ರಾಜ್ಯ ನ್ಯೂಸ್

ರಾಜ್ಯದಾದ್ಯಂತ ಬಿಜೆಪಿಯಿಂದ ಇಂದು ‘ಜನಮತ ವಿರೋಧಿ ದಿನ’

ರೈತರ ಸಾಲದ ಜೊತೆಗೆ ಖಾಸಗಿ ಸಾಲವನ್ನೂ ಮನ್ನಾ ಮಾಡುವುದಾಗಿ ಕುಮಾರಸ್ವಾಮಿ ಘೋಷಿಸಿದ್ದಾರೆ. ಕೊಟ್ಟ ಭರವಸೆಗಳನ್ನು ಈಡೇರಿಸದಿದ್ದರೆ, ರಾಜ್ಯವನ್ನು ಬಂದ್ ಮಾಡಿ ಪ್ರತಿಭಟನೆ ಮಾಡುತ್ತೇವೆ’ ಎಂದು ಬಿ.ಎಸ್.ಯಡಿಯೂರಪ್ಪ ಎಚ್ಚರಿಕೆ ನೀಡಿದರು.

‘ಎಚ್. ಡಿ. ಕುಮಾರಸ್ವಾಮಿ ಪ್ರಮಾಣ ವಚನ ಸ್ವೀಕಾರ ಮಾಡುತ್ತಿರುವ ಈ ದಿನ ರಾಜ್ಯಕ್ಕೇ ಕರಾಳ ದಿನ. ಹೀಗಾಗಿ ಕಪ್ಪು ಪಟ್ಟಿ ಧರಿಸಿ ನಾವು ಹೋರಾಟ ಮಾಡುತ್ತಿದ್ದೇವೆ’ ಎಂದರು.

‘ಜೆಡಿಎಸ್—ಕಾಂಗ್ರೆಸ್ ಅಪವಿತ್ರ ಮೈತ್ರಿಯನ್ನು ಜನ ಅಪಹಾಸ್ಯ ಮಾಡುತ್ತಿದ್ದಾರೆ. ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಅವರೇ ಕರ್ನಾಟಕದ ಜನ ನಿಮ್ಮನ್ನು ಸಂಪೂರ್ಣವಾಗಿ ತಿರಸ್ಕರಿಸಿದ್ದಾರೆ. ಇನ್ನು ಯಾವ ಮುಖ ಇಟ್ಟುಕೊಂಡು ಇಲ್ಲಿಗೆ ಬರ್ತಿದ್ದೀರ’ ಎಂದು ಪ್ರಶ್ನಿಸಿದರು.

‘ಬಹುಮತ ಸಿಗದಿದ್ದರೆ ವಿರೋಧ ಪಕ್ಷದಲ್ಲಿ ಕೂರುವುದಾಗಿ ಹೇಳಿದ್ದ ದೇವೇಗೌಡ ಈಗ ಮಾಡಿದ್ದೇನು? ತಾಕತ್ತಿದ್ದರೆ, ಈಗಲೂ ಜನರ ಮುಂದೆ ಹೋಗೋಣ ಬನ್ನಿ. ಬಿಜೆಪಿ 150 ಕ್ಷೇತ್ರಗಳಲ್ಲಿ ಗೆಲುವು ಪಡೆಯದಿದ್ದರೆ ನನ್ನ ಹೆಸರು ಬದಲಿಸಿಕೊಳ್ಳುತ್ತೇನೆ’ ಎಂದು ಸವಾಲು ಹಾಕಿದರು.

ಜೆಡಿಎಸ್ ಮತ್ತು ಕಾಂಗ್ರೆಸ್ ಅಪವಿತ್ರ ಮೈತ್ರಿ ಮಾಡಿಕೊಂಡಿವೆ ಎಂದು ಟೀಕಿಸಿ ಬಿಜೆಪಿ ಬೆಂಗಳೂರಿನಲ್ಲಿ ಜನಮತ ವಿರೋಧಿ ದಿನ ಆಚರಣೆ ನಡೆಸಿತು.ಕಪ್ಪು ಪಟ್ಟಿ ತೊಟ್ಟು ಹಲವು ಮುಖಂಡರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು. ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳ ವಿರುದ್ಧ ಧಿಕ್ಕಾರ ಕೂಗಿದರು. ಈ ವೇಳೆ  ಬಿ.ಎಸ್. ಯಡಿಯೂರಪ್ಪ, ಆರ್.ಅಶೋಕ, ಶೋಭಾ‌ಕರಂದ್ಲಾಜೆ, ರವಿಕುಮಾರ್ ಭಾಗಿಯಾಗಿದ್ದರು.

ರಾಜ್ಯದ ವಿವಿಧ ಕಡೆಗಳಲ್ಲೂ ಬಿಜೆಪಿ ಜನಮತ ವಿರೋಧಿ ದಿನ ಆಚರಣೆ ನಡೆಸಿತು.

Vishwa News 24

Recent Posts

ದುಬೈನಲ್ಲಿ ರಸ್ತೆ ಅಪಘಾತ : ಕಿನ್ನಿಗೋಳಿಯ ಯುವತಿ ಸಾವು – vishwanews24

ದುಬೈನಲ್ಲಿ ರಸ್ತೆ ಅಪಘಾತ : ಕಿನ್ನಿಗೋಳಿಯ ಯುವತಿ ಸಾವು ಮಂಗಳೂರು: ದುಬೈನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು, ಕಳೆದ ಕೆಲವು…

9 minutes ago

ಗೋ ರಕ್ಷಣೆಯ ಹೆಸರಿನಲ್ಲಿ ನಡೆಯುತ್ತಿರುವ ದೌರ್ಜನ್ಯಗಳ ವಿರುದ್ಧ ಮಂಗಳೂರಿನಲ್ಲಿ SDPI ಪ್ರತಿಭಟನೆ – vishwanews24

ಬಿಜೆಪಿ ಸಂಘಪರಿವಾರವು ದೇಶದ ಕಾನೂನಿಗೆ ವಿರುದ್ಧವಾಗಿದೆ: ರಿಯಾಝ್ ಫರಂಗಿಪೇಟೆ ಗಲಭೆಕೋರರ ವಿರುದ್ಧದ ಪ್ರಕರಣ ಹಿಂಪಡೆದ ಕ್ರಮಕ್ಕೆ SDPI ತೀವ್ರ ವಿರೋಧ…

30 minutes ago

ಬೆಳ್ತಂಗಡಿ : ಜೂನ್ 1 ರಿಂದ ಟ್ರೆಕ್ಕಿಂಗ್, ಜಲಪಾತಗಳ ಮೇಲಿನ ನಿರ್ಬಂಧ ತೆರವು – vishwanews24

ಬೆಳ್ತಂಗಡಿ : ಜೂನ್ 1 ರಿಂದ ಪ್ರವಾಸಿಗರಿಗೆ ಟ್ರೆಕ್ಕಿಂಗ್, ಜಲಪಾತಗಳ ಮೇಲಿನ ನಿರ್ಬಂಧ ತೆರವು ಅರಣ್ಯ ಇಲಾಖೆಯಿಂದ ಪ್ರವಾಸಿಗರಿಗೆ ಕಟ್ಟುನಿಟ್ಟಿನ…

39 minutes ago

50 ಸಾವಿರ ರೂ. ವರೆಗಿನ ಬೆಳೆ ಸಾಲ ಮನ್ನಾ ಘೋಷಿಸಿದ ವಿಜಯ್‌ – vishwanews24

50 ಸಾವಿರ ರೂ. ವರೆಗಿನ ಬೆಳೆ ಸಾಲ ಮನ್ನಾ ಘೋಷಿಸಿದ ವಿಜಯ್‌ ಚೆನ್ನೈ: ರೈತರಿಗೆ ಭಾರಿ ನೆರವು ಘೋಷಿಸಿರುವ ತಮಿಳುನಾಡು…

57 minutes ago

ನಟ ಧರ್ಮೇಂದ್ರಗೆ ಮರಣೋತ್ತರ ಪದ್ಮವಿಭೂಷಣ : ಪ್ರಶಸ್ತಿ ಸ್ವೀಕರಿಸಿದ ಪತ್ನಿ ಹೇಮಾ ಮಾಲಿನಿ – vishwanews24

ನಟ ಧರ್ಮೇಂದ್ರಗೆ ಮರಣೋತ್ತರ ಪದ್ಮವಿಭೂಷಣ: ಪ್ರಶಸ್ತಿ ಸ್ವೀಕರಿಸಿದ ಪತ್ನಿ ಹೇಮಾ ಮಾಲಿನಿ ನವದೆಹಲಿ: ದಿವಂಗತ ಬಾಲಿವುಡ್ ನಟ ಧರ್ಮೇಂದ್ರ  ಅವರಿಗೆ…

1 hour ago

ಪುತ್ತೂರು: ವಿದ್ಯುತ್ ಶಾಕ್‌ ಹೊಡೆದು ಯುವಕ ಮೃತ್ಯು – vishwanews24

ಪುತ್ತೂರು: ವಿದ್ಯುತ್ ಶಾಕ್‌ ಹೊಡೆದು ಯುವಕ ಮೃತ್ಯು ಪುತ್ತೂರು : ನಿಡಳ್ಳಿ ಗ್ರಾಮದ ಬೋಳುಂಬುಡೆಯಲ್ಲಿ ವಿದ್ಯುತ್ ಶಾಕ್ ಹೊಡೆದು ನೆಲಕ್ಕೆ…

1 hour ago