ್ರಾನ್ಸ್‌ಜೆಂಡರ್ ಸಮುದಾಯ : 160 ಮನೆಗಳಿಗೆ ಚಾಲನೆ ನೀಡಿದ ಸಚಿವ ವಿ ಸೋಮಣ್ಣ

ಕೆಂಗೇರಿ: ರಾಜ್ಯದಲ್ಲೇ ಮೊದಲ ಬಾರಿಗೆ ಮಂಗಳಮುಖಿಯರಿಗಾಗಿಯೇ (ಟ್ರಾನ್ಸ್‌ಜೆಂಡರ್ ಸಮುದಾಯ) ಪ್ರತ್ಯೇಕ ವಸತಿ ಯೋಜನೆಗೆ ಚಾಲನೆ ನೀಡಲಾಗಿದೆ.

ರಾಮೋಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಾಳಿಗೊಂಡನಹಳ್ಳಿ ಸರ್ವೆ ನಂಬರ್‌ 26ರಲ್ಲಿ ‘ಮಂಗಳ ಗ್ರಾಮ’ ಕಾಮಗಾರಿಗೆ ವಸತಿ ಸಚಿವ ವಿ.ಸೋಮಣ್ಣ ಗುದ್ದಲಿಪೂಜೆ ನೆರವೇರಿಸಿದರು.

ಬಳಿಕ ಮಾತನಾಡಿದ ಅವರು, ‘ಕರ್ನಾಟಕ ಕೊಳೆಗೇರಿ ಅಭಿವೃದ್ಧಿ ಮಂಡಳಿ ವತಿಯಿಂದ 20 ಕೋಟಿ ರೂ. ವೆಚ್ಚದಲ್ಲಿ ವಸತಿ ಸಮುಚ್ಚಯ ನಿರ್ಮಿಸಲಾಗುತ್ತಿದೆ. ಸುಮಾರು 2 ಎಕರೆ 20 ಗುಂಟೆ ವಿಸ್ತೀರ್ಣದ ಜಾಗದಲ್ಲಿ 160 ಮನೆಗಳನ್ನು ನಿರ್ಮಿಸಲಾಗುವುದು ಎಂದರು. ‘ಯೋಜನೆ ಅನುಷ್ಠಾನಕ್ಕಾಗಿ ಬೆಂಗಳೂರು ನಗರ ಜಿಲ್ಲಾಧಿಕಾರಿ ಭೂಮಿಯನ್ನು ಕೊಳಚೆ ಅಭಿವೃದ್ಧಿ ಮಂಡಳಿಗೆ ಹಸ್ತಾಂತರಿಸಿದ್ದಾರೆ. ಸಂಪರ್ಕ ರಸ್ತೆ, ಬೀದಿ ದೀಪದಂತಹ ಮೂಲಸೌಕರ್ಯಗಳನ್ನು ಕಲ್ಪಿಸಲಾಗುವುದು. ಒಂದು ವರ್ಷದ ಒಳಗಾಗಿ ಕಾಮಗಾರಿ ಪೂರ್ಣಗೊಳಿಸಲು ಸೂಚಿಸಿದ್ದೇನೆ’ ಎಂದರು.

 

ಕರ್ನಾಟಕ ಕೊಳೆಗೇರಿ ಅಭಿವೃದ್ಧಿ ಮಂಡಳಿ ಆಯುಕ್ತ ಬಿ ವೆಂಕಟೇಶ್‌, ಕರ್ನಾಟಕ ತೃತೀಯ ಲಿಂಗಿಗಳ ಸಂಘದ ಅಧ್ಯಕ್ಷೆ ಕ್ಷಮಾ, ಕರ್ನಾಟಕ ಕೊಳೆಗೇರಿ ಅಭಿವೃದ್ಧಿ ಮಂಡಳಿ ನಿರ್ದೇಶಕ (ಬೆಂಗಳೂರು ವೃತ್ತ) ಎನ್‌. ಪಿ ಬಾಲರಾಜ್‌, ಕಾರ್ಯಪಾಲಕ ಅಭಿಯಂತರ ಸಿ. ಕೆ ರವಿಕುಮಾರ್‌, ಸಮತಾ ಸೈನಿಕ ದಳದ ಉಪಾಧ್ಯಕ್ಷ ಪಿಳ್ಳರಾಜ್‌,ಬಸಣ್ಣ ಮತ್ತಿತರರು ಉಪಸ್ಥಿತರಿದ್ದರು.

