Featured

ರಾಜ್ಯದಾದ್ಯಂತ ಮುಂದಿನ 5 ದಿನ ಮಳೆ ಸಾಧ್ಯತೆ : ಹವಾಮಾನ ಇಲಾಖೆ ಮುನ್ಸೂಚನೆ  – Vishwanews24

ರಾಜ್ಯದಾದ್ಯಂತ ಮುಂದಿನ 5 ದಿನ ಮಳೆ ಸಾಧ್ಯತೆ : ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ಬೇಸಿಗೆ ಬೇಗೆಯಿಂದ ಕಂಗೆಟ್ಟಿದ್ದ ಕರುನಾಡ ಜನತೆಗೆ ಮಳೆರಾಯ ಗುಡ್‍ನ್ಯೂಸ್‍ನ ಸುಳಿವು ನೀಡಿದ್ದು, ಮುಂದಿನ 5 ದಿನ ರಾಜ್ಯದಾದ್ಯಂತ ಮಳೆಯಾಗುವ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಜ್ಯದಲ್ಲಿ ಬೇಸಿಗೆ ಆರಂಭದಲ್ಲೇ ಜನ ಬಿಸಿಲ ಬೇಗೆಗೆ ಕಂಗೆಟ್ಟಿದ್ದಾರೆ. ಕಳೆದ ಒಂದು ತಿಂಗಳಿನಿಂದ ಸುಡು ಬಿಸಿಲಿಗೆ ಬೆಂದಂತಾಗಿರೋ ಜನಸಾಮಾನ್ಯನಿಗೆ ಸದ್ಯ ಮಳೆಯ ಮುನ್ಸೂಚನೆ ಸಿಕ್ಕಿದ್ದು, ಮುಂದಿನ 5 ದಿನಗಳ ಕಾಲ ರಾಜ್ಯದ ದಕ್ಷಿಣ ಒಳನಾಡಿಗೆ ಹವಾಮಾನ ಇಲಾಖೆ ಮಳೆಯ ಸೂಚನೆ ನೀಡಿದೆ.

ಮಧ್ಯಪ್ರದೇಶದಿಂದ ತಮಿಳುನಾಡಿ ನಲ್ಲಿ 9 ಮೀಟರ್ ಗಾಳಿಯ ದಿಕ್ಕಿನ ಬದಲಾವಣೆ ಹಿನ್ನೆಲೆ ರಾಜ್ಯದ ದಕ್ಷಿಣ ಒಳನಾಡಿಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಒಳನಾಡಿಗೆ ಇಂದಿನಿಂದ 5 ದಿನಕಾಲ ಮಳೆ ಇರಲಿದ್ದು, ಮಂಡ್ಯ, ಮೈಸೂರು, ಕೋಲಾರ, ಹಾಸನ, ಕೊಡಗು, ಚಾಮರಾಜನಗರ, ಸೇರಿದಂತೆ ಹಲವೆಡೆ ಮಳೆಯಾಗಲಿದೆ. ಅದೇ ರೀತಿಯಾಗಿ ಉತ್ತರ ಒಳನಾಡಿನಲ್ಲಿ ಇಂದಿನಿಂದ ಮೂರು ದಿನ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿಯಲ್ಲಿ ಒಣಹವೆ ಮುಂದುವರಿಯಲಿದ್ದು, ಬೆಂಗಳೂರಿನಲ್ಲಿ ಮೂರು ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ. ಈ ಹಿನ್ನೆಲೆ ಮೋಡ ಕವಿದ ವಾತಾವರಣ ಹಾಗೂ ಗಾಳಿಯ ಪ್ರಮಾಣ ಹೆಚ್ಚಾಗಿರಲಿದ್ದು, ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

ಹವಾಮಾನ ಇಲಾಖೆ ಮುನ್ಸೂಚನೆ ಬೆನ್ನಲ್ಲೆ ಬುಧವಾರ ರಾತ್ರಿ ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರ, ಮಂಡ್ಯ ಭಾಗದ ಅನೇಕ ಕಡೆ ಜೋರು ಮಳೆಯಾಗಿದೆ. ಇದರ ಜೊತೆಗೆ ಮುಂದಿನ ಎರಡು ದಿನ ದಕ್ಷಿಣ ಒಳನಾಡಿನ ಹಲವು ಭಾಗಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Vishwa News 24

