ಬೆಂಗಳೂರು: ತಿರುಪತಿ ಲಡ್ಡು ವಿವಾದ ಜೋರಾಗುತ್ತಿದ್ದಂತೆ ಕರ್ನಾಟಕ ಸರ್ಕಾರ ಎಚ್ಚೆತ್ತುಕೊಂಡಿದೆ. ರಾಜ್ಯದ ಎಲ್ಲಾ ದೇಗುಲಗಳಲ್ಲಿ ಪ್ರಸಾದ ತಯಾರಿಸಲು ನಂದಿನಿ ತುಪ್ಪವನ್ನೇ ಬಳಸುವಂತೆ ಮುಜುರಾಯಿ ಇಲಾಖೆ ಆದೇಶ ಹೊರಡಿಸಿದೆ.
ಕರ್ನಾಟಕ ರಾಜ್ಯ ಧಾರ್ಮಿಕ ದತ್ತಿ ಇಲಾಖೆಯ ಅಡಿ ಬರುವ ಎಲ್ಲಾ ಅಧಿಸೂಚಿತ ದೇವಾಲಯಗಳಲ್ಲಿಸೇವೆಗಳಿಗೆ, ದೀಪಗಳಿಗೆ ಮತ್ತು ಎಲ್ಲಾ ವಿಧದ ಪ್ರಸಾದ ತಯಾರಿಕೆಗೆ ಹಾಗೂ ದಾಸೋಹ ಭವನದಲ್ಲಿ ಕಡ್ಡಾಯವಾಗಿ ನಂದಿನಿ ತುಪ್ಪವನ್ನು ಮಾತ್ರ ಬಳಸಬೇಕು. ದೇವಾಲಯಗಳಲ್ಲಿ ತಯಾರಿಸಲಾಗುವ ಪ್ರಸಾದಗಳಲ್ಲಿ ಗುಣಮಟ್ಟವನ್ನು ಕಾಯ್ದುಕೊಳ್ಳಬೇಕೆಂದು ಧಾರ್ಮಿಕ ದತ್ತಿ ಇಲಾಖೆ ಆಯುಕ್ತರು ಆದೇಶದಲ್ಲಿ ಸೂಚಿಸಿದ್ದಾರೆ.
ಕೆಎಂಎಫ್ ಉತ್ಪನ್ನ ನಂದಿನಿ ತುಪ್ಪದ ಗುಣಮಟ್ಟಕ್ಕೆ ಎಲ್ಲರೂ ಉಘೇ ಉಘೇ ಎನ್ನುತ್ತಿದ್ದಾರೆ. ಬಿಡ್ ವೇಳೆ ಕಡಿಮೆ ದರಕ್ಕೆ ಗುಣಮಟ್ಟದ ನಂದಿನಿ ತುಪ್ಪ ಪೂರೈಸಲಾಗುವುದಿಲ್ಲ ಎಂದು ಹಿಂದೆ ಸರಿದಿದ್ದನ್ನು ತೆಲುಗುದೇಶಂ ಎಂಎಲ್‌ಸಿ ದೀಪಕ್ ರೆಡ್ಡಿ ನೆನಪಿಸಿಕೊಂಡಿದ್ದಾರೆ.
ತಿರುಮಲ ದೇವಸ್ಥಾನದ ಮಾಜಿ ಪ್ರಧಾನ ಅರ್ಚಕ ರಮಣ ದೀಕ್ಷಿತುಲು ಕೂಡ, ನಂದಿನಿ ತುಪ್ಪದ ಗುಣಮಟ್ಟವನ್ನು ಹೊಗಳಿದ್ದಾರೆ. ಕರ್ನಾಟಕದ ನಂದಿನಿ ತುಪ್ಪವನ್ನು ಲಡ್ಡು ತಯಾರಿಯಲ್ಲಿ ಬಳಸಲು ಮತ್ತೆ ನಿರ್ಧರಿಸಿರುವುದು ಒಳ್ಳೆಯ ಸಂಗತಿ ಎಂದಿದ್ದಾರೆ.
ಉದ್ಯಾವರ : ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆ ; ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ ಉಡುಪಿ: ಉದ್ಯಾವರ…
ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ ಮಂಗಳೂರು: ಕಾಂಗ್ರೆಸ್ ಪಕ್ಷಕ್ಕಾಗಿ ಕೆಲಸ…
ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್‌ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ…
ಕಾರ್ಕಳ :ಯಕ್ಷರಂಗಾಯಣ ದ ಹೆಸರು ಬದಲಾವಣೆಗೆ ಶಾಸಕ ಸುನಿಲ್ ಕುಮಾರ್ ಆಕ್ರೋಶ ಮೂಲ ಹೆಸರನ್ನೇ ಉಳಿಸಿಕೊಳ್ಳಲು ಸರಕಾರಕ್ಕೆ ಆಗ್ರಹ ಕಾರ್ಕಳ:…
ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ ಕೋಲ್ಕತ್ತಾ : ಪಶ್ಚಿಮ ಬಂಗಾಳದ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಅವರನ್ನು…
ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ ಉಡುಪಿ :…