ರಾಜ್ಯದ ಎಲ್ಲಾ ಶಾಲೆಗಳಲ್ಲಿ ನ್ಯೂಸ್ ಪೇಪರ್ ಓದುವುದು ಕಡ್ಡಾಯ : ಶಿಕ್ಷಣ ಇಲಾಖೆ ಆದೇಶ – vishwanews24

Featured, ರಾಜ್ಯ ನ್ಯೂಸ್

ರಾಜ್ಯದ ಎಲ್ಲಾ ಶಾಲೆಗಳಲ್ಲಿ ನ್ಯೂಸ್ ಪೇಪರ್ ಓದುವುದು ಕಡ್ಡಾಯ : ಶಿಕ್ಷಣ ಇಲಾಖೆ ಆದೇಶ

ಬೆಂಗಳೂರು : ಮಕ್ಕಳಲ್ಲಿ ಸಾಮಾನ್ಯ ಜ್ಞಾನ ಹೆಚ್ಚಿಸಲು ಮತ್ತು ಅವರನ್ನು ಇತ್ತೀಚಿನ ಸುದ್ದಿಗಳ ಬಗ್ಗೆ ತಿಳಿದುಕೊಳ್ಳುವಂತೆ ಮಾಡಲು, ಸಾರ್ವಜನಿಕ ಶಿಕ್ಷಣ ಇಲಾಖೆಯು ರಾಜ್ಯದ ಎಲ್ಲಾ ಶಾಲೆಗಳಲ್ಲಿ ನ್ಯೂಸ್ ಪೇಪರ್ ಓದುವುದನ್ನು ಕಡ್ಡಾಯಗೊಳಿಸಿ ಅಧಿಕೃತ ಸುತ್ತೋಲೆಯನ್ನು ಹೊರಡಿಸಿದೆ.

ಪ್ರಾರ್ಥನೆ ಮುಗಿದ ತಕ್ಷಣ, ಪ್ರತಿದಿನ 10 ರಿಂದ 15 ನಿಮಿಷಗಳ ಕಾಲ ದಿನಪತ್ರಿಕೆಗಳನ್ನು ಓದಿಸುವುದು ಕಡ್ಡಾಯವಾಗಿದೆ. ಈ ನಿಯಮವು ರಾಜ್ಯದ ಸರ್ಕಾರಿ, ಅನುದಾನಿತ, ಖಾಸಗಿ ಮತ್ತು ವಸತಿ ಶಾಲೆಗಳು ಸೇರಿದಂತೆ ಎಲ್ಲಾ ರೀತಿಯ ಶಾಲೆಗಳಿಗೂ ಅನ್ವಯವಾಗುತ್ತದೆ ಎಂದು ಇಲಾಖೆ ತಿಳಿಸಿದೆ.

ಇದನ್ನೂ ಓದಿ:

ಮಂಗಳೂರು: ರೈಲಿನಲ್ಲೇ ಮಗುವಿಗೆ ಜನ್ಮ ಮಹಿಳೆ – vishwanews24

ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗವು ಶಾಲೆಗಳಲ್ಲಿ ಪತ್ರಿಕೆ ಓದುವುದನ್ನು ಕಡ್ಡಾಯಗೊಳಿಸುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆಗೆ ಮನವಿ ಮಾಡಿತ್ತು. ಆಯೋಗದ ಮನವಿಗೆ ಸ್ಪಂದಿಸಿದ ಶಿಕ್ಷಣ ಇಲಾಖೆಯು, ಈ ಮಹತ್ವದ ನಿರ್ಧಾರವನ್ನು ತೆಗೆದುಕೊಂಡು ಆದೇಶ ಹೊರಡಿಸಿದೆ

Leave a Reply