Recent Posts

ಕಾರ್ಕಳ: ಉದ್ಯಮಿ ನೇಣು ಬಿಗಿದು ಆತ್ಮಹತ್ಯೆ – vishwanews24

ಕಾರ್ಕಳ: ಉದ್ಯಮಿ ಮಂಜುನಾಥ್ ಪೈ ನೇಣು ಬಿಗಿದು ಆತ್ಮಹತ್ಯೆ ಕಾರ್ಕಳ: ಜೋಡು ರಸ್ತೆಯ ಅಪಾರ್ಟ್‌ಮೆಂಟ್ ಕಟ್ಟಡದ ಕೆಳಭಾಗದಲ್ಲಿ ಉದ್ಯಮಿ ಮಂಜುನಾಥ್…

7 minutes ago

ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ ಮಾಡಿದ ಆರೋಪ : ಡಿಐಜಿ ಸೋಮಶೇಖರ್ ಬಂಧನ – vishwanews24

ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ ಮಾಡಿದ ಆರೋಪ : ಡಿಐಜಿ ಸೋಮಶೇಖರ್ ಬಂಧನ ಬೆಂಗಳೂರು:…

19 minutes ago

ಏಷ್ಯನ್‌ ಗೇಮ್ಸ್‌ ಪದಕ ವಿಜೇತರಿಗೆ ಸಿಎಂ ಅಭಿನಂದನೆ : ಚಿನ್ನ ಗೆದ್ದವರಿಗೆ 1 ಕೋಟಿ ನಗದು – vishwanews24

ಏಷ್ಯನ್‌ ಗೇಮ್ಸ್‌ ಪದಕ ವಿಜೇತರಿಗೆ ಸಿಎಂ ಅಭಿನಂದನೆ : ನೇರ ನೇಮಕಾತಿ , ನಗದು ಪುರಸ್ಕಾರ ಭಾರೀ ಹೆಚ್ಚಳ  ಬೆಂಗಳೂರು:…

27 minutes ago

ಬೆಂಗಳೂರು: ನಕಲಿ ಔಷಧಿ ದಂಧೆ: ನಗರದ ಮೂರು ಫಾರ್ಮಾಗಳ ಮೇಲೆ ಎಸ್‌ಐಟಿ ದಾಳಿ – vishwanews24

ನಕಲಿ ಔಷಧಿ ಖರೀದಿಸಿ ಮಾರಾಟ ಮಾಡಿದ್ದ ಫಾರ್ಮಾಗಳ ಮೇಲೆ SIT ದಾಳಿ; ನಕಲಿ ಮಾತ್ರೆಗಳು ಸೀಜ್ ಬೆಂಗಳೂರು: ನಕಲಿ ಔಷಧಿ ದಂಧೆ…

54 minutes ago

ಕಸದ ಚೀಲ – ವಿಭಿನ್ನ ಕಥೆಯ ಮೂಲಕ ಗಮನ ಸೆಳೆದ ಉಡುಪಿಯ ಯುವ ಬರಹಗಾರ ಸುಮಂತ್ ಗಾಣಿಗ – vishwanews24

‘ಕಸದ ಚೀಲ’ದ ಮೂಲಕ ವಿಭಿನ್ನ ಕಥನ – ಉಡುಪಿಯ ಸುಮಂತ್ ಗಾಣಿಗ ಅವರ ಬರವಣಿಗೆಗೆ ಮೆಚ್ಚುಗೆ ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ…

2 hours ago

ಎಲ್ಲಾ ಮಾದರಿಯ ನಾಯಕತ್ವಕ್ಕೆ ರಾಜೀನಾಮೆ ನೀಡಿದ ಹರ್ಮನ್‌ಪ್ರೀತ್ ಕೌರ್ – vishwanews24

ಎಲ್ಲಾ ಮಾದರಿಯ ನಾಯಕತ್ವಕ್ಕೆ ರಾಜೀನಾಮೆ ನೀಡಿದ ಹರ್ಮನ್‌ಪ್ರೀತ್ ಕೌರ್ "ರಕ್ತ, ಬೆವರು ಹರಿಸಿ ಸೇವೆ ಸಲ್ಲಿಸಿದ್ದೇನೆ" : ಸಾಮಾಜಿಕ ಜಾಲತಾಣದಲ್ಲಿ…

2 hours ago