Featured

ರಾಜ್ಯದ ಎಲ್ಲಾ 28 ಸ್ಥಾನಗಳನ್ನು ಗೆಲ್ಲುವ ಪ್ರಯತ್ನದಲ್ಲಿ ನಿರತರಾಗಿದ್ದೇವೆ : ಬಿಎಸ್ ಯಡಿಯೂರಪ್ಪ – Vishwanews24

ಚುನಾವಣೆ ಫಲಿತಾಂಶ ಬಳಿಕ ಯಾರು ಗೋ ಬ್ಯಾಕ್ ಯಾರು ಕಮ್ ಬ್ಯಾಕ್ ಅನ್ನೋದು ಗೊತ್ತಾಗಲಿದೆ : ಬಿಎಸ್ ಯಡಿಯೂರಪ್ಪ

ಚಿತ್ರದುರ್ಗ: ಪ್ರಧಾನಿ ನರೇಂದ್ರ ಮೋದಿ ಮತ್ತು ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಮಾಡಿಕೊಂಡಿರುವ ಮೈತ್ರಿಯ ಕಾರಣ ಎರಡೂ ಪಕ್ಷಗಳ ಕಾರ್ಯಕರ್ತರು ಹೆಚ್ಚಿನ ಹುಮ್ಮಸ್ಸಿನಿಂದ ಕೆಲಸ ಮಾಡುತ್ತಿದ್ದಾರೆ. ರಾಜ್ಯದ ಎಲ್ಲಾ 28 ಸ್ಥಾನಗಳನ್ನು ಗೆಲ್ಲುವ ಪ್ರಯತ್ನದಲ್ಲಿ ನಿರತರಾಗಿದ್ದೇವೆ ಎಂದು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ.

ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಗೋವಿಂದ ಕಾರಜೋಳ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಕ್ಷೇತ್ರದೆಲ್ಲೆಡೆ ಬಿಜೆಪಿಗೆ ಅನುಕೂಲಕರವಾದ ವಾತಾವರಣವಿದೆ, ಕಾರಜೋಳ ಕನಿಷ್ಠ 2 ಲಕ್ಷ ಮತಗಳ ಅಂತರದಿಂದ ಗೆಲ್ಲಲಿದ್ದಾರೆ ಎಂದರು.

ರಾಜ್ಯ ಬಿಜೆಪಿ ಘಟಕದಲ್ಲಿ ಭುಗಿಲೆದ್ದಿರುವ ಭಿನ್ನಮತದ ಕುರಿತು ಪ್ರತಿಕ್ರಿಯೆ ನೀಡಿದ ಅವರು, ಅಸಮಾಧಾನಗೊಂಡಿರುವ ಎಲ್ಲರೊಂದಿಗೆ ಮಾತಾಡಿದ್ದೇವೆ, ಒಂದು ಪಕ್ಷವೆಂದ ಮೇಲೆ ಭಿನ್ನಮತ ಇದ್ದೇಇರುತ್ತೆ, ಎಲ್ಲ ಸರಿಹೋಗುತ್ತದೆ ಎಂದು ಹೇಳಿದರು.

ಇನ್ನು ಬಿಜೆಪಿ ಆಡಳಿತದ ವೇಳೆ‌ 40% ಕಮಿಷನ್ ಹೊಡೆದಿದೆ. ಹೀಗಾಗಿ ಮತ ಕೇಳಲು ಬರುವ ಬಿಜೆಪಿ ನಾಯಕರಿಗೆ ಗೋ ಬ್ಯಾಕ್ ಹೇಳಿ ಎಂದು ಸಿಎಂ ಸಿದ್ದರಾಮಯ್ಯ ಕರೆ ನೀಡಿರುವ ವಿಚಾರಕ್ಕೆ ತಿರುಗೇಟು ನೀಡಿದ ಅವರು, ಚುನಾವಣೆ ಮುಗಿದು ಫಲಿತಾಂಶ ಬರಲಿ, ಯಾರು ಗೋ ಬ್ಯಾಕ್ ಯಾರು ಕಮ್ ಬ್ಯಾಕ್ ಅನ್ನೋದು ಗೊತ್ತಾಗಲಿದೆ ಎಂದು ತಿಳಿಸಿದರು.

