’ರೈತರ ಸಾಲದ ಜೊತೆಗೆ ಖಾಸಗಿ ಸಾಲವನ್ನೂ ಮನ್ನಾ ಮಾಡುವುದಾಗಿ ಕುಮಾರಸ್ವಾಮಿ ಘೋಷಿಸಿದ್ದಾರೆ. ಕೊಟ್ಟ ಭರವಸೆಗಳನ್ನು ಈಡೇರಿಸದಿದ್ದರೆ, ರಾಜ್ಯವನ್ನು ಬಂದ್ ಮಾಡಿ ಪ್ರತಿಭಟನೆ ಮಾಡುತ್ತೇವೆ’ ಎಂದು ಬಿ.ಎಸ್.ಯಡಿಯೂರಪ್ಪ ಎಚ್ಚರಿಕೆ ನೀಡಿದರು.
‘ಎಚ್. ಡಿ. ಕುಮಾರಸ್ವಾಮಿ ಪ್ರಮಾಣ ವಚನ ಸ್ವೀಕಾರ ಮಾಡುತ್ತಿರುವ ಈ ದಿನ ರಾಜ್ಯಕ್ಕೇ ಕರಾಳ ದಿನ. ಹೀಗಾಗಿ ಕಪ್ಪು ಪಟ್ಟಿ ಧರಿಸಿ ನಾವು ಹೋರಾಟ ಮಾಡುತ್ತಿದ್ದೇವೆ’ ಎಂದರು.
‘ಜೆಡಿಎಸ್—ಕಾಂಗ್ರೆಸ್ ಅಪವಿತ್ರ ಮೈತ್ರಿಯನ್ನು ಜನ ಅಪಹಾಸ್ಯ ಮಾಡುತ್ತಿದ್ದಾರೆ. ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಅವರೇ ಕರ್ನಾಟಕದ ಜನ ನಿಮ್ಮನ್ನು ಸಂಪೂರ್ಣವಾಗಿ ತಿರಸ್ಕರಿಸಿದ್ದಾರೆ. ಇನ್ನು ಯಾವ ಮುಖ ಇಟ್ಟುಕೊಂಡು ಇಲ್ಲಿಗೆ ಬರ್ತಿದ್ದೀರ’ ಎಂದು ಪ್ರಶ್ನಿಸಿದರು.
‘ಬಹುಮತ ಸಿಗದಿದ್ದರೆ ವಿರೋಧ ಪಕ್ಷದಲ್ಲಿ ಕೂರುವುದಾಗಿ ಹೇಳಿದ್ದ ದೇವೇಗೌಡ ಈಗ ಮಾಡಿದ್ದೇನು? ತಾಕತ್ತಿದ್ದರೆ, ಈಗಲೂ ಜನರ ಮುಂದೆ ಹೋಗೋಣ ಬನ್ನಿ. ಬಿಜೆಪಿ 150 ಕ್ಷೇತ್ರಗಳಲ್ಲಿ ಗೆಲುವು ಪಡೆಯದಿದ್ದರೆ ನನ್ನ ಹೆಸರು ಬದಲಿಸಿಕೊಳ್ಳುತ್ತೇನೆ’ ಎಂದು ಸವಾಲು ಹಾಕಿದರು.
ಜೆಡಿಎಸ್ ಮತ್ತು ಕಾಂಗ್ರೆಸ್ ಅಪವಿತ್ರ ಮೈತ್ರಿ ಮಾಡಿಕೊಂಡಿವೆ ಎಂದು ಟೀಕಿಸಿ ಬಿಜೆಪಿ ಬೆಂಗಳೂರಿನಲ್ಲಿ ಜನಮತ ವಿರೋಧಿ ದಿನ ಆಚರಣೆ ನಡೆಸಿತು.ಕಪ್ಪು ಪಟ್ಟಿ ತೊಟ್ಟು ಹಲವು ಮುಖಂಡರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು. ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳ ವಿರುದ್ಧ ಧಿಕ್ಕಾರ ಕೂಗಿದರು. ಈ ವೇಳೆ ಬಿ.ಎಸ್. ಯಡಿಯೂರಪ್ಪ, ಆರ್.ಅಶೋಕ, ಶೋಭಾಕರಂದ್ಲಾಜೆ, ರವಿಕುಮಾರ್ ಭಾಗಿಯಾಗಿದ್ದರು.
ರಾಜ್ಯದ ವಿವಿಧ ಕಡೆಗಳಲ್ಲೂ ಬಿಜೆಪಿ ಜನಮತ ವಿರೋಧಿ ದಿನ ಆಚರಣೆ ನಡೆಸಿತು.
ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಡುಪಿ: ದಕ್ಷಿಣ ಕನ್ನಡ ಮೊಗವೀರ ಮಹಾಜನ…
ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ - ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! ಬೆಂಗಳೂರು : ವಿದ್ಯಾರ್ಥಿಗಳ…
ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ ಬೆಂಗಳೂರು: ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ (ಕ್ಷೇಮಾಭಿವೃದ್ಧಿ) ಕಾಯ್ದೆ ಜಾರಿಗೊಂಡಿರುವ…
ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು ಬೆಂಗಳೂರಿನಿಂದ ಆಗಮಿಸಿದ್ದ ನಾಲ್ವರು ಸ್ನೇಹಿತರು ಚಿಕ್ಕಮಗಳೂರು: ತುಂಗಾ ನದಿಯಲ್ಲಿ…
ಸಂಪಾದನೆ ಮಾಡಿರೋ ಹಣವನ್ನ ಜನರಿಗೆ ಕೊಟ್ರೆ 2028ಕ್ಕೂ ಡಿಕೆ ಶಿ ಸಿಎಂ ಆಗಬಹುದು : ಹೆಚ್.ಡಿ ಕುಮಾರಸ್ವಾಮಿ ಬೆಂಗಳೂರು: ಡಿಕೆ…
ತುಳು ಭಾಷೆಗೆ ಅಧಿಕೃತ ಮಾನ್ಯತೆ: ದಶಕಗಳ ಹೋರಾಟಕ್ಕೆ ಡಿ.ಕೆ. ಶಿವಕುಮಾರ್ ಅವರಿಂದ ಫಲ ಸಿಕ್ಕಿದೆ : ರಮೇಶ್ ಕಾಂಚನ್ ಉಡುಪಿ:…