ಬೆಂಗಳೂರು: ರಾಜ್ಯದ ಅತ್ಯಂತ ಶ್ರೀಮಂತ ದೇವಾಲಯ ಎಂಬ ಕೀರ್ತಿಗೆ ಕುಕ್ಕೆ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನ ಭಾಜನವಾಗಿದೆ.
ರಾಜ್ಯದ 10 ಶ್ರೀಮಂತ ದೇವಾಲಯಗಳ ಪಟ್ಟಿಯನ್ನು ಮುಜರಾಯಿ ಇಲಾಖೆ ಬಿಡುಗಡೆ ಮಾಡಿದ್ದು, ಬರೋಬ್ಬರಿ 100 ಕೋಟಿ ಆದಾಯ ಗಳಿಸಿರುವ ಕುಕ್ಕೆ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನ ಅತ್ಯಂತ ಶ್ರೀಮಂತ ದೇವಾಲಯವಾಗಿ ಹೊರಹೊಮ್ಮಿದೆ.
ಕೊಲ್ಲೂರು ಮೂಕಾಂಬಿಕೆ ದೇವಸ್ಥಾನ, ಕಟೀಲು ದುರ್ಗಾ ಪರಮೇಶ್ವರಿ, ಚಾಮುಂಡೇಶ್ವರಿ, ನಂಜನಗೂಡು ಶ್ರೀಕಂಠೇಶ್ವರ, ಸವದತ್ತಿ ಯಲ್ಲವ್ವ, ಮಂದಾರ್ತಿ, ಕೊಪ್ಪಳದ ಗುಳ್ಳಗಮ್ಮ ದೇವಸ್ಥಾನ, ಬೆಂಗಳೂರಿನ ಬನಶಂಕರಿ ದೇವಸ್ಥಾನ ಹಾಗೂ ದೊಡ್ಡಬಳ್ಳಾಪುರದ ಘಾಟಿ ಸುಬ್ರಹ್ಮಣ್ಯ ದೇವಸ್ಥಾನ ಕ್ರಮವಾಗಿ ಎರಡರಿಂದ ಹತ್ತನೆ ಸ್ಥಾನ ಪಡೆದುಕೊಂಡಿವೆ.
ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ಕಳೆದ ವರ್ಷ ಬರೋಬ್ಬರಿ 100 ಕೋಟಿ ಆದಾಯ ಗಳಿಸಿದ್ದರೆ, ಕೊಲ್ಲೂರು ಮೂಕಾಂಬಿಕೆ 92 ಕೋಟಿ, ಕಟೀಲು ದುರ್ಗಾ ಪರಮೇಶ್ವರಿ 40 ರಿಂದ 42 ಕೋಟಿ, ಚಾಮುಂಡೇಶ್ವರಿ ದೇವಸ್ಥಾನ 30 ರಿಂದ 33 ಕೋಟಿ, ನಂಜನಗೂಡಿನ ಶ್ರೀಕಂಠೇಶ್ವರ ದೇವಸ್ಥಾನ 15 ರಿಂದ 20 ಕೋಟಿ, ಸವದತ್ತಿ ಯಲ್ಲವ್ವ 15 ರಿಂದ 17 ಕೋಟಿ,
ಮಂದಾರ್ತಿ 10 ರಿಂದ 12 ಕೋಟಿ, ಗುಳ್ಳಗಮ್ಮ ದೇವಸ್ಥಾನ, ಬೆಂಗಳೂರಿನ ಬನಶಂಕರಿ ಹಾಗೂ ಘಾಟಿ ಸುಬ್ರಹ್ಮಣ್ಯ ದೇವಸ್ಥಾನಗಳು 8 ರಿಂದ 10 ಕೋಟಿ ಆದಾಯ ಗಳಿಸಿ ರಾಜ್ಯದ ಅತಿ ಹೆಚ್ಚು ಆದಾಯವಿರುವ ದೇವಸ್ಥಾನಗಳ ಪಟ್ಟಿಯಲ್ಲಿ ಸ್ಥಾನ ಪಡೆದುಕೊಂಡಿವೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…