Featured

ರಾಜ್ಯದ ಎಲ್ಲಾ ದೇವಾಲಯಗಳಲ್ಲಿ ನಂದಿನಿ ತುಪ್ಪ ಕಡ್ಡಾಯ: ಮುಜುರಾಯಿ ಇಲಾಖೆ ಆದೇಶ – vishwanews24

ರಾಜ್ಯದ ಎಲ್ಲಾ ದೇವಾಲಯಗಳಲ್ಲಿ ನಂದಿನಿ ತುಪ್ಪ ಕಡ್ಡಾಯ: ಮುಜುರಾಯಿ ಇಲಾಖೆ ಆದೇಶ

ಬೆಂಗಳೂರು: ತಿರುಪತಿ ಲಡ್ಡು ವಿವಾದ ಜೋರಾಗುತ್ತಿದ್ದಂತೆ ಕರ್ನಾಟಕ ಸರ್ಕಾರ ಎಚ್ಚೆತ್ತುಕೊಂಡಿದೆ. ರಾಜ್ಯದ ಎಲ್ಲಾ ದೇಗುಲಗಳಲ್ಲಿ ಪ್ರಸಾದ ತಯಾರಿಸಲು ನಂದಿನಿ ತುಪ್ಪವನ್ನೇ ಬಳಸುವಂತೆ ಮುಜುರಾಯಿ ಇಲಾಖೆ ಆದೇಶ ಹೊರಡಿಸಿದೆ.

ಕರ್ನಾಟಕ ರಾಜ್ಯ ಧಾರ್ಮಿಕ ದತ್ತಿ ಇಲಾಖೆಯ ಅಡಿ ಬರುವ ಎಲ್ಲಾ ಅಧಿಸೂಚಿತ ದೇವಾಲಯಗಳಲ್ಲಿಸೇವೆಗಳಿಗೆ, ದೀಪಗಳಿಗೆ ಮತ್ತು ಎಲ್ಲಾ ವಿಧದ ಪ್ರಸಾದ ತಯಾರಿಕೆಗೆ ಹಾಗೂ ದಾಸೋಹ ಭವನದಲ್ಲಿ ಕಡ್ಡಾಯವಾಗಿ ನಂದಿನಿ ತುಪ್ಪವನ್ನು ಮಾತ್ರ ಬಳಸಬೇಕು. ದೇವಾಲಯಗಳಲ್ಲಿ ತಯಾರಿಸಲಾಗುವ ಪ್ರಸಾದಗಳಲ್ಲಿ ಗುಣಮಟ್ಟವನ್ನು ಕಾಯ್ದುಕೊಳ್ಳಬೇಕೆಂದು ಧಾರ್ಮಿಕ ದತ್ತಿ ಇಲಾಖೆ ಆಯುಕ್ತರು ಆದೇಶದಲ್ಲಿ ಸೂಚಿಸಿದ್ದಾರೆ.

ಕೆಎಂಎಫ್ ಉತ್ಪನ್ನ ನಂದಿನಿ ತುಪ್ಪದ ಗುಣಮಟ್ಟಕ್ಕೆ ಎಲ್ಲರೂ ಉಘೇ ಉಘೇ ಎನ್ನುತ್ತಿದ್ದಾರೆ. ಬಿಡ್‌ ವೇಳೆ ಕಡಿಮೆ ದರಕ್ಕೆ ಗುಣಮಟ್ಟದ ನಂದಿನಿ ತುಪ್ಪ ಪೂರೈಸಲಾಗುವುದಿಲ್ಲ ಎಂದು ಹಿಂದೆ ಸರಿದಿದ್ದನ್ನು ತೆಲುಗುದೇಶಂ ಎಂಎಲ್‌ಸಿ ದೀಪಕ್ ರೆಡ್ಡಿ ನೆನಪಿಸಿಕೊಂಡಿದ್ದಾರೆ.

ತಿರುಮಲ ದೇವಸ್ಥಾನದ ಮಾಜಿ ಪ್ರಧಾನ ಅರ್ಚಕ ರಮಣ ದೀಕ್ಷಿತುಲು ಕೂಡ, ನಂದಿನಿ ತುಪ್ಪದ ಗುಣಮಟ್ಟವನ್ನು ಹೊಗಳಿದ್ದಾರೆ. ಕರ್ನಾಟಕದ ನಂದಿನಿ ತುಪ್ಪವನ್ನು ಲಡ್ಡು ತಯಾರಿಯಲ್ಲಿ ಬಳಸಲು ಮತ್ತೆ ನಿರ್ಧರಿಸಿರುವುದು ಒಳ್ಳೆಯ ಸಂಗತಿ ಎಂದಿದ್ದಾರೆ.

Vishwa News 24

Recent Posts

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ – vishwanews24

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…

14 hours ago

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

2 days ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

2 days ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

2 days ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

2 days ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

2 days ago