Vishwa News 24

Recent Posts

ಕಡಬ: ಚಿನ್ನದ ತೂಕ ಹೆಚ್ಚಿಸಿ ಬ್ಯಾಂಕ್‌ ಗೆ ವಂಚನೆಗೆ ಯತ್ನ: ಇಬ್ಬರ ಬಂಧನ – vishwanews24

ಕಡಬ: ಚಿನ್ನದ ತೂಕ ಹೆಚ್ಚಿಸಿ ಬ್ಯಾಂಕ್‌ ಗೆ ವಂಚನೆಗೆ ಯತ್ನ: ಇಬ್ಬರ ಬಂಧನ ಕಡಬ: ಚಿನ್ನಾಭರಣದ ತೂಕವನ್ನು ಕೃತಕವಾಗಿ ಹೆಚ್ಚಿಸಿ…

10 hours ago

ಮಹಾರಾಷ್ಟ್ರ : ಕುಸಿದು ಬಿದ್ದ ರತ್ನಗಿರಿ ರೈಲು ನಿಲ್ದಾಣದ ಛಾವಣಿ ; ತಪ್ಪಿದ ದೊಡ್ಡ ದುರಂತ- vishwanews24

ಮಹಾರಾಷ್ಟ್ರ : ಮಳೆ ಅಬ್ಬರ - ಕುಸಿದು ಬಿದ್ದ ರತ್ನಗಿರಿ ರೈಲು ನಿಲ್ದಾಣದ ಛಾವಣಿ ; ತಪ್ಪಿದ ದೊಡ್ಡ ದುರಂತ…

10 hours ago

ಶಿವಮೊಗ್ಗ: ಬಸ್ ನಿಲ್ದಾಣದಲ್ಲಿ ಚೀಲದೊಳಗೆ ನವಜಾತ ಹೆಣ್ಣು ಮಗು ಪತ್ತೆ  – vishwanews24

ಶಿವಮೊಗ್ಗ: ಬಸ್ ನಿಲ್ದಾಣದಲ್ಲಿ ಚೀಲದೊಳಗೆ ನವಜಾತ ಹೆಣ್ಣು ಮಗು ಪತ್ತೆ  ಶಿವಮೊಗ್ಗ: ನವಜಾತ ಹೆಣ್ಣು ಶಿಶುವೊಂದನ್ನು ಬಸ್ ನಿಲ್ದಾಣದಲ್ಲಿ ಅನಾಥವಾಗಿ…

10 hours ago

ಪಡುಬಿದ್ರಿ : ನಡಿಪಟ್ಟಣದಲ್ಲಿ ಕಡಲು ಕೊರೆತಕ್ಕೆ ತಡೆಗೋಡೆ ನಿರ್ಮಾಣಕ್ಕೆ ಸಚಿವ ಖಾದರ್ ಗೆ ವಿಶ್ವಾಸ್ ಅಮೀನ್ ಮನವಿ – vishwanews24

ಪಡುಬಿದ್ರಿ : ನಡಿಪಟ್ಟಣದಲ್ಲಿ ಕಡಲು ಕೊರೆತಕ್ಕೆ ತಡೆಗೋಡೆ ನಿರ್ಮಾಣಕ್ಕೆ ಸಚಿವ ಖಾದರ್ ಗೆ ವಿಶ್ವಾಸ್ ಅಮೀನ್ ಮನವಿ ಪಡುಬಿದ್ರಿ: ಉಡುಪಿ…

10 hours ago

ಬಂಟ್ವಾಳ : ಬಸ್ಸಿಗೆ ಕಾಯುತ್ತಿದ್ದ ವಿದ್ಯಾರ್ಥಿಗೆ ಚೂರಿ ಇರಿತ – vishwanews24

ಬಂಟ್ವಾಳ : ಬಸ್ಸಿಗೆ ಕಾಯುತ್ತಿದ್ದ ವಿದ್ಯಾರ್ಥಿಗೆ ಚೂರಿ ಇರಿತ ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಇರಾ…

10 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

3 days ago