Featured

ರಾಜ್ಯದ ಎಲ್ಲಾ ದೇವಸ್ಥಾನಗಳಲ್ಲಿ ಸೆಪ್ಟೆಂಬರ್ 1 ರಿಂದ ಎಲ್ಲಾ ರೀತಿಯ ಸೇವೆ ಪ್ರಾರಂಭಿಸಲು ಚಿಂತನೆ -Vishwanews24

ರಾಜ್ಯದ ಎಲ್ಲಾ ದೇವಸ್ಥಾನಗಳಲ್ಲಿ ಸೆಪ್ಟೆಂಬರ್ 1 ರಿಂದ ಎಲ್ಲಾ ರೀತಿಯ ಸೇವೆ ಪ್ರಾರಂಭಿಸಲು ಚಿಂತನೆ -Vishwanews24

ಬೆಂಗಳೂರು: ರಾಜ್ಯದ ಎಲ್ಲಾ ಮುಜರಾಯಿ ದೇವಸ್ಥಾನಗಳಲ್ಲಿ ಸೆಪ್ಟೆಂಬರ್ 1 ರಿಂದ ಎಲ್ಲಾ ರೀತಿಯ ಸೇವೆಗಳನ್ನು ಪ್ರಾರಂಭಿಸಲು ಚಿಂತನೆ ನಡೆಸಲಾಗಿದೆ ಎಂದು ತಿಳಿದು ಬಂದಿದೆ.

ಕೊರೊನಾ ಸಂದರ್ಭ ರಾಜ್ಯದ ಎಲ್ಲಾ ದೇವಸ್ಥಾನಗಳಿಗೂ ಭಕ್ತರ ಪ್ರವೇಶ ನಿಷೇಧ ಹಾಗೂ ಕೆಲವೊಂದು ಸೇವೆಗಳನ್ನು ಸ್ಥಗಿತಗೊಳಿಸಲಾಗಿತ್ತು. ನಂತರ ಅನ್ಲಾಕ್ ಸಂದರ್ಭ ದೇವಸ್ಥಾನಗಳಲ್ಲಿ ಭಕ್ತರಿಗೆ ಕೇವಲ ದೇವರ ದರ್ಶನಕ್ಕೆ ಅವಕಾಶ ನೀಡಲಾಗಿತ್ತು. ಆದರೆ ದೇವಸ್ಥಾನಕ್ಕೆ ಭಕ್ತರೆ ಆಗಮಿಸದೆ ರಾಜ್ಯದ ಬೊಕ್ಕಸಕ್ಕೂ ಭಾರೀ ಪ್ರಮಾಣದ ಆದಾಯ ಖೋತಾ ಆಗಿತ್ತು.

ಈಗಾಗಲೇ ಸಪ್ಟೆಂಬರ್ 1 ರಿಂದ ಅನ್ ಲಾಕ್ 4.0 ಜಾರಿಯಾಗುವ ಸಾಧ್ಯತೆ ಇರುವ ಹಿನ್ನಲೆ ಈ ಮೂಲಕ ಭಕ್ತರಿಗೆ ಮುಜರಾಯಿ ಇಲಾಖೆಯಿಂದ ಗುಡ್ ನ್ಯೂಸ್ ದೊರೆತಿದ್ದು, ಇನ್ನು ಮುಂದೆ ದೇವಸ್ಥಾನಗಳಲ್ಲಿ ಮಾಮೂಲಿ ಪೂಜೆ ನಡೆಯಲಿದೆ. ಅದು ಕೂಡ ಕೊರೊನಾ ಮಾರ್ಗಸೂಚಿ ಅನ್ವಯವೇ ಎಲ್ಲಾ ಸೇವೆಗಳು ಲಭ್ಯವಾಗಲಿವೆ ಎಂದು ಹೇಳಲಾಗಿದೆ.