Vishwa News 24

Recent Posts

ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ ಶಾಖೆ ವತಿಯಿಂದ ಗಾಂಧಿ ಜಯಂತಿ ಆಚರಣೆ -vishwanews24

ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ ಶಾಖೆ ವತಿಯಿಂದ ಗಾಂಧಿ ಜಯಂತಿ ಆಚರಣೆ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ…

20 hours ago

ಮಂಗಳೂರು : ಅ.2ರಂದು ಜಿಲ್ಲಾ ಯುವ ಕಾಂಗ್ರೆಸ್‌ನಿಂದ ‘ಸದ್ಭಾವನಾ ನಡಿಗೆ’ -vishwanews24

ಮಂಗಳೂರು : ಅ.2ರಂದು ಜಿಲ್ಲಾ ಯುವ ಕಾಂಗ್ರೆಸ್‌ನಿಂದ ‘ಸದ್ಭಾವನಾ ನಡಿಗೆ’ ಮಂಗಳೂರು: ಗಾಂಧಿ ಜಯಂತಿ ಪ್ರಯುಕ್ತ ದ.ಕ.ಜಿಲ್ಲಾ ಯುವ ಕಾಂಗ್ರೆಸ್…

2 days ago

ಕಾಪು : ಶಂಕರಪುರ ದ್ವಾರಕಾಮಾಯಿ ಮಠದಲ್ಲಿ ‘ಪಂಚಾಶತ್ ಜನ್ಮ ವೈಭವ’ -vishwanews24

ಶಂಕರಪುರ ದ್ವಾರಕಾಮಾಯಿ ಮಠದಲ್ಲಿ ‘ಪಂಚಾಶತ್ ಜನ್ಮ ವೈಭವ’ ಅ.3ರಿಂದ ಧಾರ್ಮಿಕ ಕಾರ್ಯಕ್ರಮಗಳ ಚಾಲನೆ.. ವರ್ಷಪೂರ್ತಿ ಗೋಸೇವೆ, ಅನ್ನದಾನ, ಆರೋಗ್ಯ–ಶಿಕ್ಷಣ ಸೇವೆ…

2 days ago

ಸೌಜನ್ಯಾ ಪ್ರಕರಣದ ಮರುತನಿಖೆ: ಮಂಗಳೂರಿಗೆ ಆಗಮಿಸಿದ ನೂತನ ಎಸ್ಐಟಿ ತಂಡ  -vishwanews24

ಸೌಜನ್ಯಾ ಪ್ರಕರಣದ ಮರುತನಿಖೆ: ಮಂಗಳೂರಿಗೆ ಆಗಮಿಸಿದ ನೂತನ ಎಸ್ಐಟಿ ತಂಡ  ಮಂಗಳೂರು : ಸೌಜನ್ಯಾ ಅತ್ಯಾಚಾರ, ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ…

2 days ago

ಪರಪ್ಪನ ಆಗ್ರಹಾರ ಕಾರಾಗೃಹದಲ್ಲಿ ಮತ್ತೆ ಮೊಬೈಲ್ ಫೋನ್, ಸಿಮ್ಕಾರ್ಡ್ ಗಳು ಪತ್ತೆ -vishwanews24

ಪರಪ್ಪನ ಆಗ್ರಹಾರ ಕಾರಾಗೃಹದಲ್ಲಿ ಮತ್ತೆ ಮೊಬೈಲ್ ಫೋನ್, ಸಿಮ್ಕಾರ್ಡ್ ಗಳು ಪತ್ತೆ ಬೆಂಗಳೂರು: ಪರಪ್ಪನ ಆಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಮೊಬೈಲ್…

2 days ago

ಎಂಆರ್‌ಪಿಎಲ್ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ -vishwanews24

ಎಂಆರ್‌ಪಿಎಲ್ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ ಮಂಗಳೂರು: ಎಂಆರ್‌ಪಿಎಲ್‌ನಲ್ಲಿ ನಿನ್ನೆ (ಸೆ.30ರ ಬುಧವಾರ) ನಡೆದ…

2 days ago