ಬೆಂಗಳೂರು: ‘ತಿಪಟೂರಿನಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಮನೆ ಎದುರು ಪ್ರತಿಭಟನೆ ನಡೆಸಿದ ಎನ್‌ಎಸ್‌ಯುಐ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿರುವ ಗೂಂಡಾಗಳನ್ನು ಬಂಧಿಸದಿದ್ದರೆ ರಾಜ್ಯದಾದ್ಯಂತ ಚಡ್ಡಿ ಸುಡುವ ಪ್ರತಿಭಟನೆ ನಡೆಸುತ್ತೇವೆ’ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಆರ್‌ಎಸ್‌ಎಸ್‌ನವರು ಹಿಂದೆ ಚಡ್ಡಿ ಹಾಕುತ್ತಿದ್ದರು. ಈಗ ಪ್ಯಾಂಟ್ ಹಾಕುತ್ತಿದ್ದಾರೆ. ಪಠ್ಯಪುಸ್ತಕ ಪರಿಷ್ಕರಣೆ ವಿರುದ್ಧ ಪ್ರತಿಭಟನೆ ನಡೆಸಿದ ಎನ್‌ಎಸ್‌ಯುಐ ಸದಸ್ಯರು ಸಾಂಕೇತಿಕವಾಗಿ ಒಂದು ಚಡ್ಡಿ ಸುಟ್ಟಿದ್ದರು. ಅವರ ಮೇಲೆ ಮನೆಗೆ ಬೆಂಕಿ ಹಚ್ಚಲು ಬಂ ದ ಆರೋಪ ಹೊರಿಸಿ ಬಂಧಿಸಲಾಗಿದೆ. ಇದಕ್ಕೆ ಗೃಹ ಸಚಿವ ಆರಗ ಜ್ಞಾನೇಂದ್ರ ಒತ್ತಡವೇ ಕಾರಣ’ ಎಂದರು.
‘ರೋಹಿತ್, ಮಂಜು ಎಂಬ ರೌಡಿಗಳು ಪ್ರತಿಭಟನಾಕಾರರ ಮೇಲೆ ಹಲ್ಲೆ ನಡೆಸಿದ್ದಾರೆ. ಅವರ ವಿರುದ್ಧ ಮೊಕದ್ದಮೆ ದಾಖಲಿಸಿ, ತಕ್ಷಣ ಬಂಧಿಸಬೇಕು. ಹಲ್ಲೆಕೋರರ ವಿರುದ್ಧ ಕ್ರಮ ಜರುಗಿಸದೇ ಇದ್ದರೆ ರಾಜ್ಯದಾದ್ಯಂತ ಬೀದಿಗಿಳಿದು ಹೋರಾಟ ನಡೆಸುತ್ತೇವೆ’ ಎಂದು ಹೇಳಿದರು.
ಪ್ರತಿಭಟನಾಕಾರರು ಸಚಿವರ ಮನೆಯ ಒಳಗೆ ಪ್ರವೇಶ ಮಾಡಿರಲಿಲ್ಲ. ಸಾಂಕೇತಿಕವಾಗಿ ಪ್ರತಿಭಟನೆ ನಡೆಸಿದ್ದಾರೆ. ಅದನ್ನೇ ತಿರುಚಿ ಸುಳ್ಳು ಆರೋಪ ಹೊರಿಸಲಾಗಿದೆ ಎಂದು ದೂರಿದರು.
ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…
ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…
ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…
ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…
ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…
ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…