ಹೀಗಾಗಿ ಸೆಪ್ಟೆಂಬರ್ 1ರಿಂದಲೇ ದೇವಸ್ಥಾನಗಳಲ್ಲಿ ಎಲ್ಲಾ ಸೇವೆ ಆರಂಭಕ್ಕೆ ಚಿಂತನೆ ನಡೆಸಲಾಗಿದೆ. ಈಗಿದ್ದ ಸೀಮಿತ ಸೇವೆಗಳ ಜೊತೆಗೆ ಹೆಚ್ಚುವರಿ ಸೇವೆಗಳ ಆರಂಭ ಮಾಡುವ ಸಾಧ್ಯತೆಯೂ ಇದೆ. ಕ್ಷೀರಾಭಿಷೇಕ, ಕುಂಕುಮಾರ್ಚನೆ, ತುಲಾಭಾರ, ರುದ್ರಾಭಿಷೇಕ, ಪಂಚಾಮೃತ ಅಭಿಷೇಕ, ಉರುಳು ಸೇವೆ ಹಾಗೂ ಮುಡಿ ಸೇವೆ ಆರಂಭಕ್ಕೆ ಚಿಂತನೆ ಮಾಡಲಾಗಿದೆ. ಈ ವಿಚಾರವನ್ನು ಮುಜರಾಯಿ ಇಲಾಖೆ ಈಗಾಗಲೇ ಸರ್ಕಾರದ ಮುಂದೆ ಪ್ರಸ್ತಾಪ ಮಾಡಿದೆ. ಸರ್ಕಾರ ಒಪ್ಪಿದ್ರೆ ಸದ್ಯದಲ್ಲೇ ದೇವಸ್ಥಾನಗಳಲ್ಲಿ ಎಲ್ಲಾ ಸೇವೆಗೆ ಅವಕಾಶ ನೀಡಲಾಗುವುದು.

Vishwa News 24

Recent Posts

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ – vishwanews24

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು…

8 hours ago

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ – vishwanews24

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ ಬೆಳ್ತಂಗಡಿ: ನಾವೂರು ಗ್ರಾಮದ ಸ್ವಾತಿ…

8 hours ago

ಮಂಗಳೂರು: ನಿಯಮಬಾಹಿರವಾಗಿ ಶಾಲಾ ಮಕ್ಕಳ ಸಾಗಾಟ ; 30 ವಾಹನಗಳ ಮೇಲೆ ಕೇಸು ದಾಖಲು – vishwanews24

ಮಂಗಳೂರು: ನಿಯಮಬಾಹಿರವಾಗಿ ಶಾಲಾ ಮಕ್ಕಳ ಸಾಗಾಟ ; 30 ವಾಹನಗಳ ಮೇಲೆ ಕೇಸು ದಾಖಲು ಮಂಗಳೂರು: ಮಂಗಳೂರು ಪ್ರಾದೇಶಿಕ ಸಾರಿಗೆ…

8 hours ago

ಇಂದು ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಡಿ.ಕೆ.ಶಿವಕುಮಾರ್ ಭೇಟಿ – vishwanews24

ಕಾಪು: ಇಂದು ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಡಿ.ಕೆ.ಶಿವಕುಮಾರ್ ಭೇಟಿ ಉಡುಪಿ: ಐದನೇ ವರ್ಷದ ಉಚ್ಚಿಲ ದಸರಾ ಲಲಿತ ಪಂಚಮಿಯ ಸಂಭ್ರಮ…

8 hours ago

ಉಡುಪಿ ಉಚ್ಚಿಲ ದಸರಾ: ಅ.17ರಂದು ಮಹಾಲಕ್ಷ್ಮೀ ಬ್ಯಾಂಕ್ ವತಿಯಿಂದ ಚಿತ್ರಕಲೆ ಸ್ಪರ್ಧೆ : ಯಶ್ಪಾಲ್ ಸುವರ್ಣ – vishwanews24

ಉಡುಪಿ ಉಚ್ಚಿಲ ದಸರಾ: ಅ.17ರಂದು ಮಹಾಲಕ್ಷ್ಮೀ ಬ್ಯಾಂಕ್ ವತಿಯಿಂದ ಚಿತ್ರಕಲೆ ಸ್ಪರ್ಧೆ : ಯಶ್ಪಾಲ್ ಸುವರ್ಣ ಉಡುಪಿ: ಉಚ್ಚಿಲ ಮಹಾಲಕ್ಷ್ಮೀ…

8 hours ago

ಕೋಳಿಮರಿ ವಿತರಣೆ : ಉಡುಪಿ ತಾಲೂಕಿನ ಗ್ರಾಮೀಣ ರೈತ ಮಹಿಳೆಯರಿಗೆ ಅರ್ಜಿ ಆಹ್ವಾನ – vishwanews24

 ಕೋಳಿಮರಿ ವಿತರಣೆ: ಉಡುಪಿ ತಾಲೂಕಿನ ಗ್ರಾಮೀಣ ರೈತ ಮಹಿಳೆಯರಿಗೆ ಅರ್ಜಿ ಆಹ್ವಾನ  ಉಡುಪಿ: ಕರ್ನಾಟಕ ಸಹಕಾರ ಕುಕ್ಕುಟ ಮಹಾಮಂಡಳ ನಿಯಮಿತ…

8 hours ago