ರಾಜ್ಯದಾದ್ಯಂತ ಚಡ್ಡಿ ಸುಡುವ ಪ್ರತಿಭಟನೆ ನಡೆಸುತ್ತೇವೆ : ಸಿದ್ದರಾಮಯ್ಯ – Vishwnaews24

ರಾಜ್ಯ ನ್ಯೂಸ್

ಪಠ್ಯಪುಸ್ತಕ ಪರಿಷ್ಕರಣೆ ವಿರುದ್ಧ ಪ್ರತಿಭಟನೆ ನಡೆಸಿದ ಎನ್‌ಎಸ್‌ಯುಐ ಸದಸ್ಯರ ಮೇಲೆ ಮನೆಗೆ ಬೆಂಕಿ ಹಚ್ಚಲು ಬಂ ದ ಆರೋ‍ಪ ಹೊರಿಸಿ ಬಂಧಿಸಲಾಗಿದೆ

ಎನ್‌ಎಸ್‌ಯುಐ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿರುವ ಗೂಂಡಾಗಳನ್ನುತಕ್ಷಣ ಬಂಧಿಸಬೇಕು..

ಬಂಧಿಸದಿದ್ದರೆ ರಾಜ್ಯದಾದ್ಯಂತ ಚಡ್ಡಿ ಸುಡುವ ಪ್ರತಿಭಟನೆ ನಡೆಸುತ್ತೇವೆ..

ಬೆಂಗಳೂರು: ‘ತಿಪಟೂರಿನಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್‌ ಮನೆ ಎದುರು ಪ್ರತಿಭಟನೆ ನಡೆಸಿದ ಎನ್‌ಎಸ್‌ಯುಐ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿರುವ ಗೂಂಡಾಗಳನ್ನು ಬಂಧಿಸದಿದ್ದರೆ ರಾಜ್ಯದಾದ್ಯಂತ ಚಡ್ಡಿ ಸುಡುವ ಪ್ರತಿಭಟನೆ ನಡೆಸುತ್ತೇವೆ’ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಆರ್‌ಎಸ್‌ಎಸ್‌ನವರು ಹಿಂದೆ ಚಡ್ಡಿ ಹಾಕುತ್ತಿದ್ದರು. ಈಗ ಪ್ಯಾಂಟ್‌ ಹಾಕುತ್ತಿದ್ದಾರೆ. ಪಠ್ಯಪುಸ್ತಕ ಪರಿಷ್ಕರಣೆ ವಿರುದ್ಧ ಪ್ರತಿಭಟನೆ ನಡೆಸಿದ ಎನ್‌ಎಸ್‌ಯುಐ ಸದಸ್ಯರು ಸಾಂಕೇತಿಕವಾಗಿ ಒಂದು ಚಡ್ಡಿ ಸುಟ್ಟಿದ್ದರು. ಅವರ ಮೇಲೆ ಮನೆಗೆ ಬೆಂಕಿ ಹಚ್ಚಲು ಬಂ ದ ಆರೋ‍ಪ ಹೊರಿಸಿ ಬಂಧಿಸಲಾಗಿದೆ. ಇದಕ್ಕೆ ಗೃಹ ಸಚಿವ ಆರಗ ಜ್ಞಾನೇಂದ್ರ ಒತ್ತಡವೇ ಕಾರಣ’ ಎಂದರು.

‘ರೋಹಿತ್‌, ಮಂಜು ಎಂಬ ರೌಡಿಗಳು ಪ್ರತಿಭಟನಾಕಾರರ ಮೇಲೆ ಹಲ್ಲೆ ನಡೆಸಿದ್ದಾರೆ. ಅವರ ವಿರುದ್ಧ ಮೊಕದ್ದಮೆ ದಾಖಲಿಸಿ, ತಕ್ಷಣ ಬಂಧಿಸಬೇಕು. ಹಲ್ಲೆಕೋರರ ವಿರುದ್ಧ ಕ್ರಮ ಜರುಗಿಸದೇ ಇದ್ದರೆ ರಾಜ್ಯದಾದ್ಯಂತ ಬೀದಿಗಿಳಿದು ಹೋರಾಟ ನಡೆಸುತ್ತೇವೆ’ ಎಂದು ಹೇಳಿದರು.

ಪ್ರತಿಭಟನಾಕಾರರು ಸಚಿವರ ಮನೆಯ ಒಳಗೆ ಪ್ರವೇಶ ಮಾಡಿರಲಿಲ್ಲ. ಸಾಂಕೇತಿಕವಾಗಿ ಪ್ರತಿಭಟನೆ ನಡೆಸಿದ್ದಾರೆ. ಅದನ್ನೇ ತಿರುಚಿ ಸುಳ್ಳು ಆರೋಪ ಹೊರಿಸಲಾಗಿದೆ ಎಂದು ದೂರಿದರು.

ಮಂಗಳೂರು: ಜಿಲ್ಲೆಯ ಎಲ್ಲಾ ಬಸ್ಸುಗಳ ನಾಮಫಲಕ ಮತ್ತು ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಕನ್ನಡದಲ್ಲೇ ನಮೂದಿಸುವಂತೆ ಸೂಚನೆ – Vishwanews24

Leave a